ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಶಾಸಕರ ಜೊತೆ ಎಚ್‌.ಡಿ.ಕುಮಾರಸ್ವಾಮಿ ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ಜುಲೈ 17 : ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಸಿಕೊಳ್ಳಲು ಕೊನೆ ಕ್ಷಣದ ಕಸರತ್ತು ಮುಂದುವರೆದಿದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರ ಜೊತೆ ಮಹತ್ವದ ಸಭೆ ನಡೆಸಿದರು.

ಬುಧವಾರ ರಾತ್ರಿ ಪ್ರಕೃತಿ ರೆಸಾರ್ಟ್‌ಗೆ ಭೇಟಿ ನೀಡಿದ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್‌ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಶ್ವಾಸಮತಯಾಚನೆ : ಸದನದಲ್ಲಿ ಏನೆಲ್ಲ ಘಟನೆಗಳು ನಡೆಯಲಿವೆ?ವಿಶ್ವಾಸಮತಯಾಚನೆ : ಸದನದಲ್ಲಿ ಏನೆಲ್ಲ ಘಟನೆಗಳು ನಡೆಯಲಿವೆ?

ಗುರುವಾರ ಎಚ್. ಡಿ. ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ದೇವನಹಳ್ಳಿ ಬಳಿ ಇರುವ ಪ್ರಕೃತಿ ರೆಸಾರ್ಟ್‌ನಲ್ಲಿರುವ ಕಾಂಗ್ರೆಸ್ ಶಾಸಕರ ಜೊತೆ ಮಹತ್ವದ ಸಭೆ ನಡೆಸಿದರು. ನಾಳೆ ನಡೆಯುವ ಪ್ರಕ್ರಿಯೆಯ ಬಗ್ಗೆ ವಿವರಣೆ ನೀಡಿದರು.

ವಿಶ್ವಾಸಮತಯಾಚನೆ ಬಳಿಕ ಬಿ.ಎಸ್.ಯಡಿಯೂರಪ್ಪ ದೆಹಲಿಗೆ!ವಿಶ್ವಾಸಮತಯಾಚನೆ ಬಳಿಕ ಬಿ.ಎಸ್.ಯಡಿಯೂರಪ್ಪ ದೆಹಲಿಗೆ!

HD Kumaraswamy

"ನಮ್ಮ ಒಗ್ಗಟ್ಟನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ" ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯಲಿದೆ ಎಂದು ಕುಮಾರಸ್ವಾಮಿ ಶಾಸಕರ ಜೊತೆ ಮಾತನಾಡುವಾಗ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವಾಸಮತಯಾಚನೆ ; 2018ರಲ್ಲಿ ಏನಾಗಿತ್ತು, ಈಗ ಏನಾಗಿದೆ?ವಿಶ್ವಾಸಮತಯಾಚನೆ ; 2018ರಲ್ಲಿ ಏನಾಗಿತ್ತು, ಈಗ ಏನಾಗಿದೆ?

ಪ್ರಕೃತಿ ರೆಸಾರ್ಟ್‌ನಲ್ಲಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಎಚ್. ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಿರುವ ರೆಸಾರ್ಟ್‌ಗೆ ತೆರಳಿದರು.

ಗುರುವಾರ ಬೆಳಗ್ಗೆ 11ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗಲಿದೆ. ಎಚ್. ಡಿ. ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಬೇಕಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಸರ್ಕಾರ ಉಳಿಸಿಕೊಳ್ಳಲು ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ.

English summary
Karnataka Chief Minister H.D.Kumaraswamy along with Deputy Chief Minister G.Parameshwara met the Congress MLAs at resort on July 17, 2019. H.D.Kumaraswamy will move for floor test on July 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X