ಮತ್ತೆ ರಾಜ್ಯ ರಾಜಕೀಯಕ್ಕೆ ರೀ ಎಂಟ್ರಿ: ಸ್ಪರ್ಧಿಸುವ ಕ್ಷೇತ್ರದ ಗುಟ್ಟು ಬಿಟ್ಟು ಕೊಟ್ಟ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಹೊತ್ತಿಕೊಂಡಿರುವ ಈ ಹೊತ್ತಲ್ಲಿ ಹೆಚ್ ಡಿ ಕುಮಾರಸ್ವಾಮಿ ಆಡಿದ ಮಾತು ಭಾರೀ ಸಂಚಲನ ಮೂಡಿಸಿದೆ. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಎಚ್.ಡಿ. ಕುಮಾರಸ್ವಾಮಿ ಅಂದ್ರೆ ಅದೊಂದು ಸಂಚಲನ. ಸದ್ಯ ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದೇ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸುತ್ತಾ ಇರ್ತಾರೆ. ಈ ನಡುವೆ ಮತ್ತೆ ರಾಜ್ಯ ರಾಜಕಾರಣಕ್ಕೆ ರೀ-ಎಂಟ್ರಿ ಆಗುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.
ನಾನು ಎಲ್ಲೇ ಹೋದರು ಸುಮ್ಮನೆ ಕೂರಲ್ಲ, ರಾಜ್ಯದ ಜನ ತೀರ್ಮಾನ ಮಾಡಿದರೆ ಮತ್ತೆ ಇಲ್ಲೇ ಇರುತ್ತೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣೀಟ್ಟಿರುವ ಹೆಚ್ ಡಿ ಕುಮಾರಸ್ವಾಮಿ ಅವರು 2028 ರ ವಿಧಾನಸಭಾ ಚುನಾವಣೆಯ ಬಗ್ಗೆ ದೆಹಲಿ ಬಿಜೆಪಿ ನಾಯಕರ ಜೊತೆಗೆ ಚುನಾವಣಾ ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಇನ್ನೂ ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಯಾವಾಗ? ಹಾಗೂ ಯಾವ ಕ್ಷೇತ್ರ ಎಂಬ ಬಗ್ಗೆ ಸುಳಿವು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಿವಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಮಾರಮ್ಮ ದೇವಿ ದೇವಾಲಯ ಉದ್ಘಾಟನೆ ನಂತರ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿ, ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ. ಮಂಡ್ಯದಿಂದ ಲೋಕಸಭೆ ಚುನಾವಣೆಗೆ ನಿಲ್ಲುವ ಉದ್ದೇಶ ಇರಲಿಲ್ಲ. ಪುಟ್ಟರಾಜು ಅವರನ್ನು ನಿಲ್ಲಿಸಬೇಕು ಎಂದುಕೊಂಡಿದ್ದೆ. ಅವತ್ತು ಅನಿವಾರ್ಯವಾಗಿ ನಾನು ಎಲೆಕ್ಷನ್ ಗೆ ನಿಂತೆ. ಸಂಸದನಾಗ್ತೀನಿ, ಕೇಂದ್ರ ಮಂತ್ರಿ ಆಗ್ತೀನಿ ಎಂದು ನನಗೆ ಗೊತ್ತಿರಲಿಲ್ಲ.
ನಮ್ಮ ಪಕ್ಷದಿಂದ ಬೇರೆ ಪಕ್ಷಕ್ಕೆ ಹೋದವರು ಜೆಡಿಎಸ್ ಕಥೆ ಮುಗಿಯಿತು ಎಂದರು. ಆದರೆ, ನಮ್ಮ ಪಕ್ಷ ಯಾವ ರೀತಿಯಲ್ಲಿ ಗಟ್ಟಿಯಾಗುತ್ತಿದೆ ಎನ್ನುವುದು ಅವರಿಗೆ ಗೊತ್ತಿಲ್ಲ. ಕೆಲವರಿಗೆ ಜೆಡಿಎಸ್ ಪಕ್ಷದ್ದೇ ಯೋಚನೆ. ನಮ್ಮ ಪಕ್ಷವನ್ನು ಮುಗಿಸಬೇಕು ಎನ್ನುವುದೇ ಅವರ ಚಿಂತೆ ಎಂದು ಅವರು ಲೇವಡಿ ಮಾಡಿದರು. ಅಲ್ಲದೇ ಮುಂದಿನ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧೆ ಮಾಡುವ ಬಗ್ಗೆ ಮೂಲಗಳು ತಿಳಿಸಿವೆ.
ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವ ಕುಮಾರಸ್ವಾಮಿ ಅವರು; ಕಾಂಗ್ರೆಸ್ ಕೆಟ್ಟ ಆಡಳಿತವನ್ನು ಕಿತ್ತೊಗೆಯಲು ಜೆಡಿಎಸ್- ಬಿಜೆಪಿ ಒಟ್ಟಾಗಿ ಹೋರಾಟ ನಡೆಸುತ್ತವೆ. ಈ ಹಿನ್ನಲೆಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ನಾವು ಮೈತ್ರಿ ಬಗ್ಗೆ ತೀರ್ಮಾನ ಮಾಡುತ್ತೇವೆ. ಸ್ಥಳೀಯ ಮಟ್ಟದಲ್ಲಿ ಪೈಪೋಟಿ ಇರುವುದು ಸಹಜ. ಎಲ್ಲಾ ಪಕ್ಷಗಳಲ್ಲಿ ಅದು ಇರುತ್ತದೆ. ಕಾರ್ಯಕರ್ತರು ಸ್ಥಾನಮಾನಕ್ಕಾಗಿ ಚರ್ಚೆ ಮಾಡುತ್ತಾರೆ. ಆ ಕುರಿತು ಅಂತಿಮವಾಗಿ ನಾವು ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಬದಲಿಗೆ ಕಳೆದ ಎರಡೂ ಮುಕ್ಕಾಲು ವರ್ಷಗಳಲ್ಲಿ ನಡೆಸಿರುವ ಅನ್ಯಾಯ, ಅಕ್ರಮಗಳನ್ನು ಮರೆಮಾಚಲು ವಿಬಿ ಜಿ ರಾಮ್ ಜಿ ಯೋಜನೆಯ ಬಗ್ಗೆ ಕಾಂಗ್ರೆಸ್ ಸರ್ಕಾರ ಅಪಪ್ರಚಾರ ಮಾಡುತ್ತಿದೆ ಎಂದು ಅವರು ದೂರಿದರು.
ಈ ಹಿಂದೆ ಕಾಂಗ್ರೆಸ್ ರಾಜ್ಯಪಾಲರುಗಳ ವಿಷಯದಲ್ಲಿ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಒಮ್ಮೆ ನೆನಪು ಮಾಡಿಕೊಂಡರೆ ಅವರ ಬಣ್ಣ ಏನೆಂದು ಗೊತ್ತಾಗುತ್ತದೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸಮಯ ಪೋಲು ಮಾಡುತ್ತಿದ್ದಾರೆ. ರಾಜ್ಯಪಾಲರು ಭಾಷಣ ಓದದಿರುವ ಅಥವಾ ಮೊಟಿಕುಗೊಳಿಸಿರುವ ಘಟನೆ ಇದೇ ಮೊದಲ ಬಾರಿ ನಡೆದಿದ್ದು ಅಲ್ಲ. ಜೆ.ಹೆಚ್. ಪಟೇಲರು ಸಿಎಂ ಆಗಿದ್ದಾಗ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಅಂದಿನ ಸಂದರ್ಭವನ್ನು ನೆನಪು ಮಾಡಿಕೊಳ್ಳಬೇಕು. ಈಗ ನೋಡಿದರೆ ಅನಗತ್ಯವಾಗಿ ವಿಧಾನಸಭೆ ಕಲಾಪದಲ್ಲಿ ಸಂಘರ್ಷ ನಡೆಯುತ್ತಿದೆ. ಈ ಸಂಘರ್ಷಗಳಿಂದ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದಾ? ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮನರೇಗಾ ವಿಷಯ ಇಟ್ಟಿಕೊಂಡು ಕೇಂದ್ರ ಸರ್ಕಾರವನ್ನು ನಿಂದಿಸುವುದು ಈ ಸರ್ಕಾರದ ಉದ್ದೇಶ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದ ಕೇಂದ್ರ ಸಚಿವರು; ಪದೇ ಪದೇ ದಲಿತರ ಹೆಸರು ಬಳಸಿ ತಮ್ಮ ಸ್ಥಾನಮಾನ ಗಟ್ಟಿಗೊಳಿಸುವ ಪ್ರಯತ್ನದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ, ವರ್ಗದ ಜನರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಇದು ದಲಿತರ ಉದ್ಧಾರವೇ? ಎಂದು ಕಿಡಿಕಾರಿದರು.
ಈ ಸರ್ಕಾರದಲ್ಲಿ ಹಲವಾರು ಅಕ್ರಮಗಳು ನಡೆದಿದೆ. ಕಾನೂನು ಬಾಹಿರ ನಿರ್ಧಾರಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳುವ ಅವಕಾಶ ಇದ್ದರೂ ರಾಜ್ಯಪಾಲರು ಬೇರೆ ರಾಜ್ಯಗಳ ರಾಜ್ಯಪಾಲರ ರೀತಿ ನಮ್ಮ ಸರ್ಕಾರದ ಜತೆ ಸಂಘರ್ಷ ಮಾಡಲಿಲ್ಲ. ಅದನ್ನು ಈ ಸರಕಾರ ಅರ್ಥ ಮಾಡಿಕೊಂಡಿಲ್ಲ. ಕೇಂದ್ರ ಸರ್ಕಾರದ ಜತೆ ರಾಜ್ಯ ಸರ್ಕಾರ ವಿಶ್ವಾಸದಲ್ಲಿ ಇಲ್ಲ. ಕೇಂದ್ರದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಪಾರದರ್ಶಕವಾಗಿ ಮಾಡಿಕೊಂಡಿಲ್ಲ. ಇವರ ತಪ್ಪಿನಿಂದ ಕೆಲ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ವಾಪಸ್ ಹೋಗಿವೆ. ಇದಕ್ಕೆ ಹೊಣೆ ಯಾರು? ಎಂದು ಅವರು ಪ್ರಶ್ನೆಸಿದರು.
ರೈತರಿಗೆ ಈ ಸರಕಾರ ಸರಣಿ ಅನ್ಯಾಯ ಮಾಡಿದೆ. ಬೆಳೆ ಬೆಳೆದ ರೈತರನ್ನ ಇವರು ಕಾಪಾಡಿದ್ದೀರಾ? ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಮಾನದಂಡದಲ್ಲಿ ಎಷ್ಟು ಬೆಳೆ ಖರೀದಿ ಮಾಡಿದ್ದೀರಿ ಎಂಬುದನ್ನು ಹೇಳಲಿ? ಮಾವಿನ ಬೆಲೆ ಕುಸಿದಾಗ ಕೇಂದ್ರ ಸರ್ಕಾರದ ಮುಂದೆ ಇವರು ಅರ್ಜಿ ಹಿಡಿದುಕೊಂಡು ಹೋಗಿದ್ದರು. ನಾನು ಸಿಎಂ ಆಗಿದ್ದಾಗ ಮಾವು ಬೆಲೆ ಕುಸಿದಾಗ ರಾಜ್ಯ ಸರ್ಕಾರದ ವತಿಯಿಂದಲೇ ಹಣ ಕೊಟ್ಟೆ. ಇವರಿಗೆ ಕೆಲಸ ಮಾಡಲು ಆಗುತ್ತಿಲ್ಲ, ಆದರೆ ಕೇಂದ್ರವನ್ನು ನಿಂದಿಸಲು ನೆಪ ಹುಡುಕುತ್ತಾರೆ ಎಂದು ಕಟುವಾಗಿ ಟೀಕಿಸಿದರು.
ಸಂಘರ್ಷಗಳಿಂದ ಸಮಸ್ಯೆ ಬಗೆಹರಿಯಲ್ಲ. ಕೇಂದ್ರದ ಜತೆ ವಿಶ್ವಾಸದಲ್ಲಿದ್ದು ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ನಾನು ಸಲಹೆ ನೀಡುತ್ತೇನೆ. ಮಾತೆತಿದ್ದರೆ ದೊಡ್ಡ ಪ್ರಮಾಣದ ಟ್ಯಾಕ್ಸ್ ಕಟ್ಟುತ್ತಿದ್ದೇವೆ ಅಂತೀರಾ? ತೆರಿಗೆ ಕಟ್ಟುವವರು ಜನರು. ರಾಜ್ಯದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆಗಳಾಗಬೇಕು. ಅದನ್ನು ಬಿಟ್ಟು ಕೇವಲ ಹೈಡ್ರಾಮಾ ನಡೆಸಿದರೆ ಏನೂ ಆಗುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ










Click it and Unblock the Notifications