• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕತೆ ಬಗ್ಗೆ ಹೊಸಬಾಳೆ ಕಳವಳ, 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? ಎಚ್‌ಡಿಕೆ ಪ್ರಶ್ನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್‌ 3: ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ ಬಿಜೆಪಿಯ ಮಾತೃಸಂಸ್ಥೆ ಮಾತೃಸಂಸ್ಥೆ ಆರ್‌ಎಸ್‌ಎಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ನೀಡಿರುವ ಈ ಹೇಳಿಕೆ ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ. ಈಗ ಅಚ್ಛೇದಿನದ ಅಸಲಿಯೆತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾರತ ದೇಶದಲ್ಲಿ ಹೆಚ್ಚುತ್ತಿರುವ ಬಡತನ, ನಿರುದ್ಯೋಗ, ಆರ್ಥಿಕ ಅಸಮಾನತೆ ಕುರಿತು ಆರ್‌ಎಸ್‌ಎಸ್‌ ಕಳವಳ ವ್ಯಕ್ತಪಡಿಸಿತ್ತು. ದೇಶದ ಬೆನ್ನೆಲುಬಾಗಿರುವ ಯುವಜನರನ್ನು ಉದ್ಯೋಗ ಅರಸುವಂತೆ ಮಾಡುವ ಬದಲು ಉದ್ಯಮ ಶೀಲರನ್ನಾಗಿ ಮಾಡಲು ಅದು ಸಲಹೆ ನೀಡಿತ್ತು. ಬಡತನ ಈ ದೇಶವನ್ನು ರಾಕ್ಷಸನಂತೆ ಕಾಡುತ್ತಿದೆ. ಭಾರತದಲ್ಲಿ 20 ಕೋಟಿ ಜನರು ಇನ್ನೂ ಬಡತನ ರೇಖೆಯಿಂದ ಕೆಳಗೆ ಇದ್ದಾರೆ.

ಯೋಗೇಶ್ವರ್ ಕಾರಿಗೆ ಮೊಟ್ಟೆ, ಕಲ್ಲು ಎಸೆತ; ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರುಯೋಗೇಶ್ವರ್ ಕಾರಿಗೆ ಮೊಟ್ಟೆ, ಕಲ್ಲು ಎಸೆತ; ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು

ಕಳೆದ 7 ವರ್ಷದ ಬಿಜೆಪಿ ಆಡಳಿತದಲ್ಲಿ ಯಾರು ಉದ್ಧಾರ ಆಗಿದ್ದಾರೆ? ಯಾರು ಹಾಳಾಗಿದ್ದಾರೆ? ಎನ್ನುವುದನ್ನು ಹೇಳಲು ವಿಶೇಷ ಪಾಂಡಿತ್ಯವೇನೂ ಬೇಕಿಲ್ಲ. 20 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ಯುವಕರಿಗೆ ಉದ್ಯೋಗವೇ ಇಲ್ಲ ಎಂದು ಹೊಸಬಾಳೆ ಅವರೇ ಹೇಳಿದ್ದಾರೆ. ಹಾಗಾದರೆ, ಕಳೆದ 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? ಎಂದು ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

 ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ ದುಡಿತಾರೆ

ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ ದುಡಿತಾರೆ

23 ಕೋಟಿ ಜನರ ದಿನದ ಆದಾಯ 375 ರೂ.ಗಿಂತ ಕಡಿಮೆ ಇದೆ. ಆದರೆ, ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ, ವಾರಕ್ಕೆ 6,000 ಕೋಟಿ ರೂ. ಸಂಪಾದನೆ ಮಾಡುತ್ತಿದ್ದಾರೆ. ಇದು ಸದ್ಯದ ಭಾರತದ ಚಿತ್ರಣ. ದೇಶದ ಶೇ. 20ರಷ್ಟು ಆದಾಯ ಶೇ.1ರಷ್ಟು ಜನರ ಕೈಯ್ಯಲ್ಲಿದೆ ಎಂದರೆ ಇದಕ್ಕಿಂತ ಆಘಾತಕಾರಿ ಸಂಗತಿ ಮತ್ತೊಂದು ಇದೆಯಾ? ಇದು ಹೊಸಬಾಳೆ ಅವರ ಪ್ರಶ್ನೆ.

ರಾಮನಗರ ಅಭಿವೃದ್ಧಿ; ಬಹಿರಂಗ ಚರ್ಚೆಗೆ ಎಚ್‌ಡಿಕೆ ಆಹ್ವಾನರಾಮನಗರ ಅಭಿವೃದ್ಧಿ; ಬಹಿರಂಗ ಚರ್ಚೆಗೆ ಎಚ್‌ಡಿಕೆ ಆಹ್ವಾನ

 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ

ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ

ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಲಕ್ಷೋಪಲಕ್ಷ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ. ಸತ್ಯ ಸ್ಥಿತಿ ಹೀಗಿದ್ದ ಮೇಲೆ ಅಚ್ಛೇದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ? ಸಮೀಕ್ಷೆಗಳು ಹೇಳಿದ ಸತ್ಯವನ್ನೇ ಹೊಸಬಾಳೆ ಅವರು ಹೇಳಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ಮಹಾ ಆಕ್ರೋಶಕ್ಕೆ ಕಾರಣವಾದರೂ ಅಚ್ಚರಿ ಇಲ್ಲ. 'ಕಾರ್ಪೋರೇಟ್ ರಾಜ್ಯ'ದ ಕಬಂಧ ಬಾಹುಗಳಲ್ಲಿ ಭಾರತ ಸಿಕ್ಕಿಬಿದ್ದಿರುವುದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ. ಜನರ ಅಸಹನೆ, ಬೇಗುದಿ ದಿನೇದಿನೆ ಹೆಚ್ಚುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

 ಒಪ್ಪತ್ತಿನ ಊಟಕ್ಕೂ ಇನ್ನೂ ಜನರ ತತ್ವಾರ

ಒಪ್ಪತ್ತಿನ ಊಟಕ್ಕೂ ಇನ್ನೂ ಜನರ ತತ್ವಾರ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊತ್ತಿನಲ್ಲೂ ಭಾರತದ ಮೇಲೆ ಆರ್ಥಿಕ ಅಸಮಾನತೆಯ ಕಪ್ಪುಚುಕ್ಕೆ ಇದೆ. ದೇಶದಲ್ಲಿ ಇನ್ನೂ ಒಪ್ಪತ್ತಿನ ಊಟಕ್ಕೂ ತತ್ವಾರ ಇರುವ ಜನರೂ ಇದ್ದಾರೆಂದರೆ ಅದು 'ರಾಷ್ಟ್ರೀಯ ಅಪಮಾನ' ಅಲ್ಲದೆ ಮತ್ತೇನು? ಹೊಸಬಾಳೆ ಅವರು ನೀಡಿರುವ ಅಂಕಿ-ಅಂಶ ನನಗೆ ಆಘಾತ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

 ಶೇ. 20 ರಷ್ಟು ಸಂಪತ್ತು ಶೇ. 1ರಷ್ಟು ಮಂದಿ ಬಳಿ

ಶೇ. 20 ರಷ್ಟು ಸಂಪತ್ತು ಶೇ. 1ರಷ್ಟು ಮಂದಿ ಬಳಿ

ಸ್ವದೇಶಿ ಜಾಗರಣ್‌ ಮಂಚ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಬಡತನ, ನಿರುದ್ಯೋಗ ಹಾಗೂ ಅರ್ಥಿಕ ಅಸಮಾನತೆ ಬಗ್ಗೆ ಕಳವಳವ್ಯಕ್ತಪಡಿಸಿದ್ದರು. ದೇಶದ ಶೇ. 20 ರಷ್ಟು ಆದಾಯ ಕೇವಲ ಶೇ. 1ರಷ್ಟು ಮಂದಿಯ ಕೈಯಲ್ಲಿದೆ. ದೇಶದ ಶೇ. 50 ಮಂದಿಯ ಕೈಯಲ್ಲಿರುವುದು ಶೇ. 13 ರಷ್ಟು ಆದಾಯ ಎಂದು ಹೊಸಬಾಳೆ ವಿವರಣೆ ನೀಡಿದ್ದರು. ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಕೂಡ ಇದರ ಬಗ್ಗೆ ಬಡತನ, ನಿರುದ್ಯೋಗ, ಆರ್ಥಿಕ ಅಸಮಾನತೆ ಬಗ್ಗೆ ದೊಡ್ಡ ಧ್ವನಿ ಎತ್ತಿದ್ದಾರೆ.

English summary
Economic inequality, poverty, unemployment are very dangerous This statement given by the National General Secretary of BJP's parent organization RSS, Dattatreya Hosabale, is a mirror of the current state of India. Former CM HD Kumaraswamy said that now a big question has been raised about the authenticity of the marriage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X