Exit Poll: ಸಿ-ವೋಟರ್ ಸಮೀಕ್ಷೆ: 2019 ರ ಚುನಾವಣೆಯಲ್ಲಿ ಮಂಡ್ಯದಿಂದ ನಿಖಿಲ್ ಸೋಲು, ಕುಮಾರಸ್ವಾಮಿ ಭವಿಷ್ಯವೇನು?
ಮಂಡ್ಯ, ಜೂನ್ 01: ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಭದ್ರಕೋಟೆಯಾಗಿದ್ದು, 2019 ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರು ಹೀನಾಯವಾಗಿ ಸೋಲು ಅನುಭವಿಸಿದ್ದರು. 2019 ರ ಚುನಾವಣಾ ಫಲಿತಾಂಶಕ್ಕೂ ಮೊದಲೇ ಚುನಾವಣೋತ್ತರ ಸಮೀಕ್ಷೆಯಲ್ಲಿ ನಿಖಿಲ್ ಸೋಲು ಅನುಭವಿಸಿದ್ದು, ಮಂಡ್ಯದಲ್ಲಿ ಈ ಬಾರಿ ಕುಮಾರಸ್ವಾಮಿ ಭವಿಷ್ಯ ಏನಾಗಬಹುದು ಎಂಬ ಕುತೂಹಲ ಮೂಡಿಸಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಮಂಡ್ಯ ಲೋಕಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿತ್ತು. ಅದರಂತೆ ಕಳೆದ ಸಿ-ವೋಟರ್ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಂತೆ ನಿಖಿಲ್ ಕುಮಾರಸ್ವಾಮಿ ಅವರು ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.

2019 ರ ಲೋಕಸಭಾ ಚುಣಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ಅವರು ಭರ್ಜರಿ ಜಯಗಳಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು. ಹೀಗಾಗಿ ಕಳೆದು ಕೊಂಡ ಕ್ಷೇತ್ರವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿದಿದ್ದಾರೆ.
ಶತಾಯುಗತಾಯು ಮಂಡ್ಯ ಕ್ಷೇತ್ರ ಗೆಲ್ಲುವ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಯನ್ನ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಡೆಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಕಮಲ-ದಳ ನಾಯಕರು ಭರ್ಜರಿ ಪ್ರಚಾರವನ್ನ ನಡೆಸಿದ್ದು,ಕುಮಾರಸ್ವಾಮಿ ಗೆಲ್ಲುವ ವಿಶ್ವಾಸವನ್ನ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದಾರೆ.












Click it and Unblock the Notifications