CM Siddaramaiah: ಕುಮಾರಸ್ವಾಮಿ ಸ್ವ ಇಚ್ಛೆ ಯಿಂದ ಪಾದಯಾತ್ರೆ ಮಾಡುತ್ತಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 02: ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ. ಕೇಂದ್ರ ಸಚಿವ ಹಾಗೂ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಡಾ ಹಗರಣದ ಕುರಿತು ಬಿಜೆಪಿ-ಜೆಡಿಎಸ್‌ ಪ್ರತಿಭಟನೆ ಕುರಿತು ಮಾತನಾಡಿ, ಮಳೆ ಹೆಚ್ಚಾಗಿದೆ , ಜಲಾಶಯಗಳು ತುಂಬಿ ಪ್ರವಾಹ ಬಂದಿದೆ ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ಅವರ ಸ್ವ ಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ ಎಂದು ಹೇಳಿದರು.

HD Kumaraswamy Is Not Doing The Padayatra Of His Own Free Will Says CM Siddaramaiah

ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸುತ್ತಿರುವುದಾಗಿ ತಿಳಿಸಿದರು. ಮನೆಗಳನ್ನು ಕಟ್ಟಿಕೊಡುವುದು ಹಾಗೂ ಪರಿಹಾರ ಕೊಡುತ್ತೇವೆ ಎಸ್.ಡಿ.ಆರ್. ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು ಎಂದರು.

ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಅದನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.

ಕೆ. ಜೆ.ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. ದಿನಾಂಕ : 26-7.2024 ರಂದು 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು.

ಏನು ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ. ಅಂದೇ ನೋಟೀಸು ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ . ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ ಎಂದರು.

ರಾಜ್ಯಪಾಲರು ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತ್ಯಾ ಅವರು ನೋಟೀಸು ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+