ಎಸ್‌.ಎಂ.ಕೃಷ್ಣ, ಸುಮಲತಾ ವಿರುದ್ಧ ಕುಮಾರಸ್ವಾಮಿ ಟ್ವೀಟ್

Recommended Video

      Lok Sabha Elections 2019 : ಎಸ್ ಎಂ ಕೃಷ್ಣರನ್ನ ಭೇಟಿಯಾದ ಬಿಜೆಪಿ ನಾಯಕ ಆರ್ ಅಶೋಕ | Oneindia kannada

      ಬೆಂಗಳೂರು, ಮಾರ್ಚ್ 15 : ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.

      ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಚುನಾವಣಾ ಕಣಕ್ಕಿಳಿಯಲು ಬಯಸಿದ್ದಾರೆ. ಮಾ.18ರಂದು ಅವರು ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ. ಮಂಡ್ಯದ ಕೆಲವು ಅಂಬರೀಶ್ ಅಭಿಮಾನಿಗಳು ಜೆಡಿಎಸ್‌ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

      ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರು ಶುಕ್ರವಾರ, 'ಗೌಡರ ವಂಶಪಾರಂಪರ್ಯ ರಾಜಕೀಯವನ್ನು ನಾನು ವಿರೋಧಿಸುತ್ತೇನೆ. ಮಂಡ್ಯವನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳಲು ಪ್ರಯತ್ನ ನಡೆಸಿದ್ದಾರೆ' ಎಂದು ಹೇಳಿದ್ದರು.

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುಮಲತಾ ಅಂಬರೀಶ್ ಮತ್ತು ಎಸ್.ಎಂ.ಕೃಷ್ಣ ಅವರ ಕುರಿತು ಶುಕ್ರವಾರ ಸಂಜೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಎಸ್‌.ಎಂ.ಕೃಷ್ಣ ಅವರು ಟೀಕೆ ಮಾಡುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

      ಗೌರವಯುತ ನಮಸ್ಕಾರಗಳು

      'ನೀವು ನಡೆದು ಬಂದ ಹಾದಿ ಮರೆತುಹೋಗಿದೆ ಎಂದು ಭಾವಿಸುತ್ತೇನೆ. 50 ವರ್ಷ ಕಾಲ ನೀವು ಅಧಿಕಾರದ ಬೆಣ್ಣೆಯನ್ನು ಸಾಕಷ್ಟು ಮೆದ್ದಿರಿ' ಎಂದು ಕುಮಾರಸ್ವಾಮಿ ಎಸ್‌.ಎಂ.ಕೃಷ್ಣ ವಿರುದ್ಧ ಟ್ವೀಟ್ ಮಾಡಿದ್ದಾರೆ.

      ನೈತಿಕತೆಯನ್ನು ಕಳೆದುಕೊಂಡಿದ್ದೀರಿ

      'ನೀವು ಬಿಜೆಪಿಗೆ ಕಾಲಿಟ್ಟಾಗಲೇ ಟೀಕಿಸುವ ನೈತಿಕತೆಯನ್ನು ಕಳೆದುಕೊಂಡಿದ್ದೀರಿ. ಕುಟುಂಬ ರಾಜಕಾರಣವನ್ನು ಪ್ರಶ್ನೆ ಮಾಡಿದ್ದೀರಿ. ಬಹಳ ಸಂತೋಷ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

      ಯಾರೂ ಹಿಂಬಾಗಿಲ ಪ್ರವೇಶ ಪಡೆದಿಲ್ಲ

      'ನಮ್ಮ ಕುಟುಂಬದಲ್ಲಿ ಯಾರೂ ಹಿಂಬಾಗಿಲ ಪ್ರವೇಶ ಪಡೆದಿಲ್ಲ. ಜನ ಆರಿಸಿದಾಗ ಮಾತ್ರ ಅಧಿಕಾರ ಪಡೆದಿದ್ದಾರೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

      ಮಣ್ಣಿನ ಮಕ್ಕಳು ಎಂದು ಜನ ಕರೆದರು

      'ಗೌರವಾನ್ವಿತ ಸುಮಲತಾ ಅವರೇ, ನಿಮ್ಮ ರೈತಪರ ಮಾತು ಓದಿ ಇನ್ನಿಲ್ಲದಷ್ಟು ಸಂತೋಷವಾಯಿತು. ಮಣ್ಣಿನ ಮಕ್ಕಳು ಎಂದು ಈ ದೇಶದ ಜನ ಪ್ರೀತಿಯಿಂದ ಕರೆದರು. ನಮ್ಮದು ರೈತರಿಗೆ ಮಿಡಿದ ಮನ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

      ರೈತರನ್ನು ಉದ್ಧಾರ ಮಾಡಲು ನಿಮ್ಮ ಸಲಹೆ

      'ದಿಢೀರನೆ ಪ್ರತ್ಯಕ್ಷರಾಗಿ ಪ್ರತೀ ದಿನ ಹೊಲ ಗದ್ದೆಗಳಲ್ಲಿ ದುಡಿದು, ಉತ್ತು ಬಿತ್ತಿದ ಅನುಭವ ಹಂಚಿಕೊಳ್ಳುತ್ತಿದ್ದೀರಿ. ರೈತರನ್ನು ಉದ್ಧಾರ ಮಾಡಲು ನಿಮ್ಮ ಸಲಹೆ ತುಂಬಾ ಮುಖ್ಯ ಕೇಳಲು ನಾವು ಕಾತರರಾಗಿದ್ದೇವೆ' ಎಂದು ಕುಮಾರಸ್ವಾಮಿ ಸುಮಲತಾ ಅವರನ್ನು ವ್ಯಂಗ್ಯವಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+