ಮಿತ್ರಪಕ್ಷಗಳನ್ನೇ ನುಂಗಿಹಾಕುವುದು ಸೈದ್ಧಾಂತಿಕ ರಾಜಕಾರಣವೇ? ರಾಹುಲ್‌ಗಾಂಧಿಗೆ ಎಚ್‌ಡಿಕೆ ಪ್ರಶ್ನೆ
ಬೆಂಗಳೂರು, ಮೇ 16: "ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ.." ಎಂದು ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ರಾಹುಲ್‌ಗಾಂಧಿ ಅವರು ವ್ಯಾಖ್ಯಾನ ಮಾಡಿದದಾರೆ. ಹಾಗಾದರೆ, ಸೈದ್ಧಾಂತಿಕ ಬದ್ಧತೆ ಎಂದರೆ ಏನು? ರಾಹುಲ್‌ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್‌ಗೆ ಮಾತ್ರ ಇದೆ ಎನ್ನುವ ರಾಹುಲ್ ಗಾಂಧಿ ಅವರು, ತಮ್ಮ ಪಕ್ಷ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ ಮತ್ತು ದಾಕ್ಷಿಣ್ಯದಿಂದ ಎನ್ನುವುದನ್ನು ಮರೆಯಬಾರದು ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
ಮೈತ್ರಿ ಸರಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರಕಾರವನ್ನೂ ಮಾಡಿ ಹಿಂಬಾಗಿಲಿನಿಂದ ಆಪರೇಷನ್ ಕಮಲವೆಂಬ ಅನೈತಿಕ ರಾಜಕಾರಣಕ್ಕೆ 'ಕೈ' ಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ? ಮಿತ್ರಪಕ್ಷಗಳನ್ನೇ ನುಂಗಿಹಾಕುವುದೂ ಸೈದ್ಧಾಂತಿಕ ರಾಜಕಾರಣವಾ? ಎಂದು ಪ್ರಶ್ನಿಸಿದ್ದಾರೆ.

ಪ್ರಾದೇಶಿಕ ಪಕ್ಷಗಳ ಭೀತಿ ಎದುರಿಸುತ್ತಿರುವ ಫೋಬಿಯಾದಲ್ಲಿರುವ ಕಾಂಗ್ರೆಸ್; ಆಂಧ್ರ, ತೆಲಂಗಾಣ, ಒಡಿಶಾ ಸೇರಿದಂತೆ ಯಾವ ರಾಜ್ಯಗಳಲ್ಲಿ ಹೇಳಹೆಸರಿಲ್ಲದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ. ಇದನ್ನು ರಾಹುಲ್‌ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸೈದ್ಧಾಂತಿಕ ಬದ್ಧತೆ ಎಂದರೆ..
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಹಿನ್ನೆಲೆಯ ನೆಪ ನೀಡಿ, ಡಿಎಂಕೆ-ಎಲ್‌ಟಿಟಿಇ ಸಂಬಂಧವನ್ನು ಮುನ್ನೆಲೆಗೆ ತಂದು ಆ ಪಕ್ಷವನ್ನು ಸಂಪುಟದಿಂದ ಹೊರಗಿಡಬೇಕು ಎಂದ್ಹೇಳಿ ಐ.ಕೆ.ಗುಜ್ರಾಲ್ ನೇತೃತ್ವದ ಸಂಯುಕ್ತ ರಂಗ ಸರಕಾರವನ್ನು ಉರುಳಿಸಿದ ಕಾಂಗ್ರೆಸ್ ಪಕ್ಷವು ಆಮೇಲೆ ಅದೇ ಪಕ್ಷದ ಹೆಗಲ ಮೇಲೆ ಕೈ ಹಾಕಿದ್ದಾ!?

ಯುಪಿಎ 1 & 2 ಸರಕಾರಗಳಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಸಂಪುಟದಲ್ಲಿ ಅದೇ ಡಿಎಂಕೆಯ ಜತೆ 10 ವರ್ಷ ಅಧಿಕಾರದ ಸೋಪಾನ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯಾ? ಎಂದು ಕುಮಾರಸ್ವಾಮಿ ರಾಹುಲ್‌ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
Recommended Video
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications