HD Kumaraswamy: ಹುಲಿ ಉಗುರಿನ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಈಗ ಎಲ್ಲಿ ನೋಡಿದರೂ 'ಹುಲಿ ಉಗುರು' ಸದ್ದು ಮಾಡುತ್ತಿದೆ. ಅದರಲ್ಲೂ ಸ್ಟಾರ್ ನಟರು ಹಾಗೂ ರಾಜಕಾರಣಿಗಳಿಗೂ ಹುಲಿ ಉಗುರಿನ ಕಂಟಕವು ಬೆನ್ನು ಹತ್ತಿದೆ. ಈ ಸ್ಥಿತಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ವಿಪಕ್ಷಗಳ ನಾಯಕರು ಮಾಡ್ತಿದ್ದ ಆರೋಪಗಳಿಗೆ ಉತ್ತರವನ್ನ ನೀಡಿದ್ದಾರೆ. ಹಾಗಾದ್ರೆ ಹುಲಿ ಉಗುರಿನ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಹುಲಿ ಉಗುರು ರೀತಿ ಇರುವ ಪೆಂಡೆಂಟ್ ನೈಜವಲ್ಲ. ಅದನ್ನ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಜೆಪಿ ನಗರದ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪೆಂಡೆಂಟ್‌ ಅನ್ನು ಪರಿಶೀಲನೆ ನಡೆಸಿರುವ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಇನ್ನೂ ಹಲವು ವಿಚಾರವನ್ನು ಅವರು ಇದೇ ವೇಳೆ ಪ್ರಸ್ತಾಪ ಮಾಡಿದ್ದಾರೆ.

HD Kumaraswamy Gave Explanation About Tiger Claw Pendant Allegations Against His Son Nikhil

ಹುಲಿ ಉಗುರಿನ ಬಗ್ಗೆ ಕಾಲ್ ಮಾಡಿದ್ದೆ!

ಅಂದಹಾಗೆ ಸದ್ಯ ಚಿತ್ರನಟರು & ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ. ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು. ನಿಖಿಲ್ ಹೆಸರು ಬಂದ ಬಳಿಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕಾಲ್ ಮಾಡಿ ಬಂದು ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ರು, ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನೇ ಚಿನ್ನದ ಅಂಗಡಿಗೆ ಕಳಿಸಿದೆ

ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದ್ರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಅಂದೆ. ಅದರಂತೆ ಅಧಿಕಾರಿಗಳು ಬಂದು ಮಹಜರ್ ಮಾಡಿದ್ದಾರೆ. ನಾನೇ ಅಧಿಕಾರಿಗಳ ಜೊತೆ ಚಿನ್ನದ ಅಂಗಡಿಗೆ ಅದನ್ನ ಕಳಿಸುತ್ತಿದ್ದೇನೆ. ಅದನ್ನ ಬಿಚ್ಚಿ ತೆಗೆದುಕೊಂಡು ಹೋಗಲಿಕ್ಕೆ ಕೂಡ ಸಹಕಾರ ಕೊಟ್ಟಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿ ಪೆಂಡೆಂಟ್ ಸಿಂಥೆಟಿಕ್‌ನಿಂದ ಮಾಡಿದ್ದು. ಸಾಕಷ್ಟು ಜನರ ಬಳಿ ಇಂತಹ ಪೆಂಡೆಂಟ್ ಇರುತ್ತದೆ ಎಂದು ಮಾಜಿ ಸಿಎಂ ಈಗ ಸ್ಪಷ್ಟಪಡಿಸಿದ್ದಾರೆ.

ನಾನು ಬಹಳಷ್ಟು ಸಿನಿಮಾಗಳಲ್ಲಿ ನೋಡಿದ್ದೀನಿ, ನಟರು ಈ ರೀತಿ ಪೆಂಡೆಂಟ್‌ ಧರಿಸಿರುತ್ತಾರೆ. ನಾನು ಕೂಡ ಸಿನಿಮಾ ನಿರ್ಮಾಪಕನೇ. ಅನೇಕರು ಇದು ಸ್ಟೈಲ್ ಆಗಿದೆ ಎಂದು ಧರಿಸುತ್ತಾರೆ. ನಿಖಿಲ್ ಅವರ ಮದುವೆಯಲ್ಲಿ, ಯಾರೋ ಉಡುಗೊರೆ ಕೊಟ್ಟರು ಅಂತ ಹಾಕಿದ್ದು. ಅದನ್ನು ಬಿಟ್ಟರೆ ಅದು ಬೀರುವಿನಲ್ಲಿ ಬಿದ್ದಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

HD Kumaraswamy Gave Explanation About Tiger Claw Pendant Allegations Against His Son Nikhil

ಇದು ಬಂದಿದ್ದು ಎಲ್ಲಿಂದ ಗೊತ್ತಾ?

ವನ್ಯಜೀವಿ ಸಂಕ್ಷರಣಾ ಕಾಯ್ದೆ ಬಗ್ಗೆ ನಮಗೆ ಗೊತ್ತಿದೆ. ಅಂಥ ವಸ್ತುಗಳನ್ನ ಇಟ್ಟುಕೊಳ್ಳುವುದು ಕಾನೂನು ಬಾಹಿರ ಎನ್ನುವ ಅರಿವು ನಮಗಿದೆ. ನಾವು ಅಂಥಾ ಕೆಲಸ ಮಾಡಲ್ಲ. ಹೀಗಾಗಿಯೇ ನಮಗೆ ಯಾವುದೇ ಗಾಬರಿ ಇಲ್ಲ ಆತಂಕ ಇಲ್ಲ. ಅಧಿಕಾರಿಗಳು FSLಗೆ ಕಳಿಸಿ ವಾಸ್ತವವನ್ನ ಪತ್ತೆ ಹಚ್ಚಲಿ. ಇದರಲ್ಲಿ ಅನುಮಾನ ಎನ್ನುವ ಮಾತು ಬರಬಾರದು ಎಂದ ಎಚ್‌ಡಿಕೆ, ಮದುವೆಯ ಸಂದರ್ಭದಲ್ಲಿ ನಿಖಿಲ್ ಅವರಿಗೆ ಉಡುಗೊರೆ ಬಂದ ಪೆಂಡೆಂಟ್ ಇದು. ಸಂಬಂಧಿಕರು ಇದನ್ನ ಕೊಟ್ಟಿದ್ದಾರೆ. ನಿಖಿಲ್ ಅವರು ಒಡವೆ ಹಾಕಲ್ಲ ಅವರಿಗೆ ಒಡವೆ ಶೋಕಿ ಇಲ್ಲ. ಇವತ್ತು ಬೆಳಗ್ಗೆ ನನ್ನ ಸೊಸೆಯರ ಬಳಿ ಕೇಳಿ ಇದನ್ನು ತೆಗೆದುಕೊಂಡೆ ಎಂದು ಸ್ಪಷ್ಟನೆ ನೀಡಿದ್ದಾರೆ ಎಚ್‌ಡಿಕೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+