ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಕುಮಾರಸ್ವಾಮಿ-ಪ್ರಧಾನಿ ಮೋದಿ ಭೇಟಿ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಮೇ 27: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಭೇಟಿಯ ಅವಧಿಯನ್ನು ಸೋಮವಾರ ಸಂಜೆಗೆ ಮುಂದೂಡಲಾಗಿದೆ.

ಸೋಮವಾರ ಬೆಳಿಗ್ಗೆ ದೆಹಲಿಗೆ ತೆರಳಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರು, ಸಂಜೆ 5.30ಕ್ಕೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಪ್ರಧಾನಮಂತ್ರಿಗಳ ಕಚೇರಿ ಸಮಯ ನಿಗದಿ ಮಾಡಿದೆ.

'ರಾಜ್ಯದ ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್‌ನವರ ಮುಲಾಜಿನಲ್ಲಿದ್ದೇನೆ''ರಾಜ್ಯದ ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್‌ನವರ ಮುಲಾಜಿನಲ್ಲಿದ್ದೇನೆ'

ಕುಮಾರಸ್ವಾಮಿ ಅವರು ಪ್ರಧಾನಿಯ ಭೇಟಿಗೆ ಸಮಯಾವಕಾಶ ಕೋರಿದ್ದರು. ಅದರಂತೆ ಪ್ರಧಾನಿ ಕಚೇರಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಸಮಯ ನಿಗದಿಪಡಿಸಿತ್ತು.

ಇದರಂತೆ ಕುಮಾರಸ್ವಾಮಿ ಅವರು ಸೋಮವಾರ ರಾತ್ರಿ 9 ಗಂಟೆಗೇ ದೆಹಲಿಗೆ ತೆರಳಬೇಕಿತ್ತು. ಆದರೆ, ಪ್ರಧಾನಿ ಕಚೇರಿ ಸಮಯ ಬದಲಾವಣೆ ಮಾಡಿದ ಕಾರಣಕ್ಕೆ ಕುಮಾರಸ್ವಾಮಿ ಅವರ ಪ್ರಯಾಣವನ್ನು ಮುಂದೂಡಲಾಗಿದೆ.

hd kumaraswamy and prime minister narendra modi meeting postponed

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸೋಮವಾರ ರಾತ್ರಿ 11.30ರ ಸುಮಾರಿಗೆ ಕುಮಾರಸ್ವಾಮಿ ಅವರು ರಾಜ್ಯಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಕ್ಕೂ ಮೊದಲು ಮಧ್ಯಾಹ್ನ 3.3೦ರ ಸುಮಾರಿಗೆ ಅವರು ರಾಜ್‌ಘಾಟ್‌ಗೆ ಭೇಟಿ ನೀಡಲಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಚಿವರಾಗುವವರು ಯಾರು?, ಪಟ್ಟಿ!ಕಾಂಗ್ರೆಸ್ ಪಕ್ಷದಲ್ಲಿ ಸಚಿವರಾಗುವವರು ಯಾರು?, ಪಟ್ಟಿ!

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ಪ್ರಧಾನಿ ಅವರನ್ನು ಭೇಟಿ ಮಾಡಲಿದ್ದಾರೆ.

ಬೆಳಿಗ್ಗೆ ದೆಹಲಿಗೆ ತೆರಳಲಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಂಪುಟ ರಚನೆ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

English summary
Delhi visit of chief minister HD Kumaraswamy was postponed to Monday evening. Earlier he was planning to leave for delhi at 9 PM on Sunday to meet Narendra Modi on Monday morning at 11 AM. But Prime Minister's office has changed the meeting time to Monday evening at 5.30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X