ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ ಏನೆಂದು ಹೇಳಿದ ಕುಮಾರಸ್ವಾಮಿ!

ಬೆಂಗಳೂರು, ಸೆಪ್ಟೆಂಬರ್ 24; ಕರ್ನಾಟಕ ಕಾಂಗ್ರೆಸ್‌ 2023ರ ವಿಧಾನಸಭೆ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿತು. ಅಧಿಕಾರ ಹಿಡಿದ 100 ದಿನಗಳಲ್ಲಿ 4 ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ. ಈಗ ಕಾಂಗ್ರೆಸ್‌ನ 6ನೇ ಗ್ಯಾರಂಟಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿವರ ನೀಡಿದ್ದಾರೆ.

ಭಾನುವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಟ್ವೀಟ್‌ ಮಾಡಿದ್ದಾರೆ. 'ಸರ್ವ ಜನಾಂಗದ ಶಾಂತಿಯ ತೋಟವನ್ನು ಕುಡುಕರ ತೋಟ ಮಾಡುತ್ತಿದೆ. ಗೃಹಜ್ಯೋತಿ ಎಂದ ಸರ್ಕಾರ ನಾರಿಯರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ' ಎಂದು ಸರ್ಕಾರವನ್ನು ಟೀಕಿಸಿದ್ದಾರೆ.

HD Kumaraswamy Revels Karnataka Congress 6th Guarantee

ಮನೆಮನೆಗೂ ಮದ್ಯಭಾಗ್ಯ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕವನ್ನು ಕುಡುಕರ ತೋಟವನ್ನಾಗಿ ಮಾಡಲು ಹೊರಟಿದೆ. ಅಬಕಾರಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಹಳ್ಳಿಯಲ್ಲೂ ಬಾರ್ ಮದ್ಯದ ಅಂಗಡಿ ತೆರೆಯುವುದು, ಸೂಪರ್ ಮಾರ್ಕೆಟ್‌ಗಳಲ್ಲೂ ಮದ್ಯ ಮರಾಟಕ್ಕೆ ಅವಕಾಶ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಟ್ವೀಟ್; ಎಚ್‌. ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ 'ನಾರಿಯರಿಗೆ ಶಕ್ತಿ ತುಂಬುತ್ತೇವೆ ಎಂದ ಸರ್ಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ಗೃಹಲಕ್ಷ್ಮೀ ಎಂದ ಸರ್ಕಾರ ಅವರ ಬಾಳಿಗೆ ಗ್ರಹಣವಾಗಿದೆ. ಗೃಹಜ್ಯೋತಿ ಎಂದ ಸರ್ಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ಅನ್ನಭಾಗ್ಯ ಎಂದ ಸರ್ಕಾರ, ಈಗ ಮದ್ಯಭಾಗ್ಯ ಎನ್ನುತ್ತಿದೆ' ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

'ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು!. ಕಾರಣವಿಷ್ಟೇ; ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಕುಡುಕರ ತೋಟವನ್ನಾಗಿ ಮಾಡಲಿದೆ!!. ಚುನಾವಣೆಗೆ ಮುನ್ನ ಸರ್ವ ಜನಾಂಗದ ಶಾಂತಿಯ ತೋಟ ಎನ್ನುತ್ತಿದ್ದರು, ಗೆದ್ದ ನಂತರ ಕರ್ನಾಟಕ ಕುಡುಕರ ತೋಟ ಎನ್ನುತ್ತಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಕಲ್ಪವಾಗಿದೆ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

'ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ಮದ್ಯಭಾಗ್ಯ ನೀಡಲು ಹೊರಟಿದೆ. ಸರ್ಕಾರವು ಧನಪಿಶಾಚಿ ಅವತಾರವೆತ್ತಿಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ!!' ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

'ಖೊಟ್ಟಿ ಗ್ಯಾಟಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ?' ಎಂದು ಖಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೇ ಟಾಂಗ್ ಕೊಟ್ಟಿದ್ದಾರೆ.

'3,000 ಜನಸಂಖ್ಯೆಯುಳ್ಳ ಪ್ರತಿ ಗ್ರಾಮ, ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರ್ಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರ್ಕಾರ' ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+