ದುಡ್ಡು ಇದ್ದರೆ ಮಾತ್ರ ಒಳಗೆ ಬನ್ನಿ ಅಂತಾರೆ ಮಂತ್ರಿ ಚೇಲಾಗಳು: ಕುಮಾರಸ್ವಾಮಿ ಹೊಸ ಬಾಂಬ್
ಬೆಂಗಳೂರು, ಆಗಸ್ಟ್ 04:ಈ ಸರ್ಕಾರ ಗುತ್ತಿಗೆದಾರರಿಗೆ ಇಂತಿಷ್ಟು ಪರ್ಸೇಂಟೆಜ್ ನೀಡುವುದಕ್ಕೆ ಹೇಳಿದ್ದಾರಂತೆ. ಮಂತ್ರಿ, ಮಂತ್ರಿ ಚೇಲಾಗಳು ಪರ್ಸೆಂಟೇಜ್ ಕೇಳ್ತಾಯಿದ್ದಾರಂತೆ, ನಾನು ಯುರೋಪ್ ನಲ್ಲಿ ಇದ್ದಾಗಲೇ ನನಗೆ ಈ ಬಗ್ಗೆ ಮಾಹಿತಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್ ನಾಯಕರಿಗೆ, ಸರ್ಕಾರ ಅಸ್ಥಿರಗೊಳಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಕಾಂಗ್ರೆಸ್ ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ನಡೆದಿದೆ ಎನ್ನುವ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ತೆರಳಿದ ಬೆನಲ್ಲೇ ಡಿಕೆ ಶಿವಕುಮಾರ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು,ಗುರುವಾರ ತಡರಾತ್ರಿ ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿರುವ ಕುಮಾರಸ್ವಾಮಿ ಅವರು, ಮಾಧ್ಯಮಗಳ ಜೊತೆಗೆ ಮಾತನಾಡಿ, ನಾವು ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ಹೋಗಿದ್ದು. ಆದರೆ, ಸರ್ಕಾರ ಕೆಡುವಲು ಹೋಗಿದ್ದೇವೆ ಎಂಬ ರೀತಿ ಬಿಂಬಿಸಲಾಗಿದೆ. 19 ಸ್ಥಾನ ಗೆದ್ದ ನಮ್ಮ ಬಗ್ಗೆ ಎಷ್ಟು ಭಯ ಇದೆ ಎಂದು ಗೊತ್ತಾಗುತ್ತೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಿಡಿಕಾರಿದರು.

ನಾನು ವಿದೇಶದಲ್ಲಿದ್ದರೂ ಪ್ರತಿದಿನ ಬೆಳವಣಿಗೆಗಳನ್ನು ಗಮನಿಸಿದ್ದೇವೆ. ಯಾಕೆ ಅವರು ಹಿಂಗೆ ಮಾಡ್ಕೊಂಡಿದ್ದಾರೆ ಗೊತ್ತಿಲ್ಲ. ಬಹುಶಃ ಅವರಿಗೆ ಈ ಸರ್ಕಾರದ ಅವಧಿ ಬಹಳ ದಿನ ಇರಲ್ಲ ಎಂದು ಅಂದುಕೊಂಡಿರಬೇಕು. ನಮ್ಮಗಿಂತ ಜಾಸ್ತಿ ಅವರೇ ಶಾಸ್ತ್ರ ಕೇಳ್ತಾಳುತ್ತಾರೆ. ಜೋತಿಷ್ಯದವರನ್ನ ಬಹಳ ನಂಬಿರೋರು ಅವರು, ಹಲವಾರು ರೀತಿ ಕುತಂತ್ರಗಳನ್ನ ಮಾಡುತ್ತಾರೆ ಎಂದು ಕಿಡಿಕಾರಿದರು.
ಇನ್ನೂ ಆ ಜೋತಿಷ್ಯದಲ್ಲಿ ಅದರ ಕೃತಕವಾದ ಶಕ್ತಿಯನ್ನ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಆ ಕೃತಕವಾದ ಶಕ್ತಿ ಬಹುಶಃ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿ ಇರಬಹುದು. ಅದಕ್ಕಾಗಿ ಇಂತಹ ಹೇಳಿಕೆ ನೀಡಿರಬೇಕು
ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಅವರು, ಹೊರನೋಟಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುತ್ತಾರೆ. ಆದರೆ, ಕಾಂಗ್ರೆಸ್ ಸ್ವಾತಂತ್ರ್ಯ ಬಂದಾಗಿನಿಂದಲೂ ಅಧಿಕಾರ ನಡೆಸಿದೆ. ಅಂದಿನಿಂದಲೂ ವಲೂಲಿಗಾಗಿಯೇ ಕಾಂಗ್ರೆಸ್ ಪಕ್ಷ ಇದೆ. ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್ಗೆ ಅಧಿಕಾರ ನೀಡಿ ಹೋಯ್ತು. ಈಸ್ಟ್ ಇಂಡಿಯಾ ಕಂಪನಿಯ ವಸೂಲಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಕಾಂಗ್ರೆಸ್ನವರು ಭ್ರಷ್ಟಾಚಾರ ನಿಲ್ಲಿಸುತ್ತಾರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ನಾನು ವಿದೇಶದಲ್ಲಿದ್ರು ಪ್ರತಿನಿತ್ಯದ ಬೆಳವಣಿಗೆಗಳನ್ನ ಗಮನಿಸಿದ್ದೇವೆ. ಗೃಹ ಇಲಾಖೆಯಲ್ಲಿ ಯಾವ ರೀತಿ ವರ್ಗಾವಣೆ ದಂಧೆ ನಡೆಯಿತು, ಪೊಲೀಸ್ ಅಧಿಕಾರಿಗಳನ್ನ ಆ ಮಟ್ಟಿಗೆ ಬಳಸಿಕೊಂಡ್ರೆ , ಪೊಲೀಸರು ಜನ ಸಾಮಾನ್ಯರಿಗೆ ಯಾವ ಮಟ್ಟದ ರಕ್ಷಣೆ ನೀಡಬಹುದು. ಗರುಡಾ ಮಾಲ್ ಬಳಿಯ ಪೊಲೀಸ್ ಮೆಸ್ ನಲ್ಲಿ ಸಭೆ ನಡೆಯಬೇಕಿದರೆ ಯಾರು ಇದ್ದರು ಎಂದು ಪ್ರಶ್ನಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆ ಬಗ್ಗೆ ಮುಖ್ಯಮಂತ್ರಿಗಳು, ಗೃಹ ಸಚಿವರು ಚರ್ಚೆ ಮಾಡುವಾಗ ವೈಎಸ್ ವಿ ಟ್ಯಾಕ್ಸ್ ನವರು ಯಾಕೆ ಇದ್ದರು. ಅವರನ್ನ ಇಟ್ಕೊಂಡು ಚರ್ಚೆ ಮಾಡಿದ್ರೆ ಈ ಆಡಳಿತ ಎಲ್ಲಿಗೆ ಬರುತ್ತದೆ. ಈಗ 32 ಸಚಿವರನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ, ರಿಪೋರ್ಟ್ ಕಾರ್ಡ್ ಬಿಡೋದಕ್ಕೆ ಅಲ್ಲಿಗೆ ಹೋಗಿದ್ದಾರೆ. ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಬೇಕಿರೋದು ಜನತೆ ಮುಂದೆ, ಹೈಕಮಾಂಡ್ ಮುಂದಲ್ಲ ಎಂದು ಕಾಂಗ್ರೆಸ್ ಸಭೆಯ ಕುರಿತು ವಾಗ್ದಾಳಿ ನಡೆಸಿದರು.












Click it and Unblock the Notifications