ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆಗೆ ಹೊಸ ದಿನ: ಚುನಾವಣಾ ಆಯೋಗದ ವಿರುದ್ಧ ಎಚ್‌ಡಿಕೆ, ಸಿದ್ದರಾಮಯ್ಯ ಕಿಡಿ

|
Google Oneindia Kannada News

Recommended Video

ಯಾಕೊ ಇವರ ನಡೆ ಅನುಮಾನ ಮೂಡುಸುತ್ತಿದೆ | Oneindia Kannada

ಬೆಂಗಳೂರು, ಸೆಪ್ಟೆಂಬರ್ 27: ಚುನಾವಣಾ ಆಯೋಗವು ಉಪ ಚುನಾವಣೆಗೆ ಹೊಸ ದಿನಾಂಕ ನಿಗದಿ ಮಾಡಿ ಶುಕ್ರವಾರ ಮತ್ತೆ ಪ್ರಕಟಣೆ ನೀಡಿದೆ. ಉಪ ಚುನಾವಣೆ ಮುಂದೂಡುವಂತೆ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದ ಮರುದಿನವೇ ದಿನಾಂಕ ಘೋಷಣೆ ಮಾಡಿದೆ.

ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯುವುದರಿಂದ ಅದು ಇತ್ಯರ್ಥ ಆಗುವವರೆಗೂ ಚುನಾವಣಾ ಆಯೋಗ ಉಪ ಚುನಾವಣೆಯನ್ನು ಘೋಷಿಸುವುದಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ ಆಯೋಗದ ದಿಢೀರ್ ನಿರ್ಧಾರ ರಾಜ್ಯದ ರಾಜಕೀಯ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಅನೇಕರು ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Breaking News ಉಪ ಚುನಾವಣೆ ದಿನ ಮರುನಿಗದಿ: ಡಿ. 5ಕ್ಕೆ ಚುನಾವಣೆBreaking News ಉಪ ಚುನಾವಣೆ ದಿನ ಮರುನಿಗದಿ: ಡಿ. 5ಕ್ಕೆ ಚುನಾವಣೆ

'ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಮೊದಲು ತರಾತುರಿಯಲ್ಲಿ ಚುನಾವಣೆ ಮುಂದೂಡಿ, ಮತ್ತೆ ದಿನಾಂಕ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ, ಆದರೆ ಆಯೋಗದ ನಡೆ ಮಾತ್ರ ಸಹಜವಾಗಿಯೇ ಅನುಮಾನ ಮೂಡುವಂತಿದೆ' ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

HD Kumaraswamy Siddaramaiah Slams Election Commission By Elections

'ರಾಜ್ಯದ 15 ಕ್ಷೇತ್ರಗಳಿಗೆ ಮತ್ತೆ ಚುನಾವಣೆ ಘೋಷಣೆಯಾಗಿದೆ. ಆದರೆ ಚುನಾವಣಾ ಪ್ರಕ್ರಿಯೆ ಬಗ್ಗೆ ಆಯೋಗಕ್ಕೇ ಸ್ಪಷ್ಟತೆ ಇಲ್ಲ. ನೀತಿ ಸಂಹಿತೆ, ಫಲಿತಾಂಶಗಳ ಬಗ್ಗೆ ಗೊಂದಲಗಳಿವೆ. ನೀತಿ ಸಂಹಿತೆ ಇಲ್ಲದೇ ನ್ಯಾಯಬದ್ಧ ಚುನಾವಣೆ ನಡೆಯುವುದು ಹೇಗೆ? ಫಲಿತಾಂಶದ ಉಲ್ಲೇಖವೇ ಇಲ್ಲದ ಮೇಲೆ ಚುನಾವಣೆ ಏಕೆ?' ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿದ ಸುಪ್ರೀಂಕೋರ್ಟ್‌15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿದ ಸುಪ್ರೀಂಕೋರ್ಟ್‌

'ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯನಿರ್ವಹಿಸುವುದರ ಹಿಂದಿನ ಅರ್ಥವೇನು? ಇಂಥ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ. ಒಂದು ಆಪರೇಷನ್ ಕಮಲ, ಜನಮನ್ನಣೆಯನ್ನು ಮಾರಿಕೊಳ್ಳುವ ಜನಪ್ರತಿನಿಧಿಗಳ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಷ್ಟೆಲ್ಲ ಅನರ್ಥಗಳನ್ನು ಸೃಷ್ಟಿಸುತ್ತದೆ ಎಂಬುದನ್ನು ಜನತೆ ಗಮನಿಸುತ್ತಿದ್ದಾರೆ' ಎಂದು ಆಯೋಗದ ನಡೆಯನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ.

ಚುನಾವಣೆಗೆ ಮಾಡಿದ ಸಿದ್ಧತೆಯೆಲ್ಲ ಈಗ ನೀರಲ್ಲಿ ಮಾಡಿದ ಹೋಮಚುನಾವಣೆಗೆ ಮಾಡಿದ ಸಿದ್ಧತೆಯೆಲ್ಲ ಈಗ ನೀರಲ್ಲಿ ಮಾಡಿದ ಹೋಮ

ಚುನಾವಣಾ ಆಯೋಗದ ನಡೆ ಬಹಳ ಗೊಂದಲಮಯ. ಆಯೋಗದ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಬಗ್ಗೆ ಪ್ರಶ್ನೆ ಮೂಡಿವೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಪಕ್ಷದ ಅಣತಿಯಂತೆ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿದೆ. ಘೋಷಣೆಯಾಗಿದ್ದ ಚುನಾವಣೆಯನ್ನು ರದ್ದು ಮಾಡಿ; ಈಗ ಮತ್ತೆ ಘೋಷಣೆ ಮಾಡಿರುವುದು ಹಲವು ಅನುಮಾನಗಳನ್ನು ಮೂಡಿಸಿದೆ ಎಂದು ಕಾಂಗ್ರೆಸ್ ಹೇಳಿದೆ.

English summary
Congress and JDS leaders criticised Election Commission's decision to schedule Karataka by elections on December 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X