Gruha Lakshmi Scheme: 3-4 ತಿಂಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ ಹಾಕ್ತಾರೆ: ಅಚ್ಚರಿ ಹೇಳಿಕೆ ಕೊಟ್ಟ ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ, ಡಿಸೆಂಬರ್ 17: ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಸರಿಯಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ನಡುವೆ 3-4 ತಿಂಗಳ ಗೃಹ ಲಕ್ಷ್ಮಿಹಣ ಒಟ್ಟಿಗೆ ಹಾಕ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಅಚ್ಚರಿ ಹೇಳಿಕೆಯನ್ನ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ರಾಜ್ಯದಲ್ಲಿ 2008 ರೈತ ಕುಟುಂಬಗಳು ಆತ್ಯಹತ್ಯೆ ಮಾಡಿಕೊಂಡಿವೆ. ಇವರ ಬಗ್ಗೆ ಯಾರು ಗಮನ ಹರಿಸುತ್ತಿಲ್ಲ. ಇದು ಸರ್ಕಾರದ ಗ್ಯಾರಂಟಿ ಯೋಜನೆ ಕೊಡುವ ಮೂಲಕ ರೈತರ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದನ್ನ ಗಮನಿಸಬೇಕಾಗಿದೆ. ರೈತರಿಗೆ ಸಾಲವನ್ನ ಈ ಸರ್ಕಾರ ಕೊಟ್ಟಿಲ್ಲ. ಇವರು ಗೃಹ ಲಕ್ಷ್ಮಿ ಹಣವನ್ನ ಒಟ್ಟಿಗೆ ಕೊಡ್ತಾರೆ. ಚುನಾವಣೆ ಬಂದಾಗ ಒಟ್ಟಿಗೆ ಕೊಡ್ತಾರೆ. ಇದೀಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಅನಿವಾರ್ಯತೆ ಬಂದರೆ ಒಟ್ಟಿಗೆ ಕೊಡ್ತಾರೆ. ಆಗ ಜನ ನೆನಪು ಇಟ್ಟುಕೊಂಡು ಮತ ಹಾಕುತ್ತಾರೆ ಎಂದು ಒಟ್ಟಿಗೆ ಹಾಕುತ್ತಾರೆ ಎಂದು ಹೇಳಿದರು.

ಕೆಲ ತಿಂಗಳ ಹಿಂದೆ ಸುತ್ತೂರು ಕ್ಷೇತ್ರದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ನಾನು ಭಾಗಿಯಾಗಿದ್ದೆ. ಆ ಸಂದರ್ಭದಲ್ಲಿ ಶ್ರೀಗಳಲ್ಲಿ ಮನವಿ ಮಾಡಿ, ಈ ಬಾರಿ ಮಳವಳ್ಳಿಯಲ್ಲೇ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ನೆರೆವೇರಿಸಲು ಅನುಮತಿ ನೀಡಬೇಕು ಎಂದು ವಿನಂತಿಸಿದ್ದೆ. ಅದಕ್ಕೆ ಒಪ್ಪಿಗೆ ನೀಡಿದ್ದರು ಪೂಜ್ಯರು. ಬಳಿಕ ಪೂಜ್ಯರು ಮತ್ತು ನಾನು ಸೇರಿ ನವದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದೆವು. ಆಹ್ವಾನ ಮನ್ನಿಸಿ ರಾಷ್ಟ್ರಪತಿಗಳು ಮಳವಳ್ಳಿಗೆ ಆಗಮಿಸಿ ಈ ಧಾರ್ಮಿಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ. ಅದಕ್ಕಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ನಾನು ಆಭಾರಿ ಆಗಿದ್ದೇನೆ ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.
ಮಳವಳ್ಳಿ ಪ್ರಕೃತಿಮಾತೆ ಮಡಿಲಲ್ಲಿ ಇರುವ ಪುಣ್ಯಭೂಮಿ. ಇಲ್ಲಿನ ಜನರು ಕಾವೇರಿ ತಾಯಿಯ ಮಡಿಲಲ್ಲಿ ವಾಸ ಮಾಡುತ್ತಿದ್ದೀರಿ. ಇದೇ ಜಾಗದಲ್ಲಿ ಮೈಸೂರು ಮಹಾರಾಜರು ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಫಲವಾಗಿ ರಾಷ್ಟ್ರದಲ್ಲಿ ಮೊತ್ತಮೊದಲ ಜಲ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಯಾಯಿತು. ಇವತ್ತು ಇಲ್ಲಿ ನಡೆಯುತ್ತಿರುವ ಪೂಜ್ಯರ ಜಯಂತಿ ಮಹೋತ್ಸವದಲ್ಲಿ ರಾಷ್ಟ್ರಪತಿಗಳು ಭಾಗಿಯಾಗುವ ಮೂಲಕ ಮಳವಳ್ಳಿ ಪಟ್ಟಣವು ಇತಿಹಾಸದಲ್ಲಿ ಚಿರಸ್ಥಾಯಿ ಆಗಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಸುತ್ತೂರು ಕ್ಷೇತ್ರಕ್ಕೂ ನಮ್ಮ ಕುಟುಂಬಕ್ಕೂ 1962ರಿಂದಲೂ ಅವಿನಾಭಾವ ಸಂಬಂಧವಿದೆ. ಈಗಿರುವ ಪೂಜ್ಯರ ಜತೆಗೆ, ಹಿಂದಿನ ಪೂಜ್ಯರ ಕೃಪೆಯು ನಮ್ಮ ಕುಟುಂಬದ ಮೇಲೆ ಅಪಾರವಾಗಿದೆ. ದೇವೇಗೌಡರ ಆರಂಭಿಕ ರಾಜಕೀಯ ಬೆಳವಣಿಗೆಯಲ್ಲಿ ಹಿರಿಯ ಶ್ರೀಗಳು ಕೊಡುಗೆ ಅಪಾರ. ಅದಕ್ಕಾಗಿಯೇ ನಮ್ಮ ತಂದೆಯವರು ʼಸುತ್ತೂರು ಕ್ಷೇತ್ರವನ್ನು ಯಾವತ್ತೂ ಮರೆಬಾರದುʼ ಎಂದು ನನಗೆ ನೂರಾರು ಬಾರಿ ಹೇಳಿದ್ದಾರೆ. ಈ ಮಾತನ್ನು ನನ್ನ ಹೃದಯದಿಂದ ಹೇಳುತ್ತಿದ್ದೇನೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಸುತ್ತೂರು ಕ್ಷೇತ್ರವು ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಅಸಂಖ್ಯಾತ ಬಡಮಕ್ಕಳಿಗೆ ಬೆಳಕಾಗಿದೆ. ಇವತ್ತು ಶ್ರೀಮಠವು ರಾಜ್ಯ, ದೇಶ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಅಗಾಧವಾಗಿ ಬೆಳೆದಿದ್ದು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಮಾಡುತ್ತಿದೆ. ಪರಮಪೂಜ್ಯರು ಮಠದ ಪರಂಪರೆಯನ್ನು ಮುಂದುವರೆಸುತ್ತಾ ನಾಡಿಗೆ ಮಾರ್ಗದರ್ಶನ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications