ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ ಸಂತಾಪ

Recommended Video

      Ambareesh, Kannada Actor Demise : ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಎಚ್ ಡಿ ಕುಮಾರಸ್ವಾಮಿ

      ಬೆಂಗಳೂರು, ನವೆಂಬರ್ 25 : ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದರು. ಅಭಿಮಾನಿಗಳು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

      ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಕಂಠೀರವ ಸ್ಟೇಡಿಯಂನಲ್ಲಿ ಭಾನುವಾರ ಬೆಳಗ್ಗೆ 8ಗಂಟೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳು ಅಂತಿಮ ನಮನ ಸಲ್ಲಿಸಬಹುದು' ಎಂದರು.

      HD Kumaraswamy

      'ಅಭಿಮಾನಿಗಳು ಸರ್ಕಾರಕ್ಕೆ ಸಹಕಾರ ನೀಡಬೇಕು. ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ಮಂಡ್ಯದಿಂದ ಅಭಿಮಾನಿಗಳು ಬೆಂಗಳೂರಿಗೆ ಬರಲು ವಿಶೇಷ ಕೆಎಸ್ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ' ಎಂದು ಕುಮಾರಸ್ವಾಮಿ ಹೇಳಿದರು.

      ತಮ್ಮ ಸಂತಾಪ ಸಂದೇಶದಲ್ಲಿ ಕುಮಾರಸ್ವಾಮಿ ಅವರು, ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ನನ್ನಲ್ಲಿ ಅಪಾರ ದುಃಖವನ್ನುಂಟುಮಾಡಿದೆ.

      ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಮಹತ್ತರವಾದದ್ದು. ನನ್ನ ಆತ್ಮೀಯರೂ ಆಗಿದ್ದ ಅಂಬರೀಷ್ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅವರ ಅಪಾರ ಅಭಿಮಾನಿಗಳಿಗೂ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

      ಸಂತಾಪ ಸೂಚಿಸಿದ ಕುಮಾರಸ್ವಾಮಿ ಅವರು ಅಂಬರೀಶ್ ಜೊತೆಗಿನ ಹಿಂದಿನ ಫೋಟೋವನ್ನು ಶೇರ್ ಮಾಡಿದ್ದಾರೆ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+