Get Updates
Get notified of breaking news, exclusive insights, and must-see stories!

ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕೀಯ ಮಾಡುವ ಅಗತ್ಯ ಇಲ್ಲ: ಸರ್ಕಾರಕ್ಕೆ ಚಾಟಿ ಬೀಸಿದ ಕುಮಾರಸ್ವಾಮಿ

ಬೆಂಗಳೂರು, ಆಗಸ್ಟ್‌ 23: ನೆರೆ ರಾಜ್ಯವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರ್ಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರ್ಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾವೇರಿ ವಿಷಯಕ್ಕೆ ಸಂಬಂಧಿಸಿ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಹೇಳಿದರು.

ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ನೆಲ ಜಲ ಭಾಷೆ ರಕ್ಷಣೆ ಹಾಗೂ ನಮ್ಮ ನೀರಿನ ಹಕ್ಕು. ರೈತರ ಪ್ರಶ್ನೆ ಬಂದಾಗ ಪ್ರತಿಪಕ್ಷಗಳು ಮಾತನಾಡದೆ ಮೌನವಾಗಿರಲು ಸಾಧ್ಯವಿಲ್ಲ ಎಂದರು.

HD Kumaraswamy Reaction About Cauvery Water Release To Tamil Nadu

ರಾಜ್ಯದ ನೆಲ ಜಲ ಭಾಷೆ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಶ್ನೆ ಮಾಡಿದರೆ, ಅದನ್ನು ರಾಜಕೀಯ ಎಂದು ಭಾವಿಸುವುದು ತಪ್ಪು. ಹಾಗೆ ಭಾವಿಸುವ ಪ್ರಶ್ನೆಯೇ ಬೇಕಿಲ್ಲ. ನೀರನ್ನು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಈಗ ನೀವು ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ. ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ಈಗ ಏನು ಸಮಜಾಯಿಷಿ ನೀಡುತ್ತೀರಿ? ಎಂದು ಸಭೆಯಲ್ಲಿ ಬೇಸರ ವ್ಯಕ್ತಪಡಿಸಿದರು.

ರೈತರೇ ನ್ಯಾಯಾಲಯಕ್ಕೆ ಹೋಗುವುದಾದರೆ ಸರ್ಕಾರ ಯಾಕೆ ಬೇಕು?

ನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆ ಸರಿ ಅಲ್ಲ. ರೈತರೇ ನ್ಯಾಯಾಲಯಕ್ಕೆ ಹೋಗುವುದಾದರೆ ಸರ್ಕಾರ ಯಾಕೆ ಬೇಕು? ಇಷ್ಟೆಲ್ಲಾ ವ್ಯವಸ್ಥೆ ಅಗತ್ಯ ಏನಿದೆ..? ಈ ಬಗ್ಗೆ ತಪ್ಪು ತಿಳಿಯುವ ಅಗತ್ಯ ಇಲ್ಲ ಎಂದು ಕುಮಾರಸ್ವಾಮಿ ನೇರವಾಗಿ ಚಾಟಿ ಬೀಸಿದರು.

HD Kumaraswamy Reaction About Cauvery Water Release To Tamil Nadu

ಪ್ರತಿಪಕ್ಷಗಳನ್ನು ರಾಜಕೀಯ ಮಾಡಬೇಡಿ ಎಂದು ಹೇಳುತ್ತೀರಿ, ಆದರೆ ಇಂಥ ಸೂಕ್ಷ್ಮ ವಿಷಯಗಳಲ್ಲಿ ನಿಮ್ಮ ಜವಾಬ್ದಾರಿ ಏನಿದೆ? ನೆಲ ಜಲ ಭಾಷೆ ವಿಷಯದಲ್ಲಿ ರಾಜಕೀಯದ ಅಗತ್ಯ ಇಲ್ಲ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಆದರೆ, ಸರ್ಕಾರವು ಹೊಣೆಗಾರಿಕೆಯಿಂದ ವರ್ತಿಸಬೇಕು ಎಂದರು.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ನಮ್ಮ ಅಧಿಕಾರಿಗಳು ಉತ್ತಮ ರೀತಿಯಲ್ಲಿ ರಾಜ್ಯದ ಪರ ಅಭಿಪ್ರಾಯ ತಿಳಿಸಿದ್ದಾರೆ. ಜಲ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ. ಆದರೆ, ಅಲ್ಲಿ ತಮಿಳುನಾಡು ಅಧಿಕಾರಿಗಳು ಪಟ್ಟು ಹಿಡಿದು ಸಭೆಯಿಂದ ಹೊರ ನಡೆದಿದ್ದಾರೆ. ಆದರೆ, ಸರ್ವೋಚ್ಚ ನ್ಯಾಯಾಲಯಕ್ಕೆ ತಮಿಳುನಾಡು ಅರ್ಜಿ ಹಾಕಿದಾಗ ನಾವು ಅಷ್ಟೇ ವೇಗದಿಂದ ಆಕ್ಷೇಪಣಾ ಅರ್ಜಿ ಸಲ್ಲಿಸಬೇಕಿತ್ತು ಎಂದು ಕುಮಾರಸ್ವಾಮಿ ಹೇಳಿದರು.

ಈ ಹಿಂದೆ ದೇವೇಗೌಡರು ಸೇರಿದಂತೆ ಇನ್ನೂ ಹಲವರು ಮುಖ್ಯಮಂತ್ರಿಗಳಾಗಿದ್ದಾಗ ಇಂತಹ ಪರಿಸ್ಥಿತಿ ಎದುರಾದಾಗ ಅದನ್ನು ಹೇಗೆ ಎದುರಿಸಲಾಯಿತು ಎನ್ನುವುದನ್ನು ಕಾನೂನು ತಜ್ಞರ ತಂಡದ ಮುಖ್ಯಸ್ಥ ಮೋಹನ್ ಕಾತರಕಿ ಅವರು ಈ ಸಭೆಯಲ್ಲಿಯೇ ಹೇಳಿದ್ದಾರೆ. ಅದೆಲ್ಲಾ ವಿಷಯಗಳನ್ನು ಈ ಸರ್ಕಾರ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಈ ಸಭೆಯಲ್ಲಿ ಏನೇ ವಾದ ಮಾಡಿದರೂ ಕಾವೇರಿ ಪ್ರಾಧಿಕಾರ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ಪರಿಣಾಮಕಾರಿ ವಾದ ಮಂಡಿಸಬೇಕು. ಅಲ್ಲದೆ, ಈ ದಿನ ಪತ್ರಿಕೆಯೊಂದರಲ್ಲಿ ಸಂಕಷ್ಟ ಸೂತ್ರದ ಬಗ್ಗೆ ನಮ್ಮ ಅಡ್ವೋಕೇಟ್ ಜನರಲ್ ಅವರು ಒಂದು ಹೇಳಿಕೆ ನೀಡಿದ್ದಾರೆ. ಆ ಹೇಳಿಕೆ ಸರಿ ಇದೆಯಾ? ಆದರೆ, ಮೋಹನ್ ಕಾತರಕಿ ಅವರು ಇದಕ್ಕೆ ತದ್ವಿರುದ್ದವಾದ ಮಾಹಿತಿಯನ್ನು ಈ ಸಭೆಗೆ ನೀಡಿದ್ದಾರೆ. ಹಾಗಾದರೆ, ಯಾರ ಮಾಹಿತಿ ಸರಿ ಇದೆ? ನನಗೆ ತಿಳಿದಿರುವ ಮಾಹಿತಿಯಂತೆ ಸಂಕಷ್ಟ ಸಮಯದಲ್ಲಿ ನೀರನ್ನು ಹಂಚಿಕೊಳ್ಳುವ ಬಗ್ಗೆ ಯಾವುದೇ ಸೂತ್ರ, ಪರಿಹಾರ ಇಲ್ಲ ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಮತ್ತು ಕಾವೇರಿ ಪ್ರಾಧಿಕಾರಕ್ಕೆ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+