ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದನದಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ ಕುಮಾರಸ್ವಾಮಿ?

|
Google Oneindia Kannada News

ಬೆಂಗಳೂರು, ಜುಲೈ 09 : 10 ಕಾಂಗ್ರೆಸ್, 3 ಜೆಡಿಎಸ್ ಶಾಸಕರ ರಾಜೀನಾಮೆ ಬಳಿಕ ಕರ್ನಾಟಕದ ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸ ಮತಯಾಚನೆ ಮಾಡುವ ಸಾಧ್ಯತೆ ಇದೆ.

ರಾಜೀನಾಮೆ ನೀಡಿರುವ ಶಾಸಕರಿಗೆ ಹಿನ್ನಡೆ ಉಂಟು ಮಾಡಲು ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡಲು ಚಿಂತನೆ ನಡೆಸಿದ್ದಾರೆ. ಜುಲೈ 12ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.

ಸಿಎಲ್‌ಪಿ ಸಭೆಗೆ ಗೈರು, ಸಿದ್ದರಾಮಯ್ಯಗೆ ಎಂಟಿಬಿ ನಾಗರಾಜ್ ಪತ್ರಸಿಎಲ್‌ಪಿ ಸಭೆಗೆ ಗೈರು, ಸಿದ್ದರಾಮಯ್ಯಗೆ ಎಂಟಿಬಿ ನಾಗರಾಜ್ ಪತ್ರ

ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ರಾಜೀನಾಮೆ ನೀಡಿರುವ ಶಾಸಕರಿಗೂ ವಿಪ್ ಜಾರಿ ಮಾಡಲಾಗುತ್ತದೆ. ವಿಪ್ ಜಾರಿಮಾಡಿದಾಗ ಶಾಸಕರು ಸರ್ಕಾರದ ಪರವಾಗಿ ಮತ ಹಾಕದಿದ್ದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಲು ಅವಕಾಶವಿದೆ.

ಗಾಂಧಿ ಪ್ರತಿಮೆ ಮುಂದೆ ಧರಣಿ ಕುಳಿತ ಕಾಂಗ್ರೆಸ್ ನಾಯಕರುಗಾಂಧಿ ಪ್ರತಿಮೆ ಮುಂದೆ ಧರಣಿ ಕುಳಿತ ಕಾಂಗ್ರೆಸ್ ನಾಯಕರು

HD Kumaraswamy may go for trust vote in Karnataka assembly

ರಾಜೀನಾಮೆ ನೀಡಿರುವ ಶಾಸಕರಿಗೆ ಹಿನ್ನಡೆ ಉಂಟು ಮಾಡಲು ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಚಿಂತನೆ ನಡೆಸುತ್ತಿದ್ದಾರೆ. ಕಾನೂನು ತಜ್ಞರ ಸಲಹೆಯನ್ನು ಅವರು ಪಡೆದಿದ್ದು, ಎಚ್.ಡಿ.ದೇವೇಗೌಡರ ಜೊತೆಗೂ ಈ ಕುರಿತು ಮಾತುಕತೆ ನಡೆಸಿದ್ದಾರೆ.

8 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಕಾಂಗ್ರೆಸ್‌ನಿಂದ ದೂರು8 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಕಾಂಗ್ರೆಸ್‌ನಿಂದ ದೂರು

ವಿಪ್ ಜಾರಿಗೊಳಿಸಿದ ವೇಳೆ ಪಕ್ಷದ ಆದೇಶಕ್ಕೆ ವಿರುದ್ಧವಾಗಿ ಮತ ಹಾಕುವಂತಿಲ್ಲ. ಸದನಕ್ಕೆ ಗೈರು ಹಾಜರಾಗುವಂತಿಲ್ಲ. ಆದ್ದರಿಂದ, ರಾಜೀನಾಮೆ ನೀಡಿರುವ ಶಾಸಕರು ಇಕ್ಕಟ್ಟಿಗೆ ಸಿಲುಕಲಿದ್ದಾರೆ. ಸರ್ಕಾರ ಉರುಳಿದರೂ ಶಾಸಕರಿಗೆ ತಕ್ಕ ಪಾಠ ಕಲಿಸಲು ಉಭಯ ಪಕ್ಷಗಳು ಮುಂದಾಗಿವೆ.

ಜುಲೈ 12ರಂದು ಅಧಿವೇಶನ ಆರಂಭವಾದಾಗ ಪ್ರತಿಪಕ್ಷ ಬಿಜೆಪಿ ವಿಶ್ವಾಸಮತ ಯಾಚನೆ ಮಾಡಲು ಒತ್ತಾಯ ಮಾಡಬಹುದು. ಅದಕ್ಕೂ ಮೊದಲು ಕುಮಾರಸ್ವಾಮಿ ಅವರೇ ವಿಶ್ವಾಸಮತ ಯಾಚನೆಗೆ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

English summary
Chief Minister H.D.Kumaraswamy may go for trust vote in Karnataka assembly on July 12, 2019. Kumaraswamy lead government in trouble after 10 Congress and 3 JD(S) MLAs submitted resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X