ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ; ಸರ್ಕಾರಕ್ಕೆ ಎಚ್‌ಡಿಕೆ ತೀವ್ರ ತರಾಟೆ

ಬೆಂಗಳೂರು, ಮಾರ್ಚ್ 28: ಕೊರೊನಾ ಮಹಾಮಾರಿ ರಾಜ್ಯದಲ್ಲೂ ಹೆಚ್ಚಾಗುತ್ತಾ ಸಾಗಿದೆ. ರಾಜ್ಯ ಸರ್ಕಾರ ಕೊರೊನಾ ಸೋಂಕು ಹರಡದಂತೆ ತಡೆಯಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಕೆವಲು ಟೀಕೆಗಳೂ ಕೂಡ ಕೇಳಿ ಬರುತ್ತಿವೆ.

ಜೆಡಿಎಸ್ ರಾಜ್ಯಾದ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಶನಿವಾರ ಸರಣಿ ಟ್ವೀಟ್ ಮಾಡಿದ್ದಾರೆ.

ರಾಜ್ಯವನ್ನೇ ವ್ಯಾಪಿಸುತ್ತಿರುವ ಕೊರೊನಾ ವೈರಸ್‌ ನಿಯಂತ್ರಣದ ನಿಟ್ಟಿನಲ್ಲಿ ಸರ್ಕಾರ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ, ವೈರಸ್‌ ವ್ಯಾಪಿಸುತ್ತಿರುವುದು ಏಕೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಮುಂದೆ ಓದಿ

ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ

ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ

ಮಹಾಮಾರಿ ಕೊರೊನಾ ವೈರಸ್‌ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಿಎಂ ಹೇಳುತ್ತಿದ್ದಾರೆ. ಅವರು ಹೀಗೆ ಹೇಳುತ್ತಿರುವಾಗಲೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ?

ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ?

ರಾಜ್ಯದಲ್ಲಿ ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಎನ್‌95 ಮಾಸ್ಕ್‌ಗಳು , 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್‌ ಮಾಸ್ಕ್‌ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ಸೂಕ್ತ ರಕ್ಷಣಾ ಕವಚಗಳಿಲ್ಲ

ಸೂಕ್ತ ರಕ್ಷಣಾ ಕವಚಗಳಿಲ್ಲ

ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ. ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮರಣ ಮೃದಂಗ ಹೆಚ್ಚಾಗಲಿದೆ

ಮರಣ ಮೃದಂಗ ಹೆಚ್ಚಾಗಲಿದೆ

ಪ್ರಧಾನಿ ಹೊರಡಿಸಿದ ಲಾಕ್‌ಡೌನ್‌ ಆದೇಶದ ಹೊರತುಪಡಿಸಿ, ವೈರಸ್‌ ತಡೆಗೆ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸವಲತ್ತು, ರಕ್ಷಣಾ ಕವಚಗಳನ್ನು ಪೂರೈಸಿದ್ದರೆ, ಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ? ಹೀಗೆ ಹೇಳಿದ್ದನ್ನು ಮಾಡದೇ ಹೋದರೆ, ಕೊರೊನಾ ಮರಣ ಮೃದಂಗ ಹೆಚ್ಚಾಗಲಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+