ಶಾಸಕ ನಾಗೇಂದ್ರ ಆರೋಗ್ಯ ವಿಚಾರಿಸಿದ ಸಿಎಂ, ಡಿಕೆಶಿ

ಬೆಂಗಳೂರು, ಜುಲೈ 14 : ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಸಚಿವ ಡಿ. ಕೆ. ಶಿವಕುಮಾರ್ ಶಾಸಕ ನಾಗೇಂದ್ರ ಆರೋಗ್ಯ ವಿಚಾರಿಸಿದರು. ವೈದ್ಯರ ಜೊತೆ ಆರೋಗ್ಯದ ಬಗ್ಗೆ ಮಾತುಕತೆ ನಡೆಸಿದರು.

ಭಾನುವಾರ ಮಧ್ಯಾಹ್ನ ಎಚ್. ಡಿ. ಕುಮಾರಸ್ವಾಮಿ ಮತ್ತು ಡಿ. ಕೆ. ಶಿವಕುಮಾರ್ ಕುಮಾರಕೃಪಾ ಅತಿಥಿ ಗೃಹದಿಂದ ಒಂದೇ ಕಾರಿನಲ್ಲಿ ಹೆಬ್ಬಾಳಕ್ಕೆ ತೆರಳಿದರು. ಆಸ್ಟರ್ ಆಸ್ಪತ್ರೆಗೆ ಭೇಟಿ ನೀಡಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಆರೋಗ್ಯ ವಿಚಾರಿಸಿದರು.

HD Kumaraswamy DK Shivakumar visits Aster hospital

ನಾಗೇಂದ್ರ ಅವರು ಎದೆ ನೋವಿನ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗೇಂದ್ರ ಆರೋಗ್ಯ ವಿಚಾರಿಸಿದ ಬಳಿಕ ವೈದ್ಯರ ಜೊತೆ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ವಿಶ್ವಾಸಮತಯಾಚನೆ ದಿನ ವಿಧಾನಸೌಧಕ್ಕೆ ಬರುವಂತೆ ಆಹ್ವಾನಿಸಿದರು.

ಆಸ್ಪತ್ರೆಯಲ್ಲಿ ಶಾಸಕ ನಾಗೇಂದ್ರ ಸಂಬಂಧಿಕರ ಜೊತೆ ಚರ್ಚೆ ನಡೆಸಿದ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳು ವಿಶ್ವಾಸಮತಯಾಚನೆ ದಿನ ಶಾಸಕರನ್ನು ವಿಧಾನಸೌಧಕ್ಕೆ ಕರೆದುಕೊಂಡು ಬರುವ ಕುರಿತು ಚರ್ಚೆ ನಡೆಸಿದರು.

ಕೆ.ಕೆ.ಗೆಸ್ಟ್‌ ಹೌಸ್‌ಗೆ ಆಗಮಿಸುವುದಕ್ಕೂ ಮೊದಲು ಎಚ್. ಡಿ. ಕುಮಾರಸ್ವಾಮಿ ದೇವೇಗೌಡರನ್ನು ಭೇಟಿಯಾಗಿದ್ದರು. 3 ಗಂಟೆಗಳ ಕಾಲ ಪದ್ಮನಾಭನಗರದ ನಿವಾಸದಲ್ಲಿ ಮಹತ್ವದ ಚರ್ಚೆ ನಡೆಸಿದ ಬಳಿಕ ಗೆಸ್ಟ್‌ ಹೌಸ್‌ಗೆ ಆಗಮಿಸಿದರು.

ಆಸ್ಟರ್ ಆಸ್ಪತ್ರೆಯಿಂದ ಕೆ.ಕೆ.ಗೆಸ್ಟ್‌ ಹೌಸ್‌ಗೆ ಆಗಮಿಸಿದ ಎಚ್. ಡಿ. ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ಡಾ.ಜಿ.ಪರಮೇಶ್ವರ ಅವರ ಜೊತೆ ಸಭೆ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+