'ಸರ್ಕಾರದ ವೈಫಲ್ಯದಿಂದ ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ'
ಬೆಂಗಳೂರು, ಮಾ. 14: ಕರೋನಾ ವೈರಸ್ ಗೆ ರಾಜ್ಯದಲ್ಲಿ ಮೊದಲ ಸಾವಾಗಿರುವುದು ದುರದೃಷ್ಟಕರ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಕೊರೋನಾ ವೈರಸ್ ನಿಂದ ಸಾವನ್ನಪ್ಪಿರುವುದು ದೃಢಪಟ್ಟಿರುವುದರ ಕುರಿತು ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಸರ್ಕಾರ ತಡವಾಗಿ ಈ ಮಾಹಿತಿ ನೀಡಿದೆ. ಇದು ಆರೋಗ್ಯ ಇಲಾಖೆಯ ವೈಫಲ್ಯ ಎಂದು ಆರೋಪಿಸಿದ್ದಾರೆ. ಇಲಾಖೆ ಸಭೆ ನಡೆಸಿ ನಿಯಂತ್ರಣಕ್ಕೆ ತತ್ಷಣ ಕ್ರಮ ತೆಗೆದುಕೊಳ್ಳಬೇಕು. ಪ್ರತಿದಿನ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲೂ ಕೊರೋನಾ ವೈರಸ್ ಭೀತಿ ಬಗ್ಗೆ ಚರ್ಚೆ
ಇನ್ನು ವಿಧಾನಸಭೆ ಕಲಾಪದಲ್ಲಿಯೂ ಕೊರೋನಾ ವೈರಸ್ ಕುರಿತು ಭೀತಿ ವ್ಯಕ್ತವಾಗಿದೆ. ರಾಜ್ಯದಲ್ಲಿ ಅತ್ಯಂತ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಕೊರೋನಾ ವೈರಸ್ ಕುರಿತು ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ ಪ್ರಸ್ತಾಪ ಮಾಡಿದ್ದಾರೆ. ಕೊರೋನಾಗೆ ಮೊದಲ ಬಲಿ ನಮ್ಮ ಕಲಬುರಗಿ ಜಿಲ್ಲೆಯಲ್ಲಿಯೇ ಆಗಿರೋದು ದುರದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಯಾವುದೇ ತಪಾಸಣೆ ಮಾಡಿರಲಿಲ್ಲ
ಕರೋನಾ ವೈರಸ್ ನಿಂದ ಮೃತಪಟ್ಟ ಖಾಸಿಂ ಮೊಹಮದ್ ಸಿದ್ದಕಿ ಅವರು ಮೂಲತಃ ಕಲಬುರ್ಗಿಯವರು. ಉಮ್ರಾ ತೀರ್ಥ ಯಾತ್ರೆಗೆ ತೆರಳಿದ್ದ ಅವರು ಫೆಬ್ರವರಿ 29ರಂದು ಕಲ್ಬುರ್ಗಿಗೆ ಬಂದಿದ್ದಾರೆ.
ನಂತರ ಅವರನ್ನು ಸಾಕಷ್ಟು ಜನರು ಭೇಟಿಯಾಗಿ ಉಮ್ರಾ ಯಾತ್ರೆಯ ಶುಭಕೋರಿದ್ದಾರೆ. ಮಾರ್ಚ್ 08 ರಂದು ಅವರಿಗೆ ಜ್ವರ ಕಾಣಿಸಿಕೊಂಡಿದೆ. ನಂತರ ಅವರಿಗೆ ಕರೋನಾ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಅದು ಗೊತ್ತಾದ ನಂತರ ಜಿಲ್ಲಾ ಆರೋಗ್ಯ ಇಲಾಖೆಯವರು ನಿರ್ಲಕ್ಷ್ಯತನ ತೋರಿಸಿದ್ದಾರೆ.

ಐಸೋಲೆಟ್ ಮಾಡದೆ ಹೈದ್ರಾಬಾದ್ ಗೆ ತೆರಳಲು ಬಿಟ್ಟಿದ್ದಾರೆ
ಸಿದ್ದಕಿ ಅವರಿಗೆ ರೋಗ ಲಕ್ಷಣಗಳು ಕಂಡು ಬಂದಾಗ ಅವರನ್ನು ಐಸೋಲೆಟ್ ಮಾಡದೆ ಹೈದ್ರಾಬಾದ್ ಗೆ ತೆರಳಲು ಬಿಟ್ಟಿದ್ದಾರೆ.
ಹೈದ್ರಾಬಾದ್ ನಲ್ಲೂ ಅವರು ಐದು ಆಸ್ಪತ್ರೆಗಳಿಗೆ ಎಡತಾಕಿದ್ದಾರೆ. ಐದು ದಿನಗಳಾದ ನಂತರ ಎಚ್ಚೆತ್ತುಕೊಂಡು ಜಿಲ್ಲಾ ವೈದ್ಯಾಧಿಕಾರಿಗಳು ದೂರವಾಣಿ ಕರೆ ಮಾಡಿದ್ದರು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಮೃತದೇಹವನ್ನೂ ಸರಿಯಾಗಿ ನಿರ್ಹಹಣೆ ಮಾಡಿಲ್ಲ
ಅವರ ಮೃತದೇಹವನ್ನು ತರಬೇಕಾದರೂ ಯಾವುದೇ ಮುಂಜಾಗ್ರತೆ ತೆಗೆದುಕೊಂಡಿಲ್ಲ. ಯಾರು ಬೇಕಾದರೂ ಹೋಗಿ ಅವರ ಪಾರ್ಥೀವ ಶರೀರದ ದರ್ಶನ ಮಾಡಿಕೊಂಡು ಬರಲು ಬಿಟ್ಟಿದ್ದಾರೆ. ಖಾಸಿಂ ಅವರ ಗಂಟಲ ದ್ರವವನ್ನು ಪರೀಕ್ಷೆಗೆ ತೆಗೆದುಕೊಳ್ಳುವ ಸಂದರ್ಭದಲ್ಲೂ ಕಲ್ಬುರ್ಗಿ ಜಿಲ್ಲಾ ಆರೋಗ್ಯಾಧಿಕಾರಿಗಳು ಯಾವುದೇ ಮುಂಜಾಗ್ರತೆ ತೆಗೆದುಕೊಂಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಕೊರೋನಾಗೆ ಔಷಧಿ ಇದೆಯೆಂದು ಬೋರ್ಡ್
ಮತ್ತೊಂದೆಡೆ ಮೆಡಿಕಲ್ ಶಾಪ್ ಗಳವರು ಕೊರೋನಾ ವೈರಸ್ ಗೆ ಔಷಧಿ ಇದೆ ಎಂದು ಬೋರ್ಡ್ ಹಾಕಿಕೊಂಡು 200-300ರೂ ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಡುತ್ತಿರುವ ಸುದ್ದಿ ನೋಡಿ ಜನ ಆತಂಕಿತರಾಗಿದ್ದಾರೆ. ಇದೆಲ್ಲವನ್ನು ಸರ್ಕಾರ ಗಮನಿಸಿವ ಸೂಕ್ತಕ್ರಮನಕೈಗೊಳ್ಳಬೇಕೆಂದು ಖರ್ಗೆ ಆಗ್ರಹಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications