ಕರ್ನಾಟಕದಲ್ಲಿ 2.94 ಲಕ್ಷ ಸರ್ಕಾರಿ ಹುದ್ದೆ ಖಾಲಿ, ಬೆಂಗಳೂರು ನಗರದ 18 ಪೊಲೀಸ್ ಠಾಣೆಗಳಲ್ಲಿ ಇನ್‌ಸ್ಪೆಕ್ಟರ್‌ ಇಲ್ಲ: ಎಚ್‌ಡಿಕೆ

HD Kumaraswamy: ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರ್ಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯುವಜನರಿಗೆ ನನ್ನ ಮನವಿ ಇಷ್ಟೇ; ನಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ 2.94 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್ ಫಾಸ್ಟ್ ಆಗಿ ಭರ್ತಿ ಆಗುತ್ತಿವೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ. ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಂತೆ ರಾಜ್ಯದಲ್ಲಿ 7 ಲಕ್ಷ ನಿರುದ್ಯೋಗಿಗಳಿದ್ದಾರೆ. ಇವರೆಲ್ಲರೂ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದು, ಖಾಲಿ ಹುದ್ದೆಗಳನ್ನು ಸರಕಾರ ಹಂತ ಹಂತವಾಗಿ ಭರ್ತಿ ಮಾಡಬೇಕಿತ್ತು. ಕುರ್ಚಿ ತಿಕ್ಕಾಟದಲ್ಲಿ ಅಮೂಲ್ಯವಾದ 3 ವರ್ಷಗಳನ್ನು ಪೋಲು ಮಾಡಿದೆ. ಯುವಜನರತ್ತ ಗಮನ ಹರಿಸಲು ಈ ಸರಕಾರಕ್ಕೆ ಟೈಮಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

HD Kumaraswamy Says 2 94 Lakh Government Posts Vacant in Karnataka 18 Bengaluru Police Stations Without Inspectors

ಮುಂದುವರಿದು ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ ಎಂಬುದನ್ನು ಸರಕಾರ ಮರೆಯಬಾರದು. ಈ ಹೊತ್ತಿಗೇ ಆಡಳಿಗಾರರು ಎಚ್ಚೆತ್ತು ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇರಿಸಿ, ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ಅತಿ ಹೆಚ್ಚು ಹುದ್ದೆಗಳು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇವೆ.

ಬೆಂಗಳೂರು ನಗರದ 18 ಆಯಕಟ್ಟಿನ ಪೊಲೀಸ್‌ ಠಾಣೆಗಳಲ್ಲಿ ಇನ್‌ʼಸ್ಪೆಕ್ಟರ್‌ʼಗಳೇ ಇಲ್ಲ! ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುಳುಗಿದ್ದರ ಪರಿಣಾಮವಿದು. ಇದೆಲ್ಲವೂ ಆಡಳಿತದ ಮೇಲೆ ನೇರವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಕೂಡಲೇ ಖಾಲಿ ಹುದ್ದೆಗಳ ಭರ್ತಿ ಮಾಡುವ ನಿಟ್ಟಿನಲ್ಲಿ ಸರ್ಕಾರವು ತುರ್ತು ಕ್ರಮ ವಹಿಸಬೇಕು. ವಿಧಾನಸೌಧದ 3ನೇ ಮಹಿಡಿಯಿಂದ ಕೆಳಗಿಳಿದು ಬಂದು ಯುವಜನರ ದನಿ ಆಲಿಸಬೇಕು. ಇಲ್ಲವಾದರೆ, ಇವರ ಆಕ್ರೋಶಕ್ಕೆ ಕಾಂಗ್ರೆಸ್‌ ಸರಕಾರ ಬೆಲೆ ತೆರಬೇಕಾಗುತ್ತದೆ ಎಂದು ಎಚ್‌.ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

HD Kumaraswamy ನಿರುದ್ಯೋಗ ಕುದಿಯುವ ಜ್ವಾಲಾಮುಖಿ

ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ ಎಂಬುದನ್ನು ಸರ್ಕಾರ ಮರೆಯಬಾರದು. ಈ ಹೊತ್ತಿಗೇ ಆಡಳಿಗಾರರು ಎಚ್ಚೆತ್ತು ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇರಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ಅತಿ ಹೆಚ್ಚು ಹುದ್ದೆಗಳು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇವೆ. ಬೆಂಗಳೂರು ನಗರದ 18 ಆಯಕಟ್ಟಿನ ಪೊಲೀಸ್‌ ಠಾಣೆಗಳಲ್ಲಿ ಇನ್‌ʼಸ್ಪೆಕ್ಟರ್‌ʼಗಳೇ ಇಲ್ಲ! ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗಿದ್ದರ ಪರಿಣಾಮವಿದು ಎಂದು ಕುಮಾರಸ್ವಾಮಿ ದೂರಿದ್ದಾರೆ.

ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದು, ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+