ವಿ ಸೋಮಣ್ಣ, ಸಿಟಿ ರವಿ ಭೇಟಿಯ ಹಿಂದಿನ ಸತ್ಯ ಬಿಚ್ಚಿಟ್ಟ ಹೆಚ್ ಡಿ ಕುಮಾರಸ್ವಾಮಿ
ಹಾಸನ, ಜನವರಿ 10: ಮೈತ್ರಿಯ ವಿಷಯಕ್ಕೆ ಸಂಬಂಧಪಟ್ಟಂತೆ, 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ದೃಷ್ಟಿಯಿಂದ ಯಾರನ್ನು ಬೇಕಾದರೂ ಭೇಟಿ ಮಾಡಲು ಮುಕ್ತನಾಗಿದ್ದೇನೆ ಹಾಗಾಗಿ ಸಚಿವ ಸೋಮಣ್ಣ ಮತ್ತು ಸಿಟಿ ರವಿ ಮನೆಗೆ ಬಂದು ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಗಳವಾರ ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರಸೇವಕರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರ ಮೇಲೆ ಪ್ರಕರಣ ದಾಖಲು ವಿಚಾರದಲ್ಲಿ ಪ್ರತಿಭಟನೆ ಮಾಡಬಾರದು ಅಂತ ಇದೆಯಾ ? ಪ್ರತಿಭಟನೆ ಮಾಡುವುದು ಎಲ್ಲರ ಹಕ್ಕು. ನಮ್ಮ ದೇಶದ ಸಂವಿಧಾನ ವ್ಯವಸ್ಥೆಯಲ್ಲಿ ಯಾವುದೇ ಒಂದು ವಿಷಯಗಳನ್ನು ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ.

ಸಾರ್ವಜನಿಕರಿಗೆ ತೊಂದರೆ, ಕಾನೂನು ಬಾಹಿರವಾಗಿ ಪ್ರತಿಭಟನೆ ಮಾಡಿದ್ರೆ ಕೇಸ್ ಹಾಕಲಿ. ಈ ಸರ್ಕಾರ ನಾವು ಸಂವಿಧಾನದ ರಕ್ಷಕರು ಅಂತ ಜಾಗಟೆ ಹೊಡಿತಾರಲ್ಲ. ಈ ರೀತಿ ಕೇಸ್ ಹಾಕುವುದರಿಂದ ಯಾವ ರೀತಿ ಸಂವಿಧಾನ ರಕ್ಷಣೆ ಮಾಡ್ತಾರೆ ಎಂದು ಟೀಕಿಸಿ, ಅದ್ಯಾವ ಆಧಾರದ ಮೇಲೆ ಕೇಸ್ ಹಾಕಿದ್ದಾರೋ ಗೊತ್ತಿಲ್ಲ ಎಂದರು.
ನಿಖಿಲ್ ಕುಮಾರಸ್ವಾಮಿ ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ಎಂಪಿ ಚುನಾವಣೆಗೆ ಸ್ಪರ್ಧೆ ವಿಚಾರ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಭಕ್ತಿಯನ್ನು ತೋರಿಸಲು ಕಾರ್ಯಕ್ರಮ ಹಮ್ಮಿಕೊಂಡಿರುವುದು ಅದು ಅವರವರಿಗೆ ಬಿಟ್ಟ ವಿಚಾರ ಎಂದ ಅವರು, ಮುಂದಿನ ಚುನಾವಣೆ ದೃಷ್ಟಿಯಿಂದ, ಬಿಜೆಪಿ-ಜೆಡಿಎಸ್ ಮೈತ್ರಿ ಇದೆ. ಅದಕ್ಕೆ ಸಂಬಂಧಪಟ್ಟಂತೆ ಬಿಜೆಪಿಯಲ್ಲಿ ಇರುವ ಯಾರನ್ನು ಬೇಕಾದರೂ ಭೇಟಿ ಮಾಡಿ ಚರ್ಚೆ ಮಾಡ್ತಿನಿ.
ವಿ.ಸೋಮಣ್ಣ ದೇವೇಗೌಡರ ಭೇಟಿ ಹಾಗೂ ಸಿ.ಟಿ.ರವಿ ಕುಮಾರಸ್ವಾಮಿ ಭೇಟಿ ವಿಚಾರವಾಗಿ, ಮೈತ್ರಿಯ ವಿಷಯಕ್ಕೆ ಸಂಬಂಧಪಟ್ಟಂತೆ, 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ದೃಷ್ಟಿಯಿಂದ ಯಾರನ್ನು ಬೇಕಾದರೂ ಭೇಟಿ ಮಾಡಲು ಮುಕ್ತನಾಗಿದ್ದೇನೆ ಎಂದು ಹೇಳಿದರು.
ಮಂತ್ರಾಕ್ಷತೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೇ ನೀಡಿ, ಮಂತ್ರಾಕ್ಷತೆ ಅಕ್ಕಿಯ ಬಗ್ಗೆ ರಾಜ್ಯದ ಉಪಮುಖ್ಯಂತ್ರಿಗಳ ಬಾಲೀಶ ಹೇಳಿಕೆ ಇದೆಯಲ್ಲಾ ಅದಕ್ಕೆ ಉತ್ತರ ಕೊಡಬೇಕಾದದ್ದು ಅನಾವಶ್ಯಕ. ಅನ್ನಭಾಗ್ಯ ಅಕ್ಕಿ ಅಂತ ಹೇಳಿದ್ದಾರೆ. ಈ ಸರ್ಕಾರ ಹತ್ತು ಕೆಜಿ ಅಕ್ಕಿ ಕೊಡ್ತಿನಿ ಅಂದ್ರು, ನುಡಿದಂತೆ ನಡೆಯಬೇಕಿತ್ತು. ಈ ಕ್ಷಣದವರೆಗೂ ಅಕ್ಕಿಯನ್ನು ಕೊಡಲು ಆಗಿಲ್ಲ. ಪ್ರತಿ ತಿಂಗಳು ಹತ್ತು ಕೆಜಿ ಅಲ್ಲಿ ಎಲ್ಲಿಂದ ಕೊಟ್ಟಿದ್ದಾರೆ.

ಮೂಲ ಹೇಳುವುದಾದರೆ ಮಂತ್ರಾಕ್ಷತೆ ಮಾಡಿರುವ ಅಕ್ಕಿಯನ್ನು ಬೆಳೆದಿರುವನು ರೈತ. ಕೃಷಿಕರು ಬೆಳೆದಿರುವ ಆ ಅಕ್ಕಿಯನ್ನು ಮಂತ್ರಾಕ್ಷತೆ ಮಾಡಿ ಮನೆ ಮನೆಗೆ ಕೊಡುವ ಕಾರ್ಯಕ್ರಮ ಹಾಕಿಕೊಂಡಿದ್ದಾರೆ. ಅದರ ಬಗ್ಗೆ ಈ ರೀತಿ ಸಣ್ಣತನದಲ್ಲಿ ಮಾತನಾಡುವುದು ಅನಾವಶ್ಯಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಡ್ಯ ಸಂಸದೆ ಸುಮಲತಾ ಭೇಟಿ ವಿಚಾರವಾಗಿ ಮಾತನಾಡಿ, ಯಾರನ್ನು ಬೇಕಾದರೂ ಭೇಟಿ ಮಾಡಿ ಚರ್ಚೆ ಮಾಡ್ತಿನಿ ಅಂತ ಹೇಳಿದ್ದೀನಿ. ಸಂಬಂಧಪಟ್ಟಂತೆ ಬಿಜೆಪಿಯಲ್ಲಿ ಇರುವ ಯಾರನ್ನು ಬೇಕಾದರೂ ಭೇಟಿ ಮಾಡಿ ಚರ್ಚೆ ಮಾಡ್ತಿನಿ. ಅವರು ಬಿಜೆಪಿ ಮೆಂಬರ್ ಅಲ್ಲ ಅಂತ ಶಿಷ್ಯ ಇವತ್ತು ಹೇಳಿರಬೇಕು. ಬಿಜೆಪಿ ಮೆಂಬರ್ ಆಗಿರದಿದ್ದರೆ ಅವರನ್ನು ಭೇಟಿ ಮಾಡುವ ಅವಶ್ಯಕತೆ ಬರಲ್ಲ.
ಅವರು ಬಿಜೆಪಿಯ ಮೈತ್ರಿಯಲ್ಲಿ ಇದ್ದರೆ, ಹಿಂದಿನ ಚುನಾವಣೆಯಲ್ಲಿ ಅವರಿಗೆ ಮುಂದಿನ ಚುನಾವಣೆ ದೃಷ್ಟಿಯಿಂದ, ಬಿಜೆಪಿ-ಜೆಡಿಎಸ್ ಮೈತ್ರಿ ಇದೆ, ಬಿಜೆಪಿ ಬೆಂಬಲ ಕೊಟ್ಟಿದ್ದಾರೆ. ಅದು ಈಗ ಅವರಲ್ಲಿ ಇಲ್ಲದೆ ಇದ್ದರೆ ಭೇಟಿ ಮಾಡುವ ಅವಶ್ಯಕತೆ ಇರಲ್ಲ. 28 ಕ್ಕೆ 28 ಕ್ಷೇತ್ರದಲ್ಲಿ ಮೈತ್ರಿಯ ಅಭ್ಯರ್ಥಿಗಳು ಗೆಲ್ಲುವ ದೃಷ್ಟಿಯಿಂದ ನಾನು ಯಾರನ್ನು ಬೇಕಾದರೂ ಭೇಟಿ ಮಾಡಲು ತಯಾರಾಗಿದ್ದೇನೆ ಎಂದರು.
ರಾಮಮಂದಿರ ಉದ್ಘಾಟನೆಗೆ ಸಿಎಂ, ಡಿಸಿಎಂ ಆಹ್ವಾನ ನೀಡದಿರುವ ವಿಚಾರವಾಗಿ ಮಾತನಾಡಿ, ಈಗಾಗಲೇ ಅದಕ್ಕೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದರಲ್ಲಿ ಸರ್ಕಾರದ ಪಾತ್ರ ಏನಿಲ್ಲ, ದೇವಸ್ಥಾನ ನಿರ್ಮಾಣದ ಟ್ರಸ್ಟಿಗಳಿನೇದ್ದಾರೆ ಅವರು ತೆಗೆದುಕೊಂಡಿರುವ ನಿರ್ಧಾರ. ಎಲ್ಲ ವಿಐಪಿಗಳು ಬಂದಾಗ ಅಲ್ಲಿ ಹಿಂಸೆ ಆಗುತ್ತೆ ಅನ್ನುವ ದೃಷ್ಟಿಯಿಂದ ಅವರು ತೀರ್ಮಾನ ಮಾಡಿದ್ದಾರೆ. ಸರ್ಕಾರಕ್ಕೂ ಅದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದರು.
ಹಾಸನದಲ್ಲಿ ಎಂಪಿ ಚುನಾವಣೆಗೆ ಬಿಜೆಪಿಗೆ ಟಿಕೆಟ್ ಸಿಗಲಿದೆ ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಿ, ಅದನ್ನು ಕನ್ಸಿಡರ್ ಮಾಡೋಣ ಬನ್ನಿ. ಅವರ ಅಹವಾಲು, ಮನವಿ ಏನಿದೆ, ಅಂತಹ ಅನಿರ್ವಾಯತೆ ಬಂದರೆ ಚರ್ಚೆ ಮಾಡೋಣ. ಎರಡು ಪಕ್ಷಗಳ ನಾಯಕರು ಕುಳಿತು ಚರ್ಚೆ ಮಾಡಿದಾಗ ಅದನ್ನು ಕನ್ಸಿಡರ್ ಮಾಡಬೇಕು ಅಂದರೆ ಮಾಡೋನಂತೆ. ಆ ಟೈಂಗೆ ಹೇಳ್ತಿವಿ ಬನ್ನಿ, ಇನ್ನೂ ಸೀಟ್ ಹೊಂದಾಣಿಕೆ ಆಗಿಲ್ಲವಲ್ಲ ಎಂದು ಹೇಳಿದರು.












Click it and Unblock the Notifications