ಕರ್ನಾಟಕ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್

Recommended Video

      ಸರ್ಕಾರೀ ನೌಕರರಿಗೆ ಎಚ್ ಡಿ ಕುಮಾರಸ್ವಾಮಿ ಕೊಟ್ರು ಭರ್ಜರಿ ಗಿಫ್ಟ್ | Oneindia Kannada

      ಬೆಂಗಳೂರು, ಜೂನ್ 18: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಸೋಮವಾರ (ಜೂನ್ 18) ಮಧ್ಯಾಹ್ನದ ವೇಳೆಗೆ ಶುಭ ಸುದ್ದಿ ಸಿಕ್ಕಿದೆ.

      ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಂದಿನ ಬಜೆಟ್ ಗೆ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲೆ ಸರ್ಕಾರಿ ನೌಕರರ ಆಶೋತ್ತರಗಳನ್ನು ಈಡೇರಿಸುವ ಸಲುವಾಗಿ ತುಟ್ಟಿಭತ್ಯೆ ಹೆಚ್ಚಳ ಶಿಫಾರಸ್ಸಿಗೆ ಒಪ್ಪಿಗೆ ಸೂಚಿಸಿದ್ದಾರೆ.

      ನೌಕರರ ಮೂಲ ವೇತನದ 4.25ರಷ್ಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಶೇ 1.75ರಷ್ಟು ಹೆಚ್ಚಳ ಮಾಡಲಾಗಿದೆ. ಜನವರಿ 01, 2018ರಿಂಡ ಪೂರ್ವಾನ್ವಯವಾಗಲಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರವು ಕಳೆದ ದೀಪವಾಳಿ ಹಬ್ಬದ ವೇಳೆಗೆ ಶೇ2ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಿಸಿತ್ತು.

      HD Kumaraswamy government hikes Dearness Allowance


      ಈ ಕೊಡುಗೆಯಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅಂದಾಜು 560 ಕೋಟಿ ರೂ. ಹೆಚ್ಚಿಗೆ ಹೊರೆಯಾಗಲಿದೆ.

      ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.

      HD Kumaraswamy government hikes Dearness Allowance

      ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

      ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+