ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರ ವೃತ್ತಿ ಗೌರವಕ್ಕೆ ಯಡಿಯೂರಪ್ಪ ಗುರುದಕ್ಷಿಣೆ ಏನು ಗೊತ್ತಾ?

|
Google Oneindia Kannada News

ಬೆಂಗಳೂರು, ಅ. 11: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಶ್ಲಾಘಿಸಿದ್ದಾರೆ. ವಿದ್ಯಾಗಮ ಯೋಜನೆಯಿಂದ ಶಿಕ್ಷಕರು ಹಾಗೂ ಮಕ್ಕಳು ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂಬ ಆರೋಪ ಎದುರಾಗಿತ್ತು. ಹೀಗಾಗಿ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಆದೇಶ ಮಾಡಿದ್ದರು.

ಇದೀಗ ಶಿಕ್ಷಕರಿಗೆ ಶೈಕ್ಷಣಿಕ ವರ್ಷದ ಮಧ್ಯಂತರ (ದಸರಾ ರಜೆ) ರಜೆ ಕೊಡಬೇಕೆಂದು ಹಾಗೂ ವಿದ್ಯಾಗಮ ಕಾರ್ಯಕ್ರಮ ಸ್ಥಗಿತಗೊಳಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು. ಈಗಾಗಲೇ ಎರಡೂ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಯಡಿಯೂರಪ್ಪ ಅವರನ್ನು ಎಚ್‌ಡಿಕೆ ಹೊಗಳಿದ್ದಾರೆ.

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಯಡಿಯೂರಪ್ಪಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಯಡಿಯೂರಪ್ಪ

ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂದು ಕುಮಾರಸ್ವಾಮಿ ಅವ್ರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.

HD Kumaraswamy praises CM Yediyurappas announcement of interim leave for teachers

ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಜೊತೆಗೆ ಅಕ್ಕಮಹಾದೇವಿ ಅವರ ವಚನವನ್ನು ನೆನಪಿಸಿದ್ದಾರೆ.

ಜೊತೆಗೆ ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ

ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ನಮೋ

ಭವಿಯೆಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ನಮೋ

ಚೆನ್ನಮಲ್ಲಿಕಾರ್ಜುನನ ತಂದೆನ್ನ

ಕೈವಶಕ್ಕೆ ಕೊಟ್ಟ ಗುರುವೆ ನಮೋ ನಮೋ

-ಅಕ್ಕಮಹಾದೇವಿ.

English summary
Former CM HD Kumaraswamy praises CM Yediyurappa's announcement of interim leave for teachers
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X