ದೇವೇಗೌಡರ ಆರೋಗ್ಯ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು, ಅಕ್ಟೋಬರ್‌ 10: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಅನಾರೋಗ್ಯದ ಹಿನ್ನಲೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೂ ದೇವೇಗೌಡರ ಆಸ್ಪತ್ರೆಗೆ ದಾಖಲಾದ ಹಿನ್ನಲೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆತಂಕಕ್ಕೆ ಒಳಗಾಗಿದ್ದರು. ಇದೀಗ ದೇವೇಗೌಡ ಆರೋಗ್ಯ ವಿಚಾರಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಹೊಸ ಅಪ್‌ಡೇಟ್‌ ನೀಡಿದ್ದಾರೆ.

ದೇವೇಗೌಡರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ. ದೇವರ ಮತ್ತು ನಾಡಿನ ಜನರ ಹಾರೈಕೆ ಅವರ ಆರೋಗ್ಯಕ್ಕೆ ಶ್ರೀರಕ್ಷೆಯಾಗಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ಹೇಳಿದ್ದಾರೆ.

HD Kumaraswamy gives update on Deve Gowda s health

ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯತೆ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಜೆಡಿಎಸ್‌ ಹೇಳಿದ್ದೇನು?

ಆತ್ಮೀಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ.. ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕರಾದ ಶ್ರೀ ಹೆಚ್.ಡಿ. ದೇವೇಗೌಡ ಅವರು ಚೇತರಿಸಿಕೊಂಡು ಗುಣಮುಖರಾಗಿದ್ದು ಆರೋಗ್ಯವಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜೆಡಿಎಸ್‌ ರಾಜ್ಯ ಘಟಕ ತಿಳಿಸಿದೆ.

ಇನ್ನೂ ರಾಜ್ಯಸಭೆ ಸದಸ್ಯರು ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಜ್ವರ ಮತ್ತು ಮೂತ್ರದ ಸೋಂಕಿನಿಂದ ಬಳಲುತ್ತಿದ್ದು, ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ. 92 ವರ್ಷದ ದೇವೇಗೌಡರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಕುಟುಂಬದ ಮೂಲಗಳ ಪ್ರಕಾರ, ಇನ್ನೂ ಎರಡು ದಿನಗಳ ಕಾಲ ಚಿಕಿತ್ಸೆಯು ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+