HD Kumaraswamy:ಎಚ್ ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಆಗೋದು ಫಿಕ್ಸಾ!?
ಬೆಂಗಳೂರು, ನವೆಂಬರ್ 03: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರೈಸಿದರು ವಿಪಕ್ಷ ನಾಯಕನ ಆಯ್ಕೆಯ ಕುರಿತು ಬಿಜೆಪಿ ಹೈಕಮಾಂಡ್ ಬಾರೀ ಹಿಂದೆಟ್ಟು ಹಾಕುತ್ತಿದೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಇನ್ನೂ ವಿಪಕ್ಷ ನಾಯಕನ ಆಯ್ಕೆ ವಿಳಂಬ ಯಾಕೆ ಎಂಬ ಪ್ರಶ್ನೆ ಉದ್ಭವಾಗಿದೆ. ಅಲ್ಲದೇ ಮೈತ್ರಿಯಲ್ಲಿ ನಾಲ್ಕು ಕ್ಷೇತ್ರಗಳನ್ನ ಕೇಳಿರುವ ಜೆಡಿಎಸ್ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸಿದ್ದು, ಈ ವೇಳೆ ಕರ್ನಾಟಕದ ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆಯಾಗಿದೆ ಎನ್ನಲಾಗಿದೆ.

ವಿರೋಧ ಪಕ್ಷದ ನಾಯಕರ ನೇಮಕದಲ್ಲಿ ಬಿಜೆಪಿ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವುದು ರಾಜ್ಯ ಬಿಜೆಪಿಯ ಹಲವು ಹಿರಿಯರಲ್ಲಿ ನಿರಾಸೆ ಮೂಡಿಸಿದೆ. ಆದರೆ, ಪ್ರಾದೇಶಿಕ ಪಕ್ಷ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರಿಗೆ ವಿಪಕ್ಷ ಸ್ಥಾನ ಸಿಗಲಿದೆ ಎಂಬ ಮಾತುಗಳು ಕೇಳಿಬಂದಿದ್ದು, ಇದು ಜೆಡಿಎಸ್ ನಾಯಕರಿಗೆ ಸಂತೋಷದ ಸಂಗತಿಯಾಗಿದೆ. 65 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯಲ್ಲಿ ಯಾರೆಬ್ಬರೂ ವಿಪಕ್ಷ ಸ್ಥಾನಕ್ಕೆ ಅರ್ಹರಲ್ಲವೇ ಎಂಬ ಪ್ರಶ್ನೆ ಉದ್ಘವಾಗಿದ್ದು, ಬಹುತೇಕ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರಿಗೆ ವಿಪಕ್ಷ ಸ್ಥಾನ ಒಲಿದು ಬರಲಿದೆ.
ಈಗಾಗಲೇ ಸಿದ್ದರಾಮಯ್ಯ ಸರ್ಕಾರ ರಚನೆಯ ಬಳಿಕ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿಪಕ್ಷ ನಾಯಕರಿಲ್ಲದೇ ಅಧಿವೇಶನ ಪೂರ್ಣಗೊಂಡಿದ್ದು, ಬೆಳಗಾವಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಮುನ್ನ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ಸೂಚಿಸುತ್ತಲೇ ಇದೆ. ಇನ್ನೂ ಹಲವು ನಾಯಕರು ಹಾಗೂ ಶಾಸಕರು ಮುಂದಿನ ಲೋಕಸಭೆ ಚುನಾವಣೆಯ ಮೊದಲು ಆಯ್ಕೆ ಮಾಡುತ್ತಾರೆ ಎಂಬ ಭರವಸೆ ಇಲ್ಲ ಎಂಬ ಮಾತುಗಳು ಕಮಲ ಪಾಳಯದಲ್ಲಿ ಕೇಳಿ ಬಂದಿದೆ.
ಇನ್ನೂ ವಿಪಕ್ಷ ನಾಯಕನ ಆಯ್ಕೆ ಕುರಿತು ಕೇಂದ್ರ ನಾಯಕತ್ವಕ್ಕೆ ಈಗಾಗಲೇ ಮನವರಿಕೆ ಮಾಡಲು ಹಲವಾರು ಬಾರಿ ಪ್ರಯತ್ನಿಸಿದ್ದೇವೆ, ಆದರೆ ಐದು ರಾಜ್ಯಗಳ ಚುನಾವಣೆಗಳು ಮತ್ತು ಮುಂಬರುವ 2024 ರ ಲೋಕಸಭಾ ಚುನಾವಣೆಗಳಿಗೆ ಮುಂಚಿತವಾಗಿ ಕರ್ನಾಟಕವು ಆದ್ಯತೆಯಲ್ಲಿಲ್ಲ ಎಂದು ಹೇಳಲಾಗಿದೆ. ಲೋಕಸಭೆಯ ನಂತರ ಮಾತ್ರ ನಿರ್ಧಾರವನ್ನು ನಾವು ನಿರೀಕ್ಷಿಸುತ್ತೇವೆ ಎಂದು ಹಿರಿಯ ಶಾಸಕರೊಬ್ಬರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ ಎನ್ ರವಿಕುಮಾರ್, ವಿಳಂಬವಾಗಿದ್ದರೂ ಚಳಿಗಾಲದ ಅಧಿವೇಶನಕ್ಕೆ ಮುನ್ನ ನೇಮಕವಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ನಾಯಕಕರು ಪಂಚರಾಜ್ಯಗಳ ಚುನಾವಣೆಗಳು ಮತ್ತು ಲೋಕಸಭೆಯ ಸಿದ್ಧತೆಯನ್ನ ನಡೆಸುತ್ತಿದ್ದಾರೆ. ಆದರೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ ಅವರು ವಿರೋಧ ಪಕ್ಷವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚು. ಏಕೆಂದರೆ ಎರಡು ಬಾರಿ ಸಿಎಂ ಆಗಿದ್ದವರು ಪ್ರತಿಪಕ್ಷಗಳ ಸಾಲಿನಲ್ಲಿ ಅನುಭವ ಹೊಂದಿದ್ದಾರೆ ಎನ್ನಲಾಗಿದೆ. ಮೈತ್ರಿಯಿಂದ ಅಸಮಾಧಾನಗೊಂಡಿರುವ ತಮ್ಮದೇ ಪಕ್ಷದ ಶಾಸಕರ ಕೆಂಗಣ್ಣಿಗೆ ಗುರಿಯಾಗಬಹುದು. ಇನ್ನೂ ವಿಪಕ್ಷ ನಾಯಕ ಸ್ಥಾನಕ ಕುಮಾರಸ್ವಾಮಿ ಒಲಿದು ಬಂದರೆ ಪಕ್ಷದ ನಾಯಕರ ಸಮಾಧಾನ ಪಡಿಸಬಹುದು ಎನ್ನಲಾಗಿದೆ.
ಬಿಜೆಪಿಯೊಂದಿಗೆ ಕೈಜೋಡಿಸುವ ಅನುಕೂಲಗಳ ಬಗ್ಗೆ ತನ್ನದೇ ಆದ 19 ಶಾಸಕರನ್ನು ಮನವರಿಕೆ ಮಾಡಲು ಪ್ರಯತ್ನಿಸುತ್ತಿದೆ. ಕಳೆದ ವಾರದಿಂದ ದುಬೈನಲ್ಲಿರುವ ಕುಮಾರಸ್ವಾಮಿ ಅವರು ಶನಿವಾರ (ನ.4) ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದಲ್ಲಿನ ಬರ ಸಮೀಕ್ಷೆಗೆ ಸತ್ಯಶೋಧನಾ ತಂಡಗಳನ್ನು ಕಳುಹಿಸುವ ಕುರಿತು ಸಭೆ ನಡೆಸುವ ಸಾಧ್ಯತೆ ಇದೆ. ಈ ಸಭೆಯ ಭಾಗವಾಗಿ, ಅವರು ಅತೃಪ್ತ ಶಾಸಕರೊಂದಿಗೆ ಮಾತುಕತೆ ನಡೆಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಜೆಡಿಎಸ್ ನಾಯಕರೊಬ್ಬರು ಹೇಳಿದರು.












Click it and Unblock the Notifications