HD Kumaraswamy Health: ಎಚ್ ಡಿ ಕುಮಾರಸ್ವಾಮಿ ಆರೋಗ್ಯ ಸ್ಥಿತಿ ಬಗ್ಗೆ ಅಪಡೇಟ್‌

ಬೆಂಗಳೂರು, ಏಪ್ರಿಲ್‌ 23: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಓಡಾಡುತ್ತಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಜ್ವರದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಜ್ವರದಿಂದ ಬಳಲುತ್ತಿದ್ದು, ಶನಿವಾರ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಮೂಲಗಳು ತಿಳಿಸಿವೆ.

HD Kumaraswamy

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ಆರೋಗ್ಯ ಪತ್ರಿಕಾ ಹೇಳಿಕೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಬಳಲಿಕೆ ಮತ್ತು ಸಾಮಾನ್ಯ ಅಲಸ್ಯದಂತಹ ಲಕ್ಷಣಗಳು ಕಂಡು ಬಂದಿತ್ತು. ಅವರಿಗೆ ಡಾ. ಸತ್ಯನಾರಾಯಣ ಮೈಸೂರು ಅವರು ಆರೋಗ್ಯ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಎಲ್ಲಾ ಸಂಬಂಧಿತ ವೈದ್ಯಕೀಯ ಪರೀಕ್ಷೆಗಳು ಮತ್ತು ಚಿಕಿತ್ಸೆಯನ್ನು ನಡೆಸಲಾಗುತ್ತಿದೆ. ಅವರು ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಜೆಡಿಎಸ್‌ನ ಹೇಳಿಕೆ ಪ್ರಕಾರ, ರಾಜ್ಯದಾದ್ಯಂತ ಜೆಡಿಎಸ್‌ ಅಭ್ಯರ್ಥಿಗಳ ಪರ ನಿರಂತರ ಪ್ರಚಾರ ಕೈಗೊಂಡಿರುವ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಅವರ ವೈದ್ಯರು ಎಲ್ಲವನ್ನೂ ಸ್ಪಷ್ಟಪಡಿಸಿದ ನಂತರ ಅವರು ಪ್ರಚಾರವನ್ನು ಪುನರಾರಂಭಿಸುತ್ತಾರೆ ಎಂದು ತಿಳಿಸಿದೆ.

ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಆತಂಕಪಡಬೇಡಿ, ವಿಶ್ರಾಂತಿ ಪಡೆದ ನಂತರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಾಗಿ ಕುಮಾರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು ಈ ಹಿಂದೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಕುಮಾರಸ್ವಾಮಿ ಶುಕ್ರವಾರ ಹಾಸನದಲ್ಲಿ ಎಚ್‌.ಡಿ.ರೇವಣ್ಣ, ಎ.ಮಂಜು, ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜೊತೆ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಪರ ಭರ್ಜರಿ ಪ್ರಚಾರ ನಡೆಸಿದ್ದರು. ನಿನ್ನೆ ರಾಮನಗರದಲ್ಲಿ ಜೆಡಿಎಸ್‌ ಚುನಾವಣಾ ಪ್ರಚಾರ ಹಮ್ಮಿಕೊಂಡಿದ್ದರು. ಆದರೆ ಕಾರಣಾಂತರಗಳಿಂದ ರಾಮನಗರ ಪ್ರಚಾರ ರದ್ದುಗೊಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+