ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಕ್ಕೆ 1 ತಿಂಗಳ ಟಾರ್ಗೆಟ್: ಸರ್ಕಾರಿ ಶಾಲೆಗಳ ದೃಶ್ಯ ವೈಭವ ತೆರೆದಿಟ್ಟ ಕುಮಾರಣ್ಣ!

|
Google Oneindia Kannada News

ಬೆಂಗಳೂರು, ಜುಲೈ 02: ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಹೇಳ ತೀರದಾಗಿದೆ. ಹೀಗೆ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿಗೊಳಿಸುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ.

ಸರ್ಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೆಚ್ ಡಿ ಕುಮಾರಸ್ವಾಮಿ, ಶಾಲೆಗಳ ಪರಿಸ್ತಿತಿಯ ಕುರಿತಾಗಿ ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳ ದೃಶ್ಯವೈಭವ!! ನೋಡಿ ಎಂದು ವ್ಯಂಗ್ಯವಾಡಿದ್ದಾರೆ. ಆ ಮೂಲಕ ಸರ್ಕಾರಕ್ಕೆ ಕೌಂಟರ್ ಕೊಟ್ಟಿದ್ದಾರೆ.

ದೇವೇಗೌಡರು 4 ಜನರ ಮೇಲೆ ಹೋಗೋ ದಿನ ದೂರವಿಲ್ಲ: ರಾಜಣ್ಣನಿಗೆ ಸುಧಾಕರ್ ಸಲಹೆಯೇನು?ದೇವೇಗೌಡರು 4 ಜನರ ಮೇಲೆ ಹೋಗೋ ದಿನ ದೂರವಿಲ್ಲ: ರಾಜಣ್ಣನಿಗೆ ಸುಧಾಕರ್ ಸಲಹೆಯೇನು?

'ಮಾಳಿಗೆಗಳು ಸೋರುತ್ತಿವೆ. ಗೋಡೆಗಳು ಬಣ್ಣಗೆಟ್ಟಿವೆ. ಕಿಟಕಿ, ಬಾಗಿಲು ಹಾಳಾಗಿವೆ. ಕುಡಿಯಲು ನೀರಿಲ್ಲ. ಮಕ್ಕಳಿಗೆ ಶೌಚಾಲಯವೂ ಇಲ್ಲ. ಮಕ್ಕಳ ಜೀವಕ್ಕೆ ಗ್ಯಾರಂಟಿ ಇಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ರಾಜ್ಯದ ಮಕ್ಕಳ ಕಲಿಕೆಯಲ್ಲಿ ಅಲ್ಲೋಲ-ಕಲ್ಲೋಲ

ರಾಜ್ಯದ ಮಕ್ಕಳ ಕಲಿಕೆಯಲ್ಲಿ ಅಲ್ಲೋಲ-ಕಲ್ಲೋಲ

ಬಿಜೆಪಿ ಬಣ್ಣಗೇಡು ವರಸೆಗೆ ಇದು ತಾಜಾ ಉದಾಹರಣೆ. ಹೇಳುವುದು ಒಂದು, ಮಾಡುವುದು ಇನ್ನೊಂದು. ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಅರಾಜಕತೆ ಮಕ್ಕಳ ಕಲಿಕೆಯಲ್ಲಿ ಅಲ್ಲೋಲ-ಕಲ್ಲೋಲ ಎಬ್ಬಿಸಿದೆ. ಪಠ್ಯಕ್ಕೆ ಕೇಸರಿ ಬಳಿದು ಕತ್ತರಿ ಹಾಕುವ ಅಕ್ಷರದ್ರೋಹಿ ಬಿಜೆಪಿ ಸರ್ಕಾರಕ್ಕೆ ಬಣ್ಣಗೆಟ್ಟ ಶಾಲೆಗಳ ಗೋಡೆಗಳೇ ಕಾಣುತ್ತಿಲ್ಲ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಕರ್ನಾಟಕದಲ್ಲಿ 75,675 ಶಾಲಾ ಕೊಠಡಿ ಶಿಥಿಲ

ಕರ್ನಾಟಕದಲ್ಲಿ 75,675 ಶಾಲಾ ಕೊಠಡಿ ಶಿಥಿಲ

ಪತ್ರಿಕೆಯೊಂದು ಬಿಜೆಪಿ ಸರ್ಕಾರದ ಗೋಮುಖವ್ಯಾಘ್ರ ಮುಖವನ್ನು ಬೆತ್ತಲುಗೊಳಿಸಿದೆ. ಸೋರುತ್ತಿರುವ ಶಾಲೆಗಳನ್ನು ಮುಖಕ್ಕೆ ರಾಚುವಂತೆ ತೋರಿಸಿದೆ. ರಾಜ್ಯದಲ್ಲಿ 75,675 ಶಾಲೆ ಕೊಠಡಿಗಳು ಶಿಥಿಲವಾಗಿವೆ. ಇಲ್ಲಿ ಶಿಥಿಲ ಆಗಿರುವುದು ಕರ್ನಾಟಕದ ಹೆಮ್ಮೆ ಎಂದು ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. 224 ವಿಧಾನಸಭೆ ಕ್ಷೇತ್ರಗಳ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಲಕ್ಷಾಂತರ ಮಕ್ಕಳು ಜೀವ ಅಂಗೈಯಲ್ಲಿ ಇಟ್ಟುಕೊಂಡು ಕಲಿಯುತ್ತಿದ್ದಾರೆ. ಅವರಿಗೆ ಶಾಲೆಯೇ ಶಿಕ್ಷೆಯಾಗಿದೆ. ಶಿಕ್ಷಣ ಇಲಾಖೆ ಅದಕ್ಷತೆಯ ಕೂಪ ಎನ್ನುವುದಕ್ಕೆ ಇದೇ ಸಾಕ್ಷಿ. ಶಿಕ್ಷಣ ಸಚಿವರು ಆ ಇಲಾಖೆಯ ಅಧಿಕಾರಿಗಳ ಪರಮ ಬೇಜವಾಬ್ದಾರಿಯ ಪರಾಕಾಷ್ಠೆ ಇದು ಎಂದು ಹೆಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಜೀವಕ್ಕೆ ಬೆಲೆಯಿಲ್ಲವೇ?

ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಜೀವಕ್ಕೆ ಬೆಲೆಯಿಲ್ಲವೇ?

ದುಬಾರಿ ಶುಲ್ಕ ತೆತ್ತು ಖಾಸಗಿ ಶಾಲೆಗಳಿಗೆ ಸೇರಲಾಗದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಸರ್ಕಾರಿ ಶಾಲೆಗಳಲ್ಲೇ ವ್ಯಾಸಂಗ ಮಾಡುತ್ತಿದ್ದಾರೆ. ಈ ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ? ಹೇಳಿ ಶಿಕ್ಷಣ ಸಚಿವರೇ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಶಾಲೆಗಳ ಸುಸ್ಥಿತಿ, ಮಕ್ಕಳ ಸುರಕ್ಷತೆ ಬಗ್ಗೆ ಸುಮ್ಮನಿದ್ದೀರಿ. ಪಠ್ಯದ ಕತ್ತರಿಗೆ ಇರುವಷ್ಟು ಆತುರ ಶಾಲೆ ಕೊಠಡಿಗಳ ರಿಪೇರಿಗೆ ಯಾಕಿಲ್ಲ? ಇಲ್ಲಿ ಶೇ. 40 ಕಮೀಷನ್ ವ್ಯವಹಾರ ಕುದುರಲಿಲ್ಲವೇ? ಭಾರತವನ್ನು #ವಿಶ್ವಗುರು ಮಾಡುವುದು ಎಂದರೆ ಹೀಗೇನಾ? ಹೇಳಿ ಮಾನ್ಯ ಶಿಕ್ಷಣ ಸಚಿವರೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ 3 ವರ್ಷ ಬಿಜೆಪಿ ಸರ್ಕಾರ ಕಡಿದು ಕಟ್ಟೆ ಹಾಕಿದ್ದೇನು?

ರಾಜ್ಯದಲ್ಲಿ 3 ವರ್ಷ ಬಿಜೆಪಿ ಸರ್ಕಾರ ಕಡಿದು ಕಟ್ಟೆ ಹಾಕಿದ್ದೇನು?

ಬಿಜೆಪಿ ಅಧಿಕಾರಕ್ಕೆ ಬಂದು 3 ವರ್ಷ ಮೀರಿದೆ. ಬೊಗಳೆ ಬಿಟ್ಟಿದ್ದು, ಸಮಾಜ ಒಡೆದಿದ್ದು ಬಿಟ್ಟರೆ ಮಾಡಿದ್ದೇನು? ರಾಷ್ಟ್ರೀಯ ಶಿಕ್ಷಣ ನೀತಿ ಎನ್ನುತ್ತೀರಿ, ಪಠ್ಯ ಪರಿಷ್ಕರಣೆ ಮಾಡಿದ್ದೀರಿ. ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರೇ, ಪಠ್ಯಕ್ಕೆ ʼಆಪರೇಷನ್ ಕಮಲʼದ ಒಂದು ಅಧ್ಯಾಯವನ್ನೂ ಸೇರಿಸಬೇಕಿತ್ತು, ಭವ್ಯಭಾರತವನ್ನು ಬೆಳಗಲು!! ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಅಲ್ಲದೇ ತಕ್ಷಣ ರಾಜ್ಯ ಸರ್ಕಾರ ಕ್ರಮ ವಹಿಸಬೇಕು. ಅಧಿಕಾರಿಗಳನ್ನು ಶಾಲೆಗಳಿಗೆ ಅಟ್ಟಿ ರಿಪೇರಿ ಕೆಲಸ ಮಾಡಿಸಿ, ಎಲ್ಲ ಮೂಲಸೌಕರ್ಯ ಒದಗಿಸಬೇಕು. ಒಂದು ಮಗುವಿಗೆ ಅಪಾಯವಾದರೂ ಸುಮ್ಮನಿರುವ ಪ್ರಶ್ನೆ ಇಲ್ಲ. ಒಂದು ತಿಂಗಳೊಳಗೆ ಶಾಲೆಗಳು ಸರಿ ಆಗದಿದ್ದರೆ, ಸದನದ ಒಳಗೆ, ಹೊರಗೆ ಶಿಕ್ಷಣ ಸಚಿವರು ಹೋರಾಟ ಎದುರಿಸಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

English summary
HD Kumaraswamy has given a month deadline to the government to fix the condition of karnataka schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X