ದಾಖಲೆ ಬಿಡುಗಡೆ ಮಾಡಿದ್ರೆ ಆರೇಳು ಸಚಿವರ ತಲೆದಂಡ: ಹೊಸ ಬಾಂಬ್‌ ಸಿಡಿಸಿದ ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು, ಸೆಪ್ಟೆಂಬರ್‌ 28: ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಜೆ ಪಿ ಭವನದಲ್ಲಿ ಶನಿವಾರ ಮಹತ್ವದ ಸುದ್ದಿಗೋಷ್ಟಿಯನ್ನ ನಡೆಸಿರುವ ಕುಮಾರಸ್ವಾಮಿ ಅವರು, ನಾನು ಬಹಳ ಕ್ಲೀನ್, ಪಾರದರ್ಶಕ, ನನ್ನ ಜೀವನ ತೆರೆದ ಪುಸ್ತಕ ಎಂದೆಲ್ಲಾ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ ಪ್ರಕರಣಗಳ ಕಥೆ ಏನಾಗಿದೆ? ಅವುಗಳ ತನಿಖೆ ಎಲ್ಲಿಗೆ ಬಂದಿದೆ ಎಂಬುದನ್ನು ಜನರಿಗೆ ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

HD Kumaraswamy If the Document Is Released Six Or Seven Ministers Fill Be Fined

ಇವರು ಕ್ಲೀನ್, ಸ್ವಚ್ಚ ಆಗಿದ್ದರೆ ಇಷ್ಟು ಪ್ರಕರಣಗಳು ಇವರ ಮೇಲೆ ಏಕೆ ದಾಖಲಾಗುತ್ತಿದ್ದವು ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು; ಇಂಥ ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಹಿಂದೆ ಲೋಕಾಯುಕ್ತವನ್ನು ಮುಗಿಸಿ ಎಸಿಬಿಯನ್ನು ರಚನೆ ಮಾಡಿಕೊಂಡಿದ್ದರು ಎಂದು ಅವರು ಹೇಳಿದರು.

ನನ್ನ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಲೋಕಾಯುಕ್ತಕ್ಕೆ ಬರೆದಿದ್ದ ಅತಿ ಗೌಪ್ಯ ಪಾತ್ರವೊಂದು ಸೋರಿಕೆ ಆಗಿತ್ತು. ಅದು ನಮ್ಮ ಕುಟುಂಬದ ವಿರುದ್ಧ ಅನೇಕ ತಿಂಗಳಿನಿಂದ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಗೆ ಆ ಪತ್ರ ಸೋರಿಕೆ ಆಗಿತ್ತು. ಅದು ಐಜಿಪಿ ಚಂದ್ರಶೇಖರ್ ಅವರಿಂದಲೇ ಸೋರಿಕೆ ಆಗಿದೆ. ಆದರೆ, ಅದೇ ಅಧಿಕಾರಿ ರಾಜ್ಯಪಾಲರ ಕಚೇರಿಯಿಂದಲೇ ಪತ್ರ ಸೋರಿಕೆ ಆಗಿದೆ ಎಂದು ಕಥೆ ಕಟ್ಟಿ ರಾಜ್ಯಪಾಲರ ಕಾರ್ಯಾಲಯದ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲು ಅನುಮತಿ ಕೊಡುವಂತೆ ಲೋಕಾಯುಕ್ತ ತನಿಖಾ ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನ ಮತ್ತು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರ ಕಾರ್ಯಾಲಯದ ಬಗ್ಗೆ ತನಿಖೆಗೆ ಅನುಮತಿ ಕೋರುವ ದರ್ಪವನ್ನು ಈ ಅಧಿಕಾರಿ ತೋರಿಸಿದ್ದಾರೆ. ಈ ಅಧಿಕಾರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೊದಲೇ ಸರಣಿ ಅಪರಾಧಗಳನ್ನು ಮಾಡಿ ಸಿಕ್ಕಿ ಹಾಕಿಕೊಂಡಿರುವ ಐಜಿಪಿ ಚಂದ್ರಶೇಖರ್ ಅವರಿಗೆ ರಾಜ್ಯ ಸರ್ಕಾರ ಆಮಿಷಗಳನ್ನು ಒಡ್ಡಿ ಇಂತಹ ಕಾನೂನು ಬಾಹಿರ ಕೃತ್ಯ ಮಾಡಿಸುತ್ತಿದೆ. ಅವರಿಗೆ ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಹುದ್ದೆಯ ಆಮಿಷ ಒಡ್ಡಲಾಗಿದೆ. ಈ ಸರ್ಕಾರ ಒಬ್ಬರಿಗೆ ಈ ರೀತಿಯ ಆಮಿಷ ಒಡ್ಡಿಲ್ಲ.. ಬಿ.ಕೆ.ಸಿಂಗ್, ಎಂ.ಚಂದ್ರಶೇಖರ್, ಗುಪ್ತದಳ ಮುಖ್ಯಸ್ಥರು ಸೇರಿದಂತೆ ಅನೇಕರಿಗೆ ಕಮಿಷನರ್ ಮಾಡುತ್ತೇವೆ ಎಂದು ಟೋಪಿ ಹಾಕಿದ್ದಾರೆ. ಇಂಥ ಸರ್ಕಾರದಲ್ಲಿ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತವೆ ಎನ್ನುವ ನಂಬಿಕೆ ಇಲ್ಲ ಎಂದು ಕೇಂದ್ರ ಸಚಿವರು ದೂರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+