ಡಿಕೆಶಿ ಮನೆಯಲ್ಲಿ ಪೋನ್‌ ಟ್ಯಾಫಿಂಗ್ ನಿಗಾ ಇಡಲು ನಿವೃತ್ತ ಪೊಲೀಸರ ನೇಮಕ: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ನಂತರ ಸದಾಶಿವನಗರದ ಮನೆಯಲ್ಲಿ ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಂಡು, ಅತ್ಯಾಧುನಿಕ ಉಪಕರಣಗಳ ಮೂಲಕ ಸಚಿವರು ಹಾಗೂ ಇತರರು ಏನು ಚರ್ಚಿಸುತ್ತಾರೆ ಎಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಸ್ಪೋಟಕ ಸಂಗತಿಯನ್ನು ಬಹಿರಂಗ ಪಡಿಸಿದ್ದಾರೆ.

ಸಚಿವರ ಮೇಲೆಯೇ ನಿಗಾ ಇಟ್ಟರೆ ಕಥೆ ಏನು?

ಸದಾಶಿವನಗರದಲ್ಲಿ ನಡೆಸಲಾಗುತ್ತಿರುವ ಫೋನ್ ಟ್ಯಾಪಿಂಗ್, ನಿಗಾ ವ್ಯವಸ್ಥೆಯ ಬಗ್ಗೆ ಪೊಲೀಸ್ ಇಲಾಖೆಯಲ್ಲೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ನನಗೆ ಬಂದಿದೆ ಎಂದು ಹೇಳಿದ ಕೇಂದ್ರ ಸಚಿವರು, ಸಿಎಂ ಆಗಿರುವ ವ್ಯಕ್ತಿ ತನ್ನ ಸ್ಥಾನ ಭದ್ರ ಮಾಡಿಕೊಳ್ಳಲು ಸ್ವಪಕ್ಷದ ಶಾಸಕರು, ಸಚಿವರ ಮೇಲೆಯೇ ನಿಗಾ ಇಟ್ಟರೆ ಕಥೆ ಏನು? ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಲು ಸಿಬಿಐ ತನಿಖೆ ಅಗತ್ಯವೆಂದು ಕುಮಾರಸ್ವಾಮಿ ಹೇಳಿದರು.

HD Kumaraswamy Retired Police Officers Appointed to Monitor Phone Tapping at D K Shivakumar s Residence

ಸಚಿವರು ಮತ್ತು ರಾಜಕೀಯ ನಾಯಕರ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ ಎಂಬುದು ಗಂಭೀರ ವಿಷಯ. ಅವರ ಚಟುವಟಿಕೆಗಳನ್ನು ಗಮನಿಸಲು ಪ್ರತ್ಯೇಕ ವ್ಯವಸ್ಥೆ ಅಥವಾ ಘಟಕವಿದೆ ಎಂಬುದು ಅಘಾತಕಾರಿ ಸಂಗತಿ. ಆದರೆ ಮುಖ್ಯಮಂತ್ರಿ ಸ್ವತಃ ಇದಕ್ಕೆ ಆದೇಶಿಸಿದ್ದಾರೆ ಎಂದು ತಾನು ಹೇಳುತ್ತಿಲ್ಲ. ಇಲಾಖೆಗಳಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತನಿಖೆಯಿಂದ ಪರಿಶೀಲಿಸಬೇಕು ಎಂದು ಸ್ಪಷ್ಟಪಡಿಸಿದರು. ತಮ್ಮ ಫೋನ್‌ ಟ್ಯಾಪ್ ಆಗಿದೆಯೇ ಎಂಬ ಪ್ರಶ್ನೆಗೆ, ತಾವು ಎಲ್ಲ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸುವುದರಿಂದ ಮರೆಮಾಚುವುದೇನೂ ಇಲ್ಲ ಎಂದು ಉತ್ತರಿಸಿದರು.

ಬಾಲಕಿಯ ಕುರಿತು ಸಲ್ಲಿಕೆಯಾದ ದೂರು ಮತ್ತು ಸ್ಟಿಂಗ್‌ ಆರೋಪ

ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆ ಎಂಬುದು ಅಕ್ಟೋಬರ್ 9ರಂದು ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ, ಬಾಲನ್ಯಾಯಕ್ಕೆ ಸಂಬಂಧಿಸಿದ ಸಮಿತಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿಗಳಿಗೆ ದೂರು ಸಲ್ಲಿಸಿದೆ ಎಂಬ ಮಾಹಿತಿಯನ್ನು ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು. ಆ ದೂರಿನಲ್ಲಿ ಹದಿನಾಲ್ಕು ವರ್ಷದ ಬಾಲಕಿ ಬಗ್ಗೆ ಮಾಹಿತಿ ಇದೆ. ಈಗ ಆ ಬಾಲಕಿ ವಯಸ್ಕಲಾಗಿದ್ದು, ಆಕೆಯನ್ನು ಪ್ರೇರೇಪಿಸಿ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂಬ ಆರೋಪವಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ. ಈ ದೂರಿನಲ್ಲಿರುವ ಆರೋಪಗಳೂ ತನಿಖೆಯಿಂದ ಪರಿಶೀಲನೆಯಾಗಬೇಕು ಎಂದು ಹೇಳಿದರು.

ನ್ಯಾಯಾಲಯದ ಮೊರೆ ಹೋಗಿಲ್ಲ

ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಪ್ರಸಾರವಾಗಿರುವುದನ್ನೂ ಪ್ರಸ್ತಾಪಿಸಿದ ಕೇಂದ್ರ ಸಚಿವರು, ಯಾವುದೇ ವಿಚಾರದಲ್ಲಿ ತಪ್ಪಿದ್ದರೆ ಅಂತಿಮವಾಗಿ ಸಂವಿಧಾನಾತ್ಮಕ ಮತ್ತು ನ್ಯಾಯಾಂಗ ಸಂಸ್ಥೆಗಳ ಮೂಲಕ ಸತ್ಯ ಹೊರಬರಬೇಕು. ನ್ಯಾಯಾಲಯದ ತೀರ್ಪಿಗೆ ತಲೆಬಾಗಬೇಕು ಎಂಬುದು ತಮ್ಮ ನಿಲುವು. ತಮ್ಮ ಕುಟುಂಬ ಕೂಡ ಇಂಥ ವಿಚಾರದಲ್ಲಿ ಸಂಕಷ್ಟಕ್ಕೆ ಸಿಲುಕಿದಾಗ ಈ ರಕ್ಷಣೆ ಪಡೆಯಲು ನ್ಯಾಯಾಲಯದ ಮೊರೆ ಹೋಗಿಲ್ಲ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಮತ್ತು ಅವರ ಕುಟುಂಬಗಳನ್ನು ಗುರಿ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ, ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದರು. ಅಲ್ಲದೆ, ಈ ಬಗ್ಗೆ ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ಮಾಡುತ್ತೇನೆ ಹಾಗೂ ಅವರಿಗೆ ದೂರನ್ನು ನೀಡುತ್ತೇನೆ ಎಂದು ಹೇಳಿದರು.

ಈ ಪ್ರಕರಣಗಳ ಹಿಂದೆ ಯಾರು ಇದ್ದಾರೆ? ಕಾರ್ಯಾಚರಣೆಗಳನ್ನು ಯಾರು ನಡೆಸಿದ್ದಾರೆ? ಯಾರ ಯಾರ ಪಾತ್ರವಿದೆ? ಎಂಬುದನ್ನು ತನಿಖೆಯಿಂದ ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆ ಅಗತ್ಯ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆಸಿರುವ ಷಡ್ಯಂತ್ರಕ್ಕೆ ಹೆದರುವ ಅಗತ್ಯವಿಲ್ಲ. ಅವರು ಈಗಿನ ಸಿದ್ದರಾಮಯ್ಯ ಆಗಿರಬಾರದು. ಅವರು ಹಿಂದಿನ ಹೋರಾಟ ಮನೋಭಾವದ ಸಿದ್ಧರಾಮಯ್ಯ ಮಾತನಾಡಬೇಕು. ಇದರ ಬಗ್ಗೆ ಮೌನ ವಹಿಸುವುದು ಸರಿಯಲ್ಲ. ನಾನೊಬ್ಬನೇ ಮಾತನಾಡಿದರೆ ಸಾಕಾಗುವುದಿಲ್ಲ ಎಂದು ಎಂದು ಕುಮಾರಸ್ವಾಮಿ ಅವರು ಹೇಳಿದರು.

HD Kumaraswamy: ರಮೇಶ್ ಜಾರಕಿಹೊಳಿ ಮುಗಿಸಿದರು

ಹಿಂದೆ ಮಾಜಿ ಮುಖ್ಯಮಂತ್ರಿ ಒಬ್ಬರ ವಿರುದ್ಧ ಸ್ಟಿಂಗ್ ಮಾಡಿದರು, ಆಮೇಲೆ ರಮೇಶ್ ಜಾರಕಿಹೊಳಿ ಅವರನ್ನು ಮುಗಿಸಿದರು, ಅದಾದ ಮೇಲೆ ಅದೇ ಸಮುದಾಯದ ಕೆ.ಎನ್.ರಾಜಣ್ಣ ಅವರನ್ನು ತೆಗೆದರು. ನಮ್ಮ ಪಕ್ಷದ ನಾಯಕನೇ ಸಿಡಿ ಪ್ಯಾಕ್ಟರಿ ನಡೆಸುತ್ತಿದ್ದಾನೆ ಎಂದು ರಾಜಣ್ಣ ಹೇಳಿದರೂ ಆಮೇಲೆ ಅವರ ಬಾಯಿ ಮುಚ್ಚಿಸಿದರು. ಈಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+