ಗ್ರಾಮ ವಾಸ್ತವ್ಯಕ್ಕೆ ರೈಲಿನ ಮೂಲಕ ಕುಮಾರಣ್ಣನ ಪ್ರಯಾಣ
Recommended Video
ಬೆಂಗಳೂರು, ಜೂನ್ 11 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆಗಳು ಬಿರುಸಿನಿಂದ ಸಾಗಿವೆ. ಯಾದಗಿರಿ ಜಿಲ್ಲೆಯಿಂದ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.
ಜೂನ್ 21 ಮತ್ತು 22ರಂದು ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ನಡೆಯಲಿದೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಜನರ ಸಮಸ್ಯೆ ಆಲಿಸಲಿರುವ ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜೂನ್ 20ರಂದು ಯಾದಗಿರಿ ಜಿಲ್ಲೆಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನಿಂದ ಯಾದಗಿರಿಗೆ ರೈಲಿನಲ್ಲಿ ಮುಖ್ಯಮಂತ್ರಿಗಳು ಪ್ರಯಾಣ ಬೆಳೆಸಲಿದ್ದಾರೆ. ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ವೇಳಾಪಟ್ಟಿ ಅಂತಿಮಗೊಂಡಿದೆ.
ವೇಳಾಪಟ್ಟಿ ಹೀಗಿದೆ
* ಬೆಂಗಳೂರಿನಿಂದ ಜೂನ್ 20ರಂದು ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣ
* ಯಾದಗಿರಿ ಜಿಲ್ಲೆಯ ಗುರಮಿಟ್ಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಆರಂಭ
* ಗ್ರಾಮದಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಸಾರ್ವಜನಿಕರ ಅಹವಾಲು ಸ್ವೀಕಾರ
* ಸಂಜೆ 6.30ರಿಂದ ಶಾಲಾ ಮಕ್ಕಳು, ರೈತರ ಜೊತೆ ಸಂವಾದ. ಬಳಿಕ ಮಕ್ಕಳು ನಡೆಸಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ.
* ಜೂ. 22ರಂದು ಕಲಬುರಗಿಯ ಅಫ್ಜಲ್ ಪುರದ ಹೆರೂರು ಬಿ ಗ್ರಾಮಕ್ಕೆ ರಸ್ತೆ ಮೂಲಕ ಪ್ರಯಾಣ.
* ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರ ಅಹವಾಲು ಸ್ವೀಕಾರ
* ಸಂಜೆ 6.30ರಿಂದ ಶಾಲಾ ಮಕ್ಕಳೊಂದಿಗೆ ಮತ್ತು ರೈತರೊಂದಿಗೆ ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ
* ಜೂನ್ 23ರಂದು ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ












Click it and Unblock the Notifications