ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿ ಸರಕಾರ ಉಳಿಸಿಕೊಳ್ಳುವ ಕಸರತ್ತು, ಸರಣಿ ಸಭೆಗಳು!

|
Google Oneindia Kannada News

Recommended Video

ಸಿದ್ದು, ಎಚ್‍ಡಿಕೆ ಮಧ್ಯೆ ಎಂಟ್ರಿ ಕೊಟ್ಟ ಕೆ.ಸಿ.ವೇಣುಗೋಪಾಲ್ | Oneindia Kannada

ಬೆಂಗಳೂರು, ಮೇ 29 : 2019ರ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿದೆ. ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಪಕ್ಷಗಳು ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ದಿಟ್ಟ ನಿರ್ಧಾರವನ್ನು ಕೈಗೊಂಡಿವೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕುಮಾರಕೃಪ ಅತಿಥಿ ಗೃಹದಲ್ಲಿ ಬುಧವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು. ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಅತಿಥಿ ಗೃಹದಲ್ಲಿದ್ದಾರೆ.

ಸಿಎಂ ಕುಮಾರಸ್ವಾಮಿ- ಡಿಸಿಎಂ ಪರಮೇಶ್ವರ್ ಗುಪ್ತ ಮಾತುಕತೆಸಿಎಂ ಕುಮಾರಸ್ವಾಮಿ- ಡಿಸಿಎಂ ಪರಮೇಶ್ವರ್ ಗುಪ್ತ ಮಾತುಕತೆ

ಕೆ.ಸಿ.ವೇಣುಗೋಪಾಲ್ ಮತ್ತು ಸಿದ್ದರಾಮಯ್ಯ ನೇತೃತ್ವದಲ್ಲಿ ಮೈತ್ರಿ ಸರ್ಕಾರವನ್ನು ಕಾಪಾಡಿಕೊಳ್ಳುವ ಕುರಿತು ಸಭೆ ನಡೆಯುತ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ಮಾತುಗಳು ಕೇಳಿಬರುತ್ತಿದ್ದು, ಈ ಕುರಿತು ಉಭಯ ಪಕ್ಷಗಳು ಒಮ್ಮತದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಮೈತ್ರಿ ಸರ್ಕಾರದ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿಮೈತ್ರಿ ಸರ್ಕಾರದ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿ

ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ ಮೈತ್ರಿಕೂಟ ಕೇವಲ 2 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮುಖಭಂಗ ಅನುಭವಿಸಿದ್ದವು. ಈಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವತ್ತ ಎರಡೂ ಪಕ್ಷಗಳು ಗಮನಹರಿಸಿವೆ....

ಕುಮಾರಸ್ವಾಮಿ-ಸಿದ್ದರಾಮಯ್ಯ ಭೇಟಿ: ಮಹತ್ವದ ಮಾತುಕತೆಕುಮಾರಸ್ವಾಮಿ-ಸಿದ್ದರಾಮಯ್ಯ ಭೇಟಿ: ಮಹತ್ವದ ಮಾತುಕತೆ

ಕುಮಾರಸ್ವಾಮಿ, ವೇಣುಗೋಪಾಲ್ ಭೇಟಿ

ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ಬುಧವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ, ಡಿ.ಕೆ.ಶಿವಕುಮಾರ್ ಅವರ ಜೊತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಭೇಟಿಯಾಗಿದ್ದ ಕುಮಾರಸ್ವಾಮಿ

ಸಿದ್ದರಾಮಯ್ಯ ಭೇಟಿಯಾಗಿದ್ದ ಕುಮಾರಸ್ವಾಮಿ

ಮಂಗಳವಾರ ರಾತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಸಂಪುಟ ವಿಸ್ತರಣೆ, ಅತೃಪ್ತ ಶಾಸಕರ ಮನವೊಲಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು.

ಕಾಂಗ್ರೆಸ್ ಪಟ್ಟಿ ರವಾನೆ

ಕಾಂಗ್ರೆಸ್ ಪಟ್ಟಿ ರವಾನೆ

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಕಾಂಗ್ರೆಸ್ ತನ್ನ ಶಾಸಕರ ಪಟ್ಟಿಯನ್ನು ನೀಡಿದರೆ ಬುಧವಾರ ಸಂಜೆ ಅದನ್ನು ರಾಜಭವನಕ್ಕೆ ಕಳಿಸಲು ತೀರ್ಮಾನಿಸಲಾಗಿದೆ. ಕೆ.ಕೆ.ಗೆಸ್ಟ್ ಹೌಸ್‌ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಹ ಪಾಲ್ಗೊಂಡಿದ್ದಾರೆ.

ಬಿಜೆಪಿಗೆ ತಿರುಗೇಟು ನೀಡಲು ಪ್ಲಾನ್

ಬಿಜೆಪಿಗೆ ತಿರುಗೇಟು ನೀಡಲು ಪ್ಲಾನ್

2019ರ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರವನ್ನು ಉಳಿಸಿಕೊಳ್ಳಬೇಕು ಎಂದು ಎರಡೂ ಪಕ್ಷದ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಪ್ರತಿಪಕ್ಷ ಬಿಜೆಪಿ ಆಪರೇಷನ್ ಕಮಲದ ಕಾರ್ಯಕ್ಕೆ ಕೈ ಹಾಕಿದರೆ ಅದಕ್ಕೆ ತಿರುಗೇಟು ನೀಡಲು ಸಭೆಯಲ್ಲಿ ತಂತ್ರ ರೂಪಿಸಲಾಗುತ್ತಿದೆ.

English summary
Karnataka Chief Minister H.D.Kumaraswamy met the AICC general secretary in-charge of Karnataka K.C.Venugopal, Former CM Siddaramaiah at Kumarakrupa guest house, Bengaluru on May 29, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X