ರಾಜ್‌ಘಾಟ್‌ಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮಹಾತ್ಮಾ ಗಾಂಧಿಗೆ ನಮನ
Recommended Video

ಬೆಂಗಳೂರು, ಮೇ 28 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ರಾಜ್‌ಘಾಟ್‌ಗೆ ಭೇಟಿ ನೀಡಿದ ಅವರು, ಮಹಾತ್ಮಾ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಸೋಮವಾರ ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಂಡೆಪ್ಪ ಕಾಶೆಂಪೂರ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸೋಮವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಜೊತೆ ಅವರು ಸಭೆ ನಡೆಸಿದ್ದರು. ಸಂಜೆ 5.30ಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.

ಸಂಪುಟ ವಿಸ್ತರಣೆ ಕಸರತ್ತು : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ ಘಾಟ್ ಗೆ ತೆರಳಿ ಮಹಾತ್ಮಾಗಾಂಧಿ ಸ್ಮಾರಕಕ್ಕ ಪುಷ್ಪನಮನ ಸಲ್ಲಿಸಿದರು.#HDKumaraSwamy #CMOfKarnataka #GovernmentOfKarnataka #KarnatakaVarthe pic.twitter.com/sE6d2Oiutu
— Karnataka Varthe (@KarnatakaVarthe) May 28, 2018
ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಅಹ್ಮದ್ ಪಟೇಲ್ ಅವರ ಜೊತೆ ಎಚ್.ಡಿ.ಕುಮಾರಸ್ವಾಮಿ ಅವರು ಸಭೆ ನಡೆಸುತ್ತಿದ್ದಾರೆ. ಖಾತೆಗಳ ಹಂಚಿಕೆ, ಸಂಪುಟಕ್ಕೆ ಸೇರುವ ಶಾಸಕರ ಬಗ್ಗೆ ಕುಮಾರಸ್ವಾಮಿ ಚರ್ಚೆ ನಡೆಸುತ್ತಿದ್ದಾರೆ.












Click it and Unblock the Notifications