ಕೊಲ್ಲುವ ಬೆದರಿಕೆ ಪತ್ರ; ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಜನವರಿ 25 : "ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

"ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ ಜನವರಿ 29ರಿಂದ ನಿಮ್ಮಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ. ನಿಮ್ಮ ಅಂತಿಮ ಯಾತ್ರೆಗೆ ಸಿದ್ಧರಾಗಿ" ಎಂಬ ಬೆದರಿಕೆ ಇರುವ ಪತ್ರ ಜನವರಿ 23ರಂದು ನಿಜಗುಣಾನಂದ ಸ್ವಾಮಿಗಳಿಗೆ ಬಂದಿತ್ತು.

ಈ ಪತ್ರದಲ್ಲಿ ಕರ್ನಾಟಕದ ಮತ್ತು ದೇಶದ ವಿವಿಧ ಗಣ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿತ್ತು. ಒಟ್ಟು 15 ಜನರ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಹೆಸರನ್ನು ಸಹ ಸೇರಿಸಲಾಗಿತ್ತು.

ಶನಿವಾರ ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಕುರಿತು ಅವರ ಫೋಸ್ಟ್ ಹಾಕಿದ್ದಾರೆ. "ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೊಲ್ಲುವ ಸಂಚು ನಡೆಯುತ್ತಿದೆಯಂತೆ

ಕೊಲ್ಲುವ ಸಂಚು ನಡೆಯುತ್ತಿದೆಯಂತೆ

"ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?"ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬೆದರಿರುವ ಬಿಜೆಪಿ

ಬೆದರಿರುವ ಬಿಜೆಪಿ

"ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು 'ಪಾಕಿಸ್ತಾನಿ' ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ 'ಉಗ್ರ' ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ" ಎಂದು ಹೇಳಿದ್ದಾರೆ.

ಒಕ್ಕಲಿಗ ನಾಯಕತ್ವ

ಒಕ್ಕಲಿಗ ನಾಯಕತ್ವ

"ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ" ಎಂದು ಕುಮಾರಸ್ವಾಮಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಒಕ್ಕಲಿಗರ ಹೋರಾಟ

ಒಕ್ಕಲಿಗರ ಹೋರಾಟ

"ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ" ಎಂದು ಹೇಳಿದ್ದಾರೆ.

ನೀವು ಪಾಪಿಗಳು

ನೀವು ಪಾಪಿಗಳು

"ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು"

"ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ. ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+