ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಎಚ್.ಡಿ.ಕುಮಾರಸ್ವಾಮಿ

Recommended Video

      ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಎಚ್.ಡಿ.ಕುಮಾರಸ್ವಾಮಿ..! | Oneindia Kannada

      ಬೆಂಗಳೂರು, ಜನವರಿ 27 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಆನಂದ್ ಸಿಂಗ್ ಭೇಟಿ ಮಾಡಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಶಾಸಕ ಜೆ.ಎನ್‌.ಗಣೇಶ್ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.

      ಶನಿವಾರ ರಾತ್ರಿ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದರು. ರೆಸಾರ್ಟ್‌ ಗಲಾಟೆ ಪ್ರಕರಣದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಆನಂದ್ ಸಿಂಗ್ ಭೇಟಿ ಮಾಡಿದರು.

      ಜನವರಿ 19ರ ಶನಿವಾರ ರಾತ್ರಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಕಂಪ್ಲಿ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಮತ್ತು ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಜೆ.ಎನ್.ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದರು.

      ಆನಂದ್ ಸಿಂಗ್ ಅವರ ಕಣ್ಣಿಗೆ ಪೆಟ್ಟುಬಿದ್ದಿದೆ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆ.ಎನ್.ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ...

      ಚೇತರಿಸಿಕೊಳ್ಳುತ್ತಿದ್ದಾರೆ ಆನಂದ್ ಸಿಂಗ್

      ಚೇತರಿಸಿಕೊಳ್ಳುತ್ತಿದ್ದಾರೆ ಆನಂದ್ ಸಿಂಗ್

      ಶಾಸಕ ಜೆ.ಎನ್.ಗಣೇಶ್ ಹಲ್ಲೆ ಮಾಡಿದ್ದರಿಂದ ಆನಂದ್ ಸಿಂಗ್ ಅವರ ಕಣ್ಣಿಗೆ ಪೆಟ್ಟಾಗಿದೆ. ನಾರಾಯಣ ನೇತ್ರಾಲಯದಲ್ಲಿ ಅವರ ಕಣ್ಣು ಪರೀಕ್ಷೆಯನ್ನು ನಡೆಸಿ, ಪುನಃ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

      ಶಾಸಕರ ವಿರುದ್ಧ ಎಫ್‌ಐಆರ್

      ಶಾಸಕರ ವಿರುದ್ಧ ಎಫ್‌ಐಆರ್

      ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಂಧನ ಭೀತಿಯಿಂದಾಗಿ ಅವರು ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

      ಶಾಸಕರು ಪಕ್ಷದಿಂದ ಅಮಾನತು

      ಶಾಸಕರು ಪಕ್ಷದಿಂದ ಅಮಾನತು

      ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷ ಶಾಸಕರ ನಡುವಿನ ಹೊಡೆದಾಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ಪಕ್ಷದದಿಂದಲೂ ಘಟನೆ ಬಗ್ಗೆ ತನಿಖೆ ನಡೆಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ.

      ಘಟನೆ ಬಗ್ಗೆ ಶಾಸಕರ ಸ್ಪಷ್ಟನೆ

      ಘಟನೆ ಬಗ್ಗೆ ಶಾಸಕರ ಸ್ಪಷ್ಟನೆ

      ಶಾಸಕ ಜೆ.ಎನ್.ಗಣೇಶ್ ಅವರು ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 'ಆನಂದ್ ಸಿಂಗ್ ನನ್ನ ಅಣ್ಣ ಇದ್ದ ಹಾಗೆ. ಅವರ ಮೇಲೆ ನಾನು ಹಲ್ಲೆ ಮಾಡಿಲ್ಲ. ಆನಂದ್ ಸಿಂಗ್ ಮತ್ತು ಭೀಮಾನಾಯ್ಕ್ ನಡುವಿನ ಮನಸ್ಥಾಪ ಬಗೆಹರಿಸಲು ಮಾತುಕತೆ ನಡೆದಿತ್ತು. ಈ ಸಂದರ್ಭದಲ್ಲಿ ಒಂದು ಸಣ್ಣ ಘಟನೆ ನಡೆಯಿತು. ಆದರೆ, ಮಾಧ್ಯಮದಲ್ಲಿ ಬಂದಂತೆ ನಾನು ಬಿಯರ್ ಬಾಟಲ್‌ನಲ್ಲಿ ಹೊಡೆದಿಲ್ಲ' ಎಂದು ಹೇಳಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+