ಸಿದ್ದರಾಮಯ್ಯ "ಗಣತಿ ಸುನಾಮಿಯಲ್ಲಿ ಕೊಚ್ಚಿ ಹೋಗುತ್ತೀರಿ" ಎಂದ ಎಚ್.ಡಿ ಕುಮಾರಸ್ವಾಮಿ!
ಕರ್ನಾಟಕ ಸರ್ಕಾರದ ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಗರಂ ಆಗಿದ್ದಾರೆ. ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳುಲೆಕ್ಕ ಗೊತ್ತಿದೆ. ಕಳ್ಳಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟು ಆ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಹಿಡೆನ್ ಅಜೆಂಡಾವಾಗಿದೆ. ಎಲ್ಲಾ ರಾಜ್ಯಗಳಲ್ಲಿ ಚುನಾವಣೆ ಗೆಲ್ಲಲು ಕಾಂಗ್ರೆಸ್ ಪಕ್ಷವು ಗಣತಿಯನ್ನೇ ಗುರಾಣಿ ಮಾಡಿಕೊಂಡಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ ? ಎನ್ನುವ ಸಾಲುಗಳನ್ನು ಉಲ್ಲೇಖ ಮಾಡಿ ಅವರು ಪ್ರಶ್ನೆ ಮಾಡಿದ್ದಾರೆ.

ಹೀಗೆಂದರೇನು ಸನ್ಮಾನ್ಯ ಮುಖ್ಯಮಂತ್ರಿಗಳೇ? ಕನಕದಾಸರ ಆಶಯ ಅರ್ಥಪೂರ್ಣ. ನಿಮ್ಮ ಪ್ರಾಯೋಜಿತ ಗಣತಿ ವರದಿಯ ದುರಾಶಯ ಪ್ರಶ್ನಾರ್ಹ. ಹೇಳುವುದು ಒಂದು, ಮಾಡಿದ್ದು ಇನ್ನೊಂದು ಎಂದು ಪ್ರಶ್ನೆ ಮಾಡಿದ್ದಾರೆ.
ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ..
ಎಲ್ಲರನ್ನೂ ಒಳಗೊಳ್ಳುವ ಬಸವಣ್ಣನವರ ವಚನವನ್ನು ಬರೆದುಕೊಂದ್ದೀರಿ. ಇವರು ನಮ್ಮವರಲ್ಲ, ಇವ ನಮ್ಮನಲ್ಲ..ʼ ಎಂದು ಕೃತಿಯಲ್ಲಿಯೇ ತೋರುತ್ತೀರಿ! ಬೂಟಾಟಿಕೆಗೂ ಇತಿಮಿತಿ ಬೇಡವೇ ಸಿದ್ದರಾಮಣ್ಣ.. ಅಂತ ಎಚ್.ಡಿ ಕುಮಾರಸ್ವಾಮಿ ಅವರು ಕೇಳಿದ್ದಾರೆ.
ಸಾಮಾಜಿಕ ನ್ಯಾಯ ಎಂದರೆ ನಿಮಗೆ ಬೇಡವಾದ ಸಮಾಜಗಳ ತುಚ್ಛೀಕರಣ. ಸಾಮಾಜಿಕ ನ್ಯಾಯವೆಂದರೆ ಒಂದು ನಿರ್ದಿಷ್ಟ ಸಮಾಜದ ತುಷ್ಠೀಕರಣ.
ಜಾತಿ ಸಮೀಕರಣವಲ್ಲ, ರಾಜಕೀಯ ಲಾಭಕ್ಕೆ ಜಾತಿಗಳ ಏಕೀಕರಣಕ್ಕೆ ಕೈ ಹಾಕಿದ್ದೀರಿ! ಗಣತಿಯ ಲಾಭ ನಿಮಗೋ? ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್ ಪಕ್ಷಕ್ಕೋ? ನಿಮ್ಮ ಒಳಮರ್ಮ ರಾಹುಲ್ ಗಾಂಧಿ ಅರ್ಥವಾದಂತೆ ಇಲ್ಲ, ಪಾಪ ಅಂತ ವ್ಯಂಗ್ಯವಾಡಿದ್ದಾರೆ.
ಮುಂದುವರಿದು ಹಿಂದೆ ಶ್ರೀ ವೀರೇಂದ್ರ ಪಾಟೀಲ್ ಅವರಿಗೆ ಎಸಗಿದ ಅನ್ಯಾಯಕ್ಕೆ ನಿಮ್ಮ ಪಕ್ಷ ಬೆಲೆ ತೆತ್ತಿದೆ. ನೆನಪಿಲ್ಲವೇ? ನೀವೂ, ನಿಮ್ಮ ಪಕ್ಷ ಇತಿಹಾಸದಿಂದ ಪಾಠ ಕಲಿಯುವುದಿಲ್ಲ. ತಪ್ಪು ತಿದ್ದಿ ನಡೆಯುವ ಗುಣಲಕ್ಷಣ ನಿಮಗೂ ಇಲ್ಲ, ನಿಮ್ಮ ಪಕ್ಷಕ್ಕೂ ಇಲ್ಲ. ನೆಮ್ಮದಿಯಾಗಿದ್ದ ಕರ್ನಾಟಕವನ್ನು ಕೆಣಕಿದ್ದೀರಿ. ಗಣತಿ ಸುನಾಮಿಯಲ್ಲಿ ಕೊಚ್ಚಿ ಹೋಗುತ್ತೀರಿ. ಜನರಿಗೆ ನಿಮ್ಮ ಅಸಲಿಯೆತ್ತು ಗೊತ್ತಾಗಿದೆ ಎಂದು ಹೇಳಿದ್ದಾರೆ.
ಇನ್ನು ಜಾತಿ ಗಣತಿ ವರದಿ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಬುಧವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ಜಾತಿ ಗಣತಿ ವರದಿಯು ಕೆಲವರನ್ನು ಮೆಚ್ಚಿಸುವ ಪ್ರಯತ್ನದಿಂದ ಕೂಡಿದೆ ಎಂದು ಅವರು ದೂರಿದ್ದಾರೆ. ಇನ್ನು ಜಾತಿ ಗಣತಿ ವರದಿಗೆ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯ ಸೇರಿದಂತೆ ಹಲವು ಸಮುದಾಯಗಳಿಂದ ವಿರೋಧ ವ್ಯಕ್ತವಾಗಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications