• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗ್ರಾಮ ವಾಸ್ತವ್ಯ ಲೇವಡಿ ಮಾಡಿದ ಬಿಜೆಪಿಗೆ ಉತ್ತರ ಕೊಟ್ಟ ಸಿಎಂ

|

ಬೆಂಗಳೂರು, ಜೂನ್ 04 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೂನ್ 21 ರಿಂದ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಪ್ರತಿಪಕ್ಷ ಬಿಜೆಪಿ ಇದನ್ನು ಲೇವಡಿ ಮಾಡಿದೆ. ಇದಕ್ಕೆ ಟ್ವಿಟರ್‌ನಲ್ಲಿ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ.

ಮಂಗಳವಾರ ಎಚ್.ಡಿ.ಕುಮಾರಸ್ವಾಮಿ ಅವರು, 'ನನ್ನ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿ ನಾಯಕರ ಕುಹಕ, ವ್ಯಂಗ್ಯ ಮತ್ತು ಟೀಕೆಗಳನ್ನು ಗಮನಿಸಿದ್ದೇನೆ. ಗ್ರಾಮ ವಾಸ್ತವ್ಯ ಮಾಡಲು ಮಾನವೀಯ ಕಳಕಳಿ, ನೈಜ ಅಂತಃಕರಣ ಇರಬೇಕು. ಗ್ರಾಮ ವಾಸ್ತವ್ಯ ಘೋಷಣೆಗೆ ಜನರಿಂದ ದೊರೆತ ಸ್ಪಂದನೆಯೇ ಬಿಜೆಪಿ ನಾಯಕರಿಗೆ ಉತ್ತರ' ಎಂದು ಟ್ವೀಟ್ ಮಾಡಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಸ್ಥಳ, ದಿನಾಂಕ ಅಂತಿಮ

ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕು, ಜೂನ್ 22ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಗ್ರಾಮ ವಾಸ್ತವ್ಯದ ಮೂಲಕ ಹೊಸ ನಾಟಕ : ಯಡಿಯೂರಪ್ಪ

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಕೆಲವು ಬದಲಾವಣೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕುಮಾರಸ್ವಾಮಿ ಅವರು ವಾಸ್ತವ್ಯ ಹೂಡಲಿದ್ದಾರೆ. ಆದರೆ, ಬಿಜೆಪಿ ಇದನ್ನು ಲೇವಡಿ ಮಾಡಿದ್ದಾರೆ....

ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ ಎಚ್.ಡಿ.ಕುಮಾರಸ್ವಾಮಿ

ಎಚ್.ಡಿ.ಕುಮಾರಸ್ವಾಮಿ ಟ್ವೀಟ್

ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಯಡಿಯೂರಪ್ಪ ಲೇವಡಿ

ಯಡಿಯೂರಪ್ಪ ಲೇವಡಿ

ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದರು. 'ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಕುಮಾರಸ್ವಾಮಿ ಅವರು ಹೊಸ ನಾಟಕವನ್ನು ಆರಂಭಿಸಿದ್ದಾರೆ' ಎಂದು ಆರೋಪಿಸಿದ್ದರು.

ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ

ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ

'ರಾಜ್ಯದಲ್ಲಿ ಕಣ್ಣೆದುರೇ ಅನೇಕ ಸಮಸ್ಯೆಗಳಿವೆ ಇವುಗಳಿಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲು ಹೊರಟಿರುವುದು ತೀರಾ ಹಾಸ್ಯಸ್ಪದ' ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದರು.

ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದರು

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗ್ರಾಮ ವಾಸ್ತವ್ಯವನ್ನು ಲೇವಡಿ ಮಾಡಿದ್ದರು. 'ಒಂದು ವರ್ಷದಿಂದ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದರು. ಅಲ್ಲಿಂದ ಒಂದ ಸ್ವಲ್ಪ ದಿವಸ ರೆಸಾರ್ಟ ಅಡ್ಡಾಡಿದರು, ಈಗ ಗ್ರಾಮ ವಾಸ್ತವ್ಯ ಶುರು ಮಾಡಿದರು' ಎಂದು ಟ್ವೀಟ್ ಮಾಡಿದ್ದರು.

English summary
Hitting back at the opposition party BJP Karnataka Chief Minister H.D.Kumaraswamy tweeted that people response is the answer for the leaders who criticized Grama Vastavaiya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X