ಜೆಡಿಎಸ್ ಗೆ ಮರುಜನ್ಮ: ಯತ್ನಾಳ್ ಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ, ಅಕ್ಟೋಬರ್‌ 19: ಜೆಡಿಎಸ್ ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ಇಂದು ಬೆಳಗ್ಗೆ ರೈತ ಸಭಾಂಗಣ ನವೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ. ನಾನು ಈ ಕ್ಷಣದವರೆಗೂ ಜೆಡಿಎಸ್ - ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ ಎಂದು ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

HD Kumaraswamy Dismisses Yatnal s Claim of Reviving JDS

ನಾನು ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯೇ ನಿಲ್ಲುತ್ತಾರೆ ಎಂದು ಹೇಳಿದೇನೆಯೇ ಹೊರತು, ಜೆಡಿಎಸ್ ಅಭ್ಯರ್ಥಿಯನ್ನು ಹಾಕುತ್ತೇನೆ ಎಂದು ಹೇಳಿಲ್ಲ. ತ್ಯಾಗದ ಬಗ್ಗೆ ಮಾತನಾಡುವವರು ಅವರ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು‌. ನಮ್ಮ ಮೈತ್ರಿಗೆ ಅಡ್ಡಿ ಆಗಬಾರದು ಎಂದು ನಡೆದುಕೊಳ್ಳುತ್ತಿದ್ದೇನೆ. ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ‌? ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ. ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ, ಯಾರಾದ್ರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಅವರು, ಅದರ ಬಗ್ಗೆ ಯಾರಿಗಾದ್ರು ಚಿಂತನೆ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ಕೇಂದ್ರ ಸಚಿವರು ಹೇಳಿದರು. ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತಿದ್ದೇವೆ. ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಇನ್ನೂ ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದು, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಒಂದೇ ಒಂದು ರೂಪಾಯಿ ಬಿಡುಗಡೆ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಬಂದ ಮಳೆ ಇಡೀ ನಗರವನ್ನೇ ಮುಳುಗಿಸಿದೆ. ಬೆಂಗಳೂರು ಹೇಗಿದೆ? ಇಲ್ಲಿನ ಜನರು ಹೇಗಿದ್ದಾರೆ? ಎಷ್ಟು ಮುಳುಗಿದೆ? ಯಾರು ಮುಳುಗಿದ್ದಾರೆ ಎಂದು ಕೇಳುವವರು, ಹೇಳುವವರು ಇಲ್ಲವಾಗಿದೆ ಎಂದು ಶೋಭಾ ಕರಂದ್ಲಾಜೆ ಅವರು ಟೀಕಿಸಿದರು.

ಕರ್ನಾಟಕ ರಾಜ್ಯವು ಒಂದು ಕಾಲದಲ್ಲಿ ಅಭಿವೃದ್ಧಿ ಪರವಾಗಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದ ಅತ್ಯಂತ ಶಾಂತಿಯುತ ರಾಜ್ಯವಾಗಿತ್ತು. ದೇಶದ ಎಲ್ಲ ಭಾಗದ ಜನರು ಬೆಂಗಳೂರಿನಲ್ಲಿ ಬಂದು ವಾಸಿಸಲು ಯೋಚಿಸುತ್ತಿದ್ದರು. ಬೆಂಗಳೂರು ಗಾರ್ಡನ್ ಸಿಟಿ, ಬೆಂಗಳೂರನ್ನು ದೇಶದ ಸಿಂಗಾಪುರ್ ಮಾಡಬೇಕೆಂಬ ಹಲವಾರು ಮಾತುಗಳನ್ನು ಹಲವಾರು ವರ್ಷಗಳಿಂದ ನಾವು ಕೇಳುತ್ತಿದ್ದೆವು. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+