ಜನವರಿ 5ರಿಂದ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ
ಬೆಂಗಳೂರು, ಡಿಸೆಂಬರ್ 22 : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜನವರಿ 5ರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದರು. ಜನವರಿ 5 ರಿಂದ 30ರ ತನಕ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ನಡೆಸಲಿದ್ದು, ಜನರ ಸಮಸ್ಯೆ ಆಲಿಸಲಿದ್ದಾರೆ.

ಉತ್ತರ ಕರ್ನಾಟಕ ಭಾಗದ ಪ್ರತಿ ತಾಲೂಕಿನಲ್ಲಿಯೂ ಸಭೆ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಜನರಿಂದ ಮಾಹಿತಿ ಸಂಗ್ರಹಿಸಲಾಗುತ್ತದೆ. ಜನವರಿ 5ರಂದು ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಯಾತ್ರೆಗೆ ಚಾಲನೆ ಸಿಗಲಿದೆ.
'ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಲಾಗಿದೆ. ಉತ್ತರ ಕರ್ನಾಟಕ ಪ್ರವಾಸದ ಬಗ್ಗೆಯೂ ಯೋಜನೆ ತಯಾರಿಸಲಾಗಿದೆ' ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications