'ಅಖಾಡಕ್ಕೆ ರಾಹುಲ್‌ ಗಾಂಧಿ ಎಂಟ್ರಿ: ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು'

ಮಂಡ್ಯ ಏ 17: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ. ಕುಮಾರಸ್ವಾಮಿ ಅವರು ಅಲ್ಲೇ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುದ ಅವರು, ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

HD Kumaraswamy is certain to lose in Mandya Says CM Siddaramaiah

ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ, ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂಥಾ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ ಎಂದರು.

ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡ ಕೊಡದಂತೆ ಮೋದಿಯವರ ಕೇಂದ್ರ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜೊತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ ಎಂದರು.

ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿ ಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಲ್ಲಿ ಬಿಜೆಪಿಯಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಕ್ಕೂ ಧ್ವನಿ ಎತ್ತದೆ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಮಂಡ್ಯ ಜನತೆಯ ಸ್ವಾಭಿಮಾನಿ ತಾಕತ್ತನ್ನು ತೋರಿಸಿ ಎಂದು ಕರೆ ನೀಡಿದರು.

ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೇ ವಾಪಾಸ್ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ ಎಂದು ಘೋಷಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+