ಕಮಲ-ದಳ ಮೈತ್ರಿ ಲೆಕ್ಕಾಚಾರ; ವಿಪಕ್ಷ ನಾಯಕನಾಗಿ ಹೆಚ್‌ ಡಿ ಕುಮಾರಸ್ವಾಮಿ ಆಯ್ಕೆ!?

ಬೆಂಗಳೂರು,ಜುಲೈ14: ರಾಜ್ಯ ಬಿಜೆಪಿ ಮೂರು ವರ್ಷಗಳ ಕಾಲ ಆಡಳಿತ ನಡೆಸಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದು, ಇದೀಗ ಸಮರ್ಥ ವಿಪಕ್ಷ ಸ್ಥಾನಕ್ಕಾಗಿ ಆಯ್ಕೆಗಾಗಿ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ.

ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ಬರೋಬ್ಬರಿ ಎರಡು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾತ್ರ ಆಗಿಲ್ಲ. ವಿಪಕ್ಷ ಸ್ಥಾನದ ಆಯ್ಕೆ ಕುರಿತು ಬಿಜೆಪಿ ಹೈಕಮಾಂಡ್‌ ರಾಜ್ಯಕ್ಕೆ ಇಬ್ಬರು ವಿಕ್ಷಕರನ್ನು ಕಳುಹಿಸಿದ್ದು, ಬಿಜೆಪಿ ಶಾಸಕರ ಜೊತೆಗೆ ಚರ್ಚೆ ನಡೆಸಿ, ಹೈಕಮಾಂಡ್‌ ಗೆ ಮಾಹಿತಿಯನ್ನ ನೀಡಿದ್ದು, ಹೈಕಮಾಂಡ್‌ ವಿಪಕ್ಷ ನಾಯಕರ ಆಯ್ಕೆ ವಿಚಾರದಲ್ಲಿ ವಿಳಂಬ ನೀತಿಯನ್ನ ಅನುಸರಿಸುತ್ತಿದೆ.

Leader Of The Opposition

ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ಸ್ಥಾನಕ್ಕಾಗಿ ಹಲವು ನಾಯಕರು ಪ್ರಯತ್ನ ನಡೆಸಿದ್ದು, ವಿಪಕ್ಷದ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ ವಿಪಕ್ಷ ನಾಯಕನಾಗಿ ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಆಯ್ಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಕರ್ನಾಟಕದಲ್ಲಿ ಅತೀ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಲೆಕ್ಕಾಚಾರವಾಗಿರುವ ಬಿಜೆಪಿ ಹೈಕಮಾಂಡ್‌ ಈ ಬಾರೀ ರಾಜ್ಯದಲ್ಲಿ ಮೈತ್ರಿಯಾಗುವ ಸಾಧ್ಯತೆ ಇದೆ.

ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೂ ಸಹ ತಯಾರಿ ನಡೆಸಿದ್ದು 28 ಕ್ಷೇತ್ರಗಳ ಪೈಕಿ, ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದ್ದು, ಕಾಂಗ್ರೆಸ್ ಗೆ ಠಕ್ಕರ್‌ ಕೊಡಲು ಬಿಜೆಪಿ ಹಾಗೂ ಜೆಡಿಎಸ್‌ ಮುಂದಾಗಿದ್ದು, 5- 6 ಸ್ಥಾನಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯ್ನ ಹಾಕಲಿದ್ದು,ಉಳಿದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ಕೊಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ.

ಜುಲೈ 16 ಹಾಗೂ 17 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಸಭೆ ನಡೆಯುತ್ತಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ವಿರೋಧಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸಲು ಜುಲೈ 18ರಂದು ದಿಲ್ಲಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ನಾಯಕರ ಸಭೆ ಇದೆ. ಕರ್ನಾಟಕದಿಂದ ಜೆಡಿಎಸ್‌ ಭಾಗವಹಿಸುವ ಸಾಧ್ಯತೆ ಇದೆ.

Leader Of The Opposition

ಇನ್ನೂ ಈ ಸಭೆಯ ಬಳಿಕ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಲಿದ್ದು, ಜುಲೈ 18ರಂದು ದಿಲ್ಲಿಯಲ್ಲಿ ನಡೆಯುವ ಎನ್‌ಡಿಎ ಸಭೆಯಲ್ಲಿ ಜೆಡಿಎಸ್‌ ಭಾಗವಹಿಸಿ ಬಿಜೆಪಿ ಜೊತೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡರೆ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಜುಲೈ 18ರ ಬಳಿಕವೇ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ ಎನ್ನಲಾಗಿದೆ.

ಈಗಾಗಲೇ ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ಕೂಡ ಮಾಜಿ ಮುಖ್ಯಮಂತ್ರಿಯಾಗಿರು ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಆಗಲಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಮಾಜಿ ಸಚಿವ ಮುರುಗೇಶ್‌ ನಿರಾಣಿ ಕೂಡ ವಿಶೇಷ ವ್ಯಕ್ತಿ ಬರುತ್ತಾರೆ ಎಂದು ಅಚ್ಚರಿ ಹೇಳಿಕೆಯನ್ನ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇತ್ತ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ದ ಕೆಲವು ಆರೋಪಗಳನ್ನ ಮಾಡಿದ್ದು, ಕುಮಾರಸ್ವಾಮಿ ಆರೋಪಗಳನ್ನ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಬೆಂಬಲಿಸಿದ್ದರು. ಎಚ್‌ಡಿ ಕುಮಾರಸ್ವಾಮಿ ಮಾಡಿದ ಆರೋಪಗಳಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಮುಂದೆ ಅವರು, ನಾವು ಜೊತೆಯಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು. ಇನ್ನೂ i ಎಸ್‌ ಯಡಿಯೂರಪ್ಪ ಅವರ ಹೇಳಿಕೆಗಳು ಮೈತ್ರಿಯ ಸುಳಿವನ್ನ ನೀಡಿದ್ದು, ಬಹುತೇಕ ಕುಮಾರಸ್ವಾಮಿಯೇ ವಿಪಕ್ಷ ನಾಯಕ ಆಗಲಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+