ಬಿಜೆಪಿ ಗೋವುಗಳ ರಕ್ಷಣೆ ಮಾಡುವುದಿಲ್ಲ ಎನ್ನುವುದಕ್ಕೆ ತಾಜಾ ಉದಾಹರಣೆ

ಬೆಂಗಳೂರು, ಜೂನ್ 5: ಗೋವಿನ ಬಗ್ಗೆ ಮಾತನಾಡುವ ಬಿಜೆಪಿಗೆ ಅವುಗಳ ರಕ್ಷಣೆಯ ವಿಚಾರದಲ್ಲಿ ಅಸಡ್ಡೆಯನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, "'ಗೋ' ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ-FMD ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ"ಎಂದು ಟ್ವೀಟ್ ಮೂಲಕ ಅಭಿಪ್ರಾಯ ಪಟ್ಟಿದ್ದಾರೆ.

"ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೇ ರೈತ ಕೊರಗಿ ಕುಗ್ಗಿಹೋಗುತ್ತಾನೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ".

HD Kumaraswamy Hits out at BJP for not vaccinating Cattle for Foot and mouth disease

"ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೋವಿಡ್‌ 19 ಕಾರಣದಿಂದ ಲಸಿಕೆ ಹಾಕಿಲ್ಲ ಎಂದು ಪಶುವೈದ್ಯರು ಹೇಳಿದ್ದಾರೆ. ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ?"ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

"ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾ. ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಮುಂದೆ ಜೂನ್‌ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು".

"ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಲಿ. ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ" ಎನ್ನುವ ಸಲಹೆಯನ್ನು ಕುಮಾರಸ್ವಾಮಿ ಟ್ವೀಟ್ ಮೂಲಕ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+