ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್ಎಲ್‌ಸಿ ಪರೀಕ್ಷೆ; ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ

|
Google Oneindia Kannada News

ಬೆಂಗಳೂರು, ಜೂನ್ 04; ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದೆ.

ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಘೋಷಣೆ ಮಾಡಿದರು. ಹಲವು ರಾಜ್ಯಗಳು ಸಹ ಈಗಾಗಲೇ ಪರೀಕ್ಷೆಯನ್ನು ರದ್ದುಗೊಳಿಸಿವೆ.

ವಿವರ: ಕರ್ನಾಟಕದಲ್ಲಿ ಹೇಗೆ ನಡೆಸಲಾಗುತ್ತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ? ವಿವರ: ಕರ್ನಾಟಕದಲ್ಲಿ ಹೇಗೆ ನಡೆಸಲಾಗುತ್ತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ?

ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಜುಲೈನಲ್ಲಿ ಪರೀಕ್ಷೆಗಳು ನಡೆಯಲಿವೆ. ಮೂರು ಭಾಷೆಗಳಿಗೆ ಮಾತ್ರ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಫೇಲ್ ಮಾಡದ ಮೇಲೆ ಎಸ್ಎಸ್ಎಲ್ ಸಿ ಪರೀಕ್ಷೆ ಯಾಕೆ ಶಿಕ್ಷಣ ಸಚಿವರೇ ? ಫೇಲ್ ಮಾಡದ ಮೇಲೆ ಎಸ್ಎಸ್ಎಲ್ ಸಿ ಪರೀಕ್ಷೆ ಯಾಕೆ ಶಿಕ್ಷಣ ಸಚಿವರೇ ?

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. "ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ" ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು

ಶಿಕ್ಷಣ ಸಚಿವು ಐಲು-ಪೈಲು ನಿರ್ಧಾರ

"ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ" ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸಚಿವರು ಮಾತನಾಡುವುದಿಲ್ಲ

ಸಚಿವರು ಮಾತನಾಡುವುದಿಲ್ಲ

"ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕಾಲೇಜುಗಳಲ್ಲಿ ಸೀಟು

"ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ" ಎಂದು ಎಚ್. ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Recommended Video

SSLC ಪರೀಕ್ಷೆ ವಿಚಾರದಲ್ಲಿ ಸರ್ಕಾರ ಹೀಗೆ ಮಾಡಿದ್ದೇಕೆ | Oneindia Kannada
ಹೇಗೆ ನಡೆಯಲಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಹೇಗೆ ನಡೆಯಲಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸುರೇಶ್ ಕುಮಾರ್, "2 ಪತ್ರಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನದ ಒಂದು ಪತ್ರಿಕೆ ಹಾಗೂ ಭಾಷೆಗಳಿರುವ ಮತ್ತೊಂದು ಪತ್ರಿಕೆ ಮೂಲಕ ಪರೀಕ್ಷೆ ನಡೆಸಲಾಗುತ್ತದೆ" ಎಂದರು.

English summary
Karnataka government has decided to conduct the SSLC exam in the third week of July. Former chief minister H. D. Kumaraswamy tweet against move by the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X