ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ : ಎಚ್.ಡಿ.ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು,ಡಿಸೆಂಬರ್ 12: ಕರ್ನಾಟಕದಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಭಾನುವಾದ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಒಳ ಜಗಳವಿದ್ದು, ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವರ್ಕ್ ಔಟ್ ಕರ್ನಾಟಕದಲ್ಲ ಕೆಲಸ ಮಾಡಲ್ಲ ಎಂದಿದ್ದಾರೆ.

ಇನ್ನೂ ಜನರು ಈಗಾಗಲೇ ತಮ್ಮ ಮನಸನ್ನು ಬದಲಾಯಿಸಿಕೊಂಡಿದ್ದು, ಮುಂದಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಅಂತರದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

h d Kumaraswamy said JDS only alternative for Congress and BJP in Karnataka

ಗುಜರಾತ್ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ‌ಮತ್ತು ಬಿಜೆಪಿ ಪಕ್ಷಗಳು ಯಾವೆಲ್ಲ ತಂತ್ರ ಮಾಡ್ತಾ ಇವೆ ಎನ್ನುವುದು ಗೊತ್ತಿದೆ. ಆದರೂ ಬಿಜೆಪಿ-ಕಾಂಗ್ರೆಸ್ ಪಕ್ಷಕ್ಕಿಂತ ಜೆಡಿಎಸ್ ಗ್ರಾಫ್ ಮೇಲೆ ಹೋಗುತ್ತಿದೆ. ಪಂಚರತ್ನ ಕಾರ್ಯಕ್ರಮದ ಮೂಲಕ ಅದು ಗೊತ್ತಾಗಿದೆ ಎಂದು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಆಂತರಿಕ ಸಮೀಕ್ಷೆ ನಡೆಸ್ತಾ ಇವೆ. ಪ್ರತಿ ಎರಡು ತಿಂಗಳಿಗೆ ಒಂದು ಕಾರ್ಯತಂತ್ರ ಮಾಡ್ತಾ ಇವೆ. ಬಿಜೆಪಿಯ ಆಂತರಿಕ ಸರ್ವೆ ಪ್ರಕಾರ ಜೆಡಿಎಸ್ 55 ಸ್ಥಾನ ಗೆಲ್ಲಲಿದೆ ಎನ್ನುತ್ತಿದ್ದಾರೆ. ನಾವು ಗೆಲ್ಲೋದು ಬರಿ 55 ಅಲ್ಲ. 123 ಸ್ಥಾನ ಗೆಲ್ಲುತ್ತೇವೆ. ಅವರ ಪಾಪದ ಕೊಡ ತುಂಬುತ್ತಿದೆ. ಅವರನ್ನು ಎದುರಿಸೋಕೆ ನಿಮ್ಮ ಶಕ್ತಿ ಸಾಕು. ಯಾರಾದರೂ ನಮ್ಮ ಕಾರ್ಯಕರ್ತರನ್ನು ಪೊಲೀಸರನ್ನು ಬಿಟ್ಟು ಹೆದರಿಸಿದ್ರೆ ನನ್ನ ಗಮನಕ್ಕೆ ತನ್ನಿ. ಉಳಿದಿದ್ದನ್ನು ನಾನು ನೋಡ್ಕೊತೇನೆ ಎಂದು ಅವರು ವಿರೋಧಿಗಳಿಗೆ ಎಚ್ಚರಿಕೆ ನೀಡಿದರು.

h d Kumaraswamy said JDS only alternative for Congress and BJP in Karnataka

ಇನ್ನೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮಾತನಾಡಿ, ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಕಿವಿಮಾತು ಹೇಳಿದರು.

ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು ನಡೆಯುತ್ತಿವೆ. ನಾವು ನಮ್ಮ ಪಾಡಿಗೆ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

English summary
h d Kumaraswamy said JDS only alternative for Congress and BJP in Karnataka,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X