ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ನಾಯಕರ ವಿರುದ್ಧ ಕುಮಾರಸ್ವಾಮಿ ಅಸಮಾಧಾನ?

By Gururaj
|
Google Oneindia Kannada News

ಬೆಂಗಳೂರು, ಮೇ 29 : ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮೊದಲ ಅಸಮಾಧಾನ ಕೇಳಿಬಂದಿದೆ. ಸ್ವತಃ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಆಪ್ತರ ಬಳಿ ಈ ಕುರಿತು ಚರ್ಚಿಸಿದ್ದಾರೆ.

ಹೌದು, ಕಾಂಗ್ರೆಸ್‌ ನಾಯಕರು ಮೊದಲು ಜೆಡಿಎಸ್‌ ಪಕ್ಷಕ್ಕೆ ಬೇಷರತ್ ಬೆಂಬಲ ಎಂದು ಹೇಳಿದ್ದರು. ಈಗ ಸರ್ಕಾರ ರಚನೆ ಬಳಿಕ ವಿವಿಧ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ. ಖಾತೆ ಹಂಚಿಕೆ ವಿಚಾರದಲ್ಲಿಯೂ ಹಲವು ಬೇಡಿಕೆ ಇಟ್ಟಿದ್ದಾರೆ.

ಸಂಪುಟ ವಿಸ್ತರಣೆ : ಕಾಂಗ್ರೆಸ್‌ ಬೇಡಿಕೆ ಇಟ್ಟಿರುವ 5 ಖಾತೆಗಳು!ಸಂಪುಟ ವಿಸ್ತರಣೆ : ಕಾಂಗ್ರೆಸ್‌ ಬೇಡಿಕೆ ಇಟ್ಟಿರುವ 5 ಖಾತೆಗಳು!

ಮಂಗಳವಾರ ಎಚ್.ಡಿ.ಕುಮಾರಸ್ವಾಮಿ ಅವರು ಆಪ್ತರ ಜೊತೆ ಮಾತುಕತೆ ನಡೆಸುವಾಗ ಕಾಂಗ್ರೆಸ್ ನಾಯಕರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾತುಕೊಟ್ಟಂತೆ ಅವರು ನಡೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

HD Kumaraswamy may upset with senior Congress leaders

ಸರ್ಕಾರ ರಚನೆ ಮಾಡುವಾಗ 34 ಸಚಿವ ಸ್ಥಾನಗಳ ಪೈಕಿ 17 ಸ್ಥಾನಗಳನ್ನು ಉಭಯ ಪಕ್ಷಗಳು ಹಂಚಿಕೊಳ್ಳುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಕಾಂಗ್ರೆಸ್ ಪಟ್ಟು ಹಿಡಿದು 22 ಸ್ಥಾನಗಳನ್ನು ಇಟ್ಟುಕೊಂಡಿದ್ದು, ಜೆಡಿಎಸ್‌ಗೆ 12 ಸ್ಥಾನಗಳನ್ನು ನೀಡಿದೆ.

'ಮಣ್ಣಿನ ಮೊಮ್ಮಗ'ನ ರಕ್ಷಣಾತ್ಮಕ ಆಟ, ಪತ್ರಕರ್ತರಿಗೆ ಪೀಕಲಾಟ 'ಮಣ್ಣಿನ ಮೊಮ್ಮಗ'ನ ರಕ್ಷಣಾತ್ಮಕ ಆಟ, ಪತ್ರಕರ್ತರಿಗೆ ಪೀಕಲಾಟ

ಸಂಪುಟ ಪುನಾರಚನೆ ವಿಚಾರದಲ್ಲಿಯೂ ಇದೆ ಆಗಿದೆ. ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದರೂ ಸಹ ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳು ಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಇದರಿಂದ ಕುಮಾರಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ : ಯಾವ ಖಾತೆ ಯಾರಿಗೆ?ಎಚ್.ಡಿ.ಕುಮಾರಸ್ವಾಮಿ ಸಂಪುಟ : ಯಾವ ಖಾತೆ ಯಾರಿಗೆ?

ಹಣಕಾಸು ಖಾತೆ ಹಂಚಿಕೆ ವಿಚಾರದಲ್ಲಿ ಕುಮಾರಸ್ವಾಮಿ ಮತ್ತು ಗುಲಾಂ ನಬಿ ಅಜಾದ್ ನಡುವೆ ಸರಣಿ ಸಭೆ ನಡೆದಿತ್ತು. ಅಂತಿಮವಾಗಿ ಕುಮಾರಸ್ವಾಮಿ ಅವರು ದೇವೇಗೌಡರ ಜೊತೆ ಈ ವಿಚಾರವನ್ನು ಚರ್ಚಿಸಿ ಎಂದು ಸೂಚನೆ ನೀಡಿದ್ದರು.

English summary
Karnataka Chief Minister H.D.Kumaraswamy may upset with senior Congress leaders in the issue of cabinet expansion and conditions of party in alliance government in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X