ಲೋಕಸಮರದಲ್ಲಿ ಗ್ಯಾರಂಟಿ ಜಟಾಪಟಿ: ಕುಮಾರಸ್ವಾಮಿ ಹೇಳಿಕೆ ಕುರಿತು ಡಿ ಕೆ ಸುರೇಶ್‌ ಏನಂದ್ರು?

ಬೆಂಗಳೂರು, ಏಪ್ರಿಲ್15‌ : ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್‌ ಹಾಗೂ ಮಹಿಳೆಯರು ಕುಮಾರಸ್ವಾಮಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತು ಸಂಸದ ಡಿ ಕೆ ಸುರೇಶ್‌ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ ಡಿ ಕುಮಾರಸ್ವಾಮಿ ಅವರು ವಿಚಲಿತರಾಗಿದ್ದು, ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನ ಎಂದು ಟೀಕಿಸಿದರು.

HD Kumaraswamy Remarks An Insult To Women Race Says DK Suresh

ಕುಮಾರಸ್ವಾಮಿ ಅವರು ಪ್ರತಿ ಹಂತದಲ್ಲೂ ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಈ ಹಿಂದೆಯೂ ಅನೇಕ ಬಾರಿ ಇಂತಹ ಹೇಳಿಕೆ ನೀಡಿದ್ದಾರೆ. ಮಹಿಳೆಯರು ಗ್ಯಾರಂಟಿ ಪಡೆಯುತ್ತಿರುವುದರನ್ನು ಬೇರೆ ರೀತಿ ವ್ಯಾಖ್ಯಾನ ಮಾಡಿರುವುದು ಮಹಿಳಾ ಕುಲಕ್ಕೆ ಮಾಡಿದ ಅಪಮಾನ. ಸ್ವಾಭಿಮಾನದ ಬದುಕು ಬದುಕಲು ನಾವು ಈ ಯೋಜನೆ ಕೊಟ್ಟಿದ್ದೇವೆ ಎಂದು ಸಂಸದ ಡಿ ಕೆ ಸುರೇಶ್‌ ಹೇಳಿದರು.

ಮಹಿಳಾ ಸಬಲೀಕರಣದ ಬಗ್ಗೆ ನಾವೆಲ್ಲರೂ ಮಾತನಾಡುತ್ತೇವೆ. ಅದಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮದ ಬಗ್ಗೆ ಇಷ್ಟು ಕೀಳಾಗಿ ಮಾತನಾಡಿರುವುದು ಎಲ್ಲರೂ ತಲೆತಗ್ಗಿಸುವ ವಿಚಾರ. ಈ ಗ್ಯಾರಂಟಿ ಯೋಜನೆ ಮಹಿಳೆಯರು ಹಾಗೂ ಅವರ ಕುಟುಂಬದ ಆರ್ಥಿಕ ವ್ಯವಸ್ಥೆಗೆ ಬದಲಾವಣೆ ತಂದಿದೆ. ಇದನ್ನು ಸಹಿಸಲಾಗದೇ ಇಂತಹ ಹೇಳಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಡಿ.ಕೆ ಸಹೋದರರು ಬೇರೆ ರಾಜ್ಯಗಳಿಗೆ ಹಣ ರವಾನಿಸುತ್ತಿದ್ದಾರೆ ಎಂಬ ಪ್ರಧಾನಿ ಮೋದಿ ಅವರ ಆರೋಪ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಮಂತ್ರಿಗಳು ಮೊದಲು ನಮ್ಮ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ನೀಡುತ್ತಿರುವ ಬಗ್ಗೆ ಮಾತನಾಡಲಿ. ಬೇರೆ ರಾಜ್ಯಗಳಿಗೆ ಯಾಕೆ ಹೆಚ್ಚು ಹಣ ನೀಡಿ ನಮಗೆ ಅನ್ಯಾಯ ಮಾಡುತ್ತಿದ್ದಾರೆ? ಕರ್ನಾಟಕಕ್ಕೆ ಅವರ ಕೊಡುಗೆ ಏನು? ನೀರಾವರಿ ವಿಚಾರದಲ್ಲಿ ಯಾವ ಸಮಸ್ಯೆ ಬಗೆಹರಿಸಿದ್ದಾರೆ? ಎಂದು ಪ್ರಶ್ನಿಸಿದರು.

ಹತ್ತು ವರ್ಷಗಳಲ್ಲಿ ಬೆಂಗಳೂರಿಗೆ ಕೊಟ್ಟಿರುವ ಕೊಡುಗೆ ಏನು? ಬೆಂಗಳೂರು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಏನು ಎಂದು ಪ್ರಧಾನಮಂತ್ರಿಗಳು ಹೇಳಬೇಕು. ಕೇವಲ ರಾಜಕೀಯ ಭಾಷಣ ಮಾಡಿ ಜನರ ದಾರಿ ತಪ್ಪಿಸುವುದು ಅಪ್ರಸ್ತುತ. ಅವರು ಮಾಧ್ಯಮಗಳ ಮೂಲಕ ಎಷ್ಟು ಸುಳ್ಳು ಹೇಳಿದ್ದಾರೆ? ಅವರ ಯಾವ ಕೆಲಸ ಮಾಡಿದ್ದಾರೆ ಎಂದು ಹೇಳಬೇಕು. ಈ ದೇಶದ ಯುವಕರನ್ನು ಹೇಗೆ ದಾರಿ ತಪ್ಪಿಸಿದ್ದೀರಿ ಎಂದು ಸಾರ್ವಜನಿಕವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಬೇರೆಯವರ ಮೇಲೆ ಸುಮ್ಮನೆ ಆರೋಪ ಮಾಡಿ ಹೋದರೆ ಪ್ರಯೋಜನವಿಲ್ಲ. ಇದನ್ನು ಜನ ನೋಡಿದ್ದಾರೆ. ಇದಕ್ಕೆ ಜನ ತಕ್ಕ ಉತ್ತರ ನೀಡುತ್ತಾರೆ" ಎಂದು ತಿಳಿಸಿದರು.

ಪಕ್ಷ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇಂದು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಗಳಿಗಿಂತ ಹೆಚ್ಚಿನ ಉತ್ಸಾಹ ಹಾಗೂ ಪ್ರೋತ್ಸಾಹ ಕಾಣಿಸುತ್ತಿದೆ. ಇಂದು ನಮ್ಮ ವಿರುದ್ಧ ನಡೆಯುತ್ತಿರುವ ಬೇರೆ ರೀತಿಯ ಪ್ರಚಾರಕ್ಕೆ ವಿರುದ್ಧವಾಗಿ ಜನ ನನಗೆ ಬೆಂಬಲ ನೀಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+