ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಭಾಷೆ ಬಗ್ಗೆ ಅವಹೇಳನ; ಗೂಗಲ್‌ ಅಸೂಕ್ಷ್ಮತೆ ಪ್ರಶ್ನಿಸಿದ ಎಚ್ಡಿಕೆ

|
Google Oneindia Kannada News

ಬೆಂಗಳೂರು, ಜೂನ್ 03: ಕನ್ನಡವನ್ನು ಕೊಳಕು ಭಾಷೆ ಎಂದು ಬಿಂಬಿಸಿದ್ದ ಗೂಗಲ್ ಸಂಸ್ಥೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಭಾಷೆ ವಿಚಾರದಲ್ಲಿ ಗೂಗಲ್ ಇಂಡಿಯಾ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ ಎಂದು ಪ್ರಶ್ನಿಸಿದ್ದಾರೆ.

ಭಾರತದ ಕೆಟ್ಟ ಭಾಷೆ ಯಾವುದು ಎಂದು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಇದರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾವಿರ ವರ್ಷಗಳ ಇತಿಹಾಸವಿರುವ ಪ್ರಾಚೀನ ಕನ್ನಡ ಭಾಷೆಗೆ ಗೂಗಲ್ ಅವಮಾನ ಮಾಡಿದೆ. ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗೂಗಲ್‌ ಇದಕ್ಕೆ ಉತ್ತರ ನೀಡಬೇಕೆಂದು ಆಗ್ರಹಿಸಿದ್ದರು.

 ಕನ್ನಡ ಕೊಳಕು ಭಾಷೆ ಎಂದು ಬಿಂಬಿಸಿದ್ದ ಗೂಗಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ ಕನ್ನಡ ಕೊಳಕು ಭಾಷೆ ಎಂದು ಬಿಂಬಿಸಿದ್ದ ಗೂಗಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

ಆನಂತರ ಎಚ್ಚೆತ್ತ ಗೂಗಲ್ ತನ್ನ ತಪ್ಪು ತಿದ್ದಿಕೊಂಡು, ಭಾರತದಲ್ಲಿ ಕೊಳಕು ಭಾಷೆ ಎಂಬುದಿಲ್ಲ. ಎಲ್ಲಾ ಭಾಷೆಗಳಿಗೆ ಗೌರವವಿದೆ. ಕನ್ನಡ ಭಾಷೆ ಕರ್ನಾಟಕದ ಹೆಮ್ಮೆ ಎಂದು ಸ್ಪಷ್ಟನೆ ನೀಡಿತ್ತು. ಈ ಕುರಿತು ಕುಮಾರಸ್ವಾಮಿಯವರು ಮಾತನಾಡಿದ್ದು, "ಇದನ್ನು ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್‌ಗೆ ಅಸಾಧ್ಯವೇ?" ಎಂದು ಪ್ರಶ್ನಿಸಿದ್ದಾರೆ.

HD Kumaraswamy Reaction To Google Showing Kannada As Ugliest Language In India

ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟದ್ದು, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ, ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲೀಟ್ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ? ಎಂದು ಕೇಳಿದ್ದಾರೆ.

ಗೂಗಲ್‌ನಲ್ಲಿ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಟೈಪ್ ಮಾಡಿದರೆ, ಕನ್ನಡ ಎಂದು ಬರುತ್ತಿತ್ತು. ಇದಕ್ಕೆ ಕಾರಣ ಸರ್ಚ್ ಮಾಡಿದಾಗ debtconsolidationsquad.com ಎಂಬ ಜಾಲತಾಣದಲ್ಲಿ ಕಂಡು ಬಂದಿದ್ದ ಲೇಖನವಾಗಿತ್ತು. ಈ ವಿಷಯ ಗುರುವಾರ ಬೆಳಕಿಗೆ ಬಂದಿದ್ದು, ಸದ್ಯ ಈ ವೆಬ್‌ಸೈಟ್‌ ಅನ್ನು ಗೂಗಲ್ ತೆಗೆದುಹಾಕಿದೆ.

Recommended Video

Rohini Sindhuri ಯಂತಹ ದುರಂಹಕಾರಿ DC ಯಾರಿಗೂ ಸಿಗೋದು ಬೇಡ | Shilpa Nag | Oneindia Kannada

ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಕನ್ನಡ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೆ ಸಹಿಸಲಾಗುವುದಿಲ್ಲ, ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಿಗೆ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್‌ಗೆ ನೋಟೀಸ್ ನೀಡಲು ಸೂಚಿಸಿದ್ದೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದರು. ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದರು.

English summary
Former CM HD Kumaraswamy reacted to google showing kannada as ugliest language in india. What he said? here is detail...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X