ಶಾಲೆ ಆರಂಭಿಸುವ ಕುರಿತು ಮಾಜಿ ಸಿಎಂ ಎಚ್‌ಡಿಕೆ ಮಹತ್ವದ ಸಲಹೆ!
ಬೆಂಗಳೂರು, ಅ. 08: ಕೊರೊನಾ ವೈರಸ್ ಆತಂಕ ಇಡೀ ದೇಶದಲ್ಲಿ ಇನ್ನೂ ಕಡಿಮೆಯಾಗುತ್ತಿಲ್ಲ. ಈ ಮಧ್ಯೆ ಶಾಲೆ ಆರಂಭಿಸಲು ಸೂಚಿಸಿ ಕೇಂದ್ರ ಸರ್ಕಾರ ಮಾರ್ಗಸೂಚಿಸಿ ಬಿಡುಗಡೆ ಮಾಡಿದೆ. ಆದರೆ ಅಂತಿಮ ನಿರ್ಧಾರ ಕೈಗೊಳ್ಳುವ ಹೊಣೆಯನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಎಲ್ಲ ಶಾಸಕರಿಗೆ ಪತ್ರ ಬರೆದು ಅಭಿಪ್ರಾಯ ತಿಳಿಸುವಂತೆ ಮನವಿ ಮಾಡಿಕೊಂಡಿದೆ.
ಜೊತೆಗೆ ಆರೋಗ್ಯ ಇಲಾಖೆಗೂ ಸೂಕ್ತ ಅಭಿಪ್ರಾಯ ಕೊಡುವಂತೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಆರೋಗ್ಯ ಇಲಾಖೆಗೆ ಕೇಳಿಕೊಂಡಿದ್ದಾರೆ.
ಕೊರೊನಾ ಆತಂಕದ ಮಧ್ಯೆ ಶಾಲೆ ಆರಂಭಿಸುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೊರೊನಾ ಆತಂಕದ ನಡುವೆ ಶಾಲೆ ಆರಂಭಿಸುವುದು ಸೂಕ್ತವಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.

Recommended Video
ಸದ್ಯಕ್ಕೆ ಶಾಲಾ-ಕಾಲೇಜುಗಳ ಆರಂಭ ಬೇಡ. ಸೂಕ್ತ ಸಿದ್ಧತೆ ಇಲ್ಲದೇ ಶಾಲಾಕಾಲೇಜು ಆರಂಭಿಸಬೇಡಿ ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.












Click it and Unblock the Notifications