Get Updates
Get notified of breaking news, exclusive insights, and must-see stories!

ಸರ್ಕಾರದ ವಿರುದ್ಧ ಪ್ರತಿಭಟನೆ; ಬಿಜೆಪಿ ನಾಯಕರ ಜೊತೆ ಎಚ್‌ಡಿಕೆ ಭಾಗಿ

ಬೆಂಗಳೂರು, ಜುಲೈ 19; ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಹೈಡ್ರಾಮ ನಡೆಯುತ್ತಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪಾಲ್ಗೊಂಡಿದ್ದಾರೆ.

ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಎಸೆದು ದುರ್ವತನೆ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ವಿಧಾನಸಭೆ ಸ್ಪೀಕರ್‌ ಯು. ಟಿ. ಖಾದರ್ ಅಮಾನತು ಮಾಡಿದ್ದಾರೆ. ಶಾಸಕರ ಅಮಾನತು ಖಂಡಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ಮಾಡುತ್ತಿದ್ದಾರೆ.

HD Kumaraswamy Protest Against Government With BJP Leaders

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್. ಅಶೋಕ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮ ನಡೆಯುತ್ತಿರುವುದರಿಂದ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ನಲ್ಲಿ ಕರೆದುಕೊಂಡು ಹೋದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿಯನ್ನು ಸಹ ವಶಕ್ಕೆ ಪಡೆಯಲಾಗಿದೆ.

ವಿಧಾನಸಭೆಯಲ್ಲಿ ಹೈಡ್ರಾಮ; ವಿಧಾನಸಭೆ ಕಲಾಪದ ವೇಳೆಯಲ್ಲಿ ಬಿಜೆಪಿಯ ಸದಸ್ಯರು ಸದನದ ಬಾವಿಗೆ ಬಂದು ಮಸೂದೆಯ ಪ್ರತಿಗಳನ್ನು ಹರಿದು ಉಪಸಭಾಧ್ಯಕ್ಷರ ಮೇಲೆ ಎಸೆದರು. ಬಳಿಕ ಸದನವನ್ನು ಕೆಲ ಕಾಲ ಮುಂದೂಡಿಕೆ ಮಾಡಲಾಯಿತು. ಬಳಿಕ ಕಲಾಪ ಆರಂಭವಾಯಿತು. ಆಗ ಸ್ಪೀಕರ್ ಯು. ಟಿ. ಖಾದರ್ ಸದನಕ್ಕೆ ಅಗೌರವ ತೋರಿದ 10 ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದರು.

ಅಮಾನತು ಮಾಡಿದ ಬಳಿಕವೂ ಸದನದಲ್ಲಿಯೇ ಇದ್ದ ಬಿಜೆಪಿ ಶಾಸಕರನ್ನು ಮಾರ್ಷಲ್‌ಗಳು ಹೊತ್ತುಕೊಂಡು ಹೋದರು. ಈ ಸಂದರ್ಭದಲ್ಲಿ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥಗೊಂಡರು. ಅಂಬುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಸದಸ್ಯರು ಸ್ಪೀಕರ್ ಕಚೇರಿಯ ಹೊರಗೆ ಪ್ರತಿಭಟನೆ ಆರಂಭಿಸಿದರು. ಆಗ ಎಚ್. ಡಿ. ಕುಮಾರಸ್ವಾಮಿ ಸಹ ಅವರ ಜೊತೆ ಸೇರಿಕೊಂಡರು. ಆಗ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿ ಆರೋಪ ಮಾಡುತ್ತಿದೆ. 'ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಲು ನಿಮಗೆ ಯಾವುದೇ ಅರ್ಹತೆ, ನೈತಿಕತೆ ಇಲ್ಲ. ಭಾರತದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ಕುಖ್ಯಾತಿ ನಿಮ್ಮ ಪಕ್ಷದ್ದು. ಭಾರತದ ಪ್ರಜಾಪ್ರಭುತ್ವವನ್ನು ವಿದೇಶಿ ನೆಲದಲ್ಲಿ ನಿಂತು ಪ್ರಶ್ನಿಸಿದ್ದು ನಿಮ್ಮ ಅನರ್ಹ 'ನಾಯಕ'. ಸದನದ ಸ್ಪೀಕರ್ ಹಾಗೂ ಸರಕಾರದ ಉನ್ನತ ಅಧಿಕಾರಿಗಳ ವಿಶೇಷಾಧಿಕಾರವನ್ನು ದುರ್ಬಳಕೆ ಮಾಡುತ್ತಿರುವ ನೀವು ಅನರ್ಹರು' ಎಂದು ಬಿಜೆಪಿ ಆರೋಪ ಮಾಡಿದೆ.

ಅಮಾನತುಗೊಂಡ ಸದಸ್ಯರು; ಬಿಜೆಪಿ ಸದಸ್ಯರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಯು. ಟಿ. ಖಾದರ್ 10 ಸದಸ್ಯರನ್ನು ಅಮಾನತುಗೊಳಿಸಿ ಆದೇಶಿಸಿದರು. ಡಾ. ಸಿ. ಎನ್. ಅಶ್ವತ್ಥ್ ನಾರಾಯಣ, ವಿ. ಸುನಿಲ್ ಕುಮಾರ್, ಆರ್. ಅಶೋಕ, ವೇದವ್ಯಾಸ ಕಾಮತ್, ಯಶ್‌ಪಾಲ್ ಸುವರ್ಣ, ಧೀರಜ್ ಮುನಿರಾಜು, ಉಮಾನಾಥ ಕೋಟ್ಯಾನ್, ಅರವಿಂದ ಬೆಲ್ಲದ, ಆರಗ ಜ್ಞಾನೇಂದ್ರ ಮತ್ತು ಭರತ್ ವೈ. ಶೆಟ್ಟಿ ಅಮಾನತುಗೊಂಡ ಸದಸ್ಯರು.

ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಪ್ರತಿಪಕ್ಷಗಳು ಕೇಳುವ ಪ್ರಶ್ನೆಗಳನ್ನು ಸಮಾಧಾನದಿಂದ ಆಲಿಸಿ, ಉತ್ತರ ನೀಡುವುದು ನಾಗರಿಕ ಸರಕಾರದ ಕರ್ತವ್ಯ. ಆದರೆ, ಅನಾಗರಿಕತೆಯನ್ನೇ ಅರೆದು ಕುಡಿದಷ್ಟು, ಅನಾಗರಿಕತೆಯೇ ನಾಚಿ ನಿಟ್ಟುಸಿರು ಬಿಡುವಷ್ಟು ಹೀನಾಯವಾಗಿ ರಾಜ್ಯ ಕಾಂಗ್ರೆಸ್ ಸರಕಾರ ವರ್ತಿಸಿದೆ' ಎಂದು ಟ್ವೀಟ್‌ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+