ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಿತ್ರಪಕ್ಷಗಳನ್ನೇ ನುಂಗಿಹಾಕುವುದು ಸೈದ್ಧಾಂತಿಕ ರಾಜಕಾರಣವೇ? ರಾಹುಲ್‌ಗಾಂಧಿಗೆ ಎಚ್‌ಡಿಕೆ ಪ್ರಶ್ನೆ

|
Google Oneindia Kannada News

ಬೆಂಗಳೂರು, ಮೇ 16: "ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ.." ಎಂದು ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ರಾಹುಲ್‌ಗಾಂಧಿ ಅವರು ವ್ಯಾಖ್ಯಾನ ಮಾಡಿದದಾರೆ. ಹಾಗಾದರೆ, ಸೈದ್ಧಾಂತಿಕ ಬದ್ಧತೆ ಎಂದರೆ ಏನು? ರಾಹುಲ್‌ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್‌ಗೆ ಮಾತ್ರ ಇದೆ ಎನ್ನುವ ರಾಹುಲ್‌ ಗಾಂಧಿ ಅವರು, ತಮ್ಮ ಪಕ್ಷ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ ಮತ್ತು ದಾಕ್ಷಿಣ್ಯದಿಂದ ಎನ್ನುವುದನ್ನು ಮರೆಯಬಾರದು ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ಮೈತ್ರಿ ಸರಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರಕಾರವನ್ನೂ ಮಾಡಿ ಹಿಂಬಾಗಿಲಿನಿಂದ ಆಪರೇಷನ್‌ ಕಮಲವೆಂಬ ಅನೈತಿಕ ರಾಜಕಾರಣಕ್ಕೆ 'ಕೈ' ಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ? ಮಿತ್ರಪಕ್ಷಗಳನ್ನೇ ನುಂಗಿಹಾಕುವುದೂ ಸೈದ್ಧಾಂತಿಕ ರಾಜಕಾರಣವಾ? ಎಂದು ಪ್ರಶ್ನಿಸಿದ್ದಾರೆ.

HD Kumaraswamy question to Rahul Gandhi ideological politics

ಪ್ರಾದೇಶಿಕ ಪಕ್ಷಗಳ ಭೀತಿ ಎದುರಿಸುತ್ತಿರುವ ಫೋಬಿಯಾದಲ್ಲಿರುವ ಕಾಂಗ್ರೆಸ್; ಆಂಧ್ರ, ತೆಲಂಗಾಣ‌, ಒಡಿಶಾ ಸೇರಿದಂತೆ ಯಾವ ರಾಜ್ಯಗಳಲ್ಲಿ ಹೇಳಹೆಸರಿಲ್ಲದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ. ಇದನ್ನು ರಾಹುಲ್‌ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸೈದ್ಧಾಂತಿಕ ಬದ್ಧತೆ ಎಂದರೆ..

ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಹಿನ್ನೆಲೆಯ ನೆಪ ನೀಡಿ, ಡಿಎಂಕೆ-ಎಲ್‌ಟಿಟಿಇ ಸಂಬಂಧವನ್ನು ಮುನ್ನೆಲೆಗೆ ತಂದು ಆ ಪಕ್ಷವನ್ನು ಸಂಪುಟದಿಂದ ಹೊರಗಿಡಬೇಕು ಎಂದ್ಹೇಳಿ ಐ.ಕೆ.ಗುಜ್ರಾಲ್‌ ನೇತೃತ್ವದ ಸಂಯುಕ್ತ ರಂಗ ಸರಕಾರವನ್ನು ಉರುಳಿಸಿದ ಕಾಂಗ್ರೆಸ್‌ ಪಕ್ಷವು ಆಮೇಲೆ ಅದೇ ಪಕ್ಷದ ಹೆಗಲ ಮೇಲೆ ಕೈ ಹಾಕಿದ್ದಾ!?

HD Kumaraswamy question to Rahul Gandhi ideological politics

ಯುಪಿಎ 1 & 2 ಸರಕಾರಗಳಲ್ಲಿ ಡಾ.ಮನಮೋಹನ್‌ ಸಿಂಗ್‌ ನೇತೃತ್ವದ ಸಂಪುಟದಲ್ಲಿ ಅದೇ ಡಿಎಂಕೆಯ ಜತೆ 10 ವರ್ಷ ಅಧಿಕಾರದ ಸೋಪಾನ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯಾ? ಎಂದು ಕುಮಾರಸ್ವಾಮಿ ರಾಹುಲ್‌ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

Recommended Video

ನನ್ ಬೌಲಿಂಗ್ ಅಂದ್ರೆ ತಮಾಷೆ ಅಲ್ಲಾ !! | Oneindia Kannada

English summary
HD Kumaraswamy series tweet on Rahul Gandhi Regional Parties ideological politics statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X