HD Kumaraswamy: ಬಿಜೆಪಿ ಲೆಟರ್ ಹೆಡ್ ನಲ್ಲಿ ಕುಮಾರಸ್ವಾಮಿ ಸಹಿ! ಇದ್ಯಾವುದರ ಸುಳಿವು; ಮೈತ್ರಿ ಪಕ್ಕ ನಾ?

ಬೆಂಗಳೂರು,ಜುಲೈ 20: 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ದ ಸಿದ್ದತೆಯನ್ನ ನಡೆಸಿರುವ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಮುಂದಾಗಲಿದೆ ಎನ್ನುವ ಚರ್ಚೆಗಳು ಜೋರಾಗಿದ್ದು, ಇದೀಗ ಬಿಜೆಪಿ ಶಾಸಕಾಂಗ ಪಕ್ಷದ ಲೆಟರ್ ಹೆಡ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಹಿ ಇದೀಗ ಚರ್ಚೆಗೆ ಗ್ರಾಸವಾಗಿದೆ. ‌

ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿ ಎಸ್ ಮೈತ್ರಿ ವಿಚಾರವಾಗಿ ನಡೆಯುತ್ತಿರುವ ವದಂತಿಗಳ ನಡುವೆ ಕುಮಾರಸ್ವಾಮಿ ಅವರ ಸಹಿ ಮತ್ತಷ್ಟು ಪುಷ್ಠಿ ಕೊಟ್ಟಂತಾಗಿದೆ. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿಯ ಹತ್ತು ಶಾಸಕರನ್ನ ಅಮಾನತು ಮಾಡಿರುವುದನ್ನ ಖಂಡಿಸಿ, ಇಂದು(ಗುರುವಾರ) ರಾಜ್ಯಪಾಲರಿಗೆ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ದೂರನ್ನು‌ ನೀಡಿತ್ತು.

HD Kumaraswamy Signature

ಕಾಂಗ್ರೆಸ್‌ ಸರ್ಕಾರದ ವಿರುದ್ದ ಬುಧವಾರ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆಗೆ ಜೆಡಿಎಸ್‌ ಶಾಸಕರು ಸಾಥ್‌ ನೀಡಿದ್ರು. ಅಲ್ಲದೇ ಗುರುವಾರ ರಾಜ್ಯಪಾಲರಿಗೆ ದೂರು ನೀಡುವಾಗಲೂ ಜೆಡಿಎಸ್‌ ನಾಯಕರು ಭಾಗಿಯಾಗಿದ್ದಾರೆ. ಇತ್ತ ಬಿಜೆಪಿ ಶಾಸಕಾಂಗ ಪಕ್ಷದ ಲೆಟರ್ ಹೆಡ್ ನಲ್ಲಿ ಬಿಜೆಪಿ ನಾಯಕರು ರಾಜ್ಯಪಾಲರಿಗೆ ನೀಡಿರುವ ದೂರಿನ ಪ್ರತಿಯಲ್ಲಿ ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಿ ಇದೆ. ಬಿಜೆಪಿ ನಾಯಕರ ಸಹಿ ಜೊತೆಗೆ ಕುಮಾರಸ್ವಾಮಿ ಅವರ ಸಹಿಯೂ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಈಗಾಗಲೇ ಮೈತ್ರಿ ವಿಚಾರವಾಗಿ ಹಲವು ಬಿಜೆಪಿ ನಾಯಕರ ಜೊತೆಗೆ ಮಾತುಕತೆಯನ್ನ ನಡೆಸಿದ್ದಾರೆ ಎನ್ನಲಾಗಿದ್ದು, ಹಲವು ವದಂತಿಗಳಿಗೆ ಕಾರಣವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್‌, ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಗುರಿಯನ್ನ ಹಾಕಿಕೊಂಡಿದ್ದು, ಸಿದ್ದತೆಯನ್ನ ನಡೆಸಿದೆ. ಇತ್ತ ಕಾಂಗ್ರೆಸ್‌ ತಂತ್ರಕ್ಕೆ ಪ್ರತಿತಂತ್ರವನ್ನ ರೂಪಿಸಿರುವ ಬಿಜೆಪಿ ಈ ಬಾರೀ ಜೆಡಿಎಸ್‌ ಜೊತೆಗೆ ಮೈತ್ರಿಗೆ ಮುಂದಾಗಿದೆ ಎನ್ನಲಾಗಿದೆ.

ಇನ್ನೂ ಮೈತ್ರಿ ವಿಚಾರದ ಕುರಿತು ಇದುವರೆಗೂ ಯಾವುದೇ ಸ್ಪಷ್ಟತೆ ಕಂಡು ಬಂದಿಲ್ಲ. ಆದರೆ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ, ಜೆಡಿಎಸ್‌ ವರಷ್ಠರಾಗಿರುವ ಹೆಚ್‌ ಡಿ ದೇವೇಗೌಡರು ಒಂದು ಸುತ್ತಿನ ಮಾತುಕತೆಯನ್ನ ನಡೆಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಮುಂದಿನ ದಿನಗಳಲ್ಲಿ ಹಲವು ವಿಚಾರಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ಕೊಡುವುದಾಗಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಒಟ್ನಾಲಿ ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದರೇ 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗುವ ಮುನ್ಸೂಚನೆಯೇ ರಾಜಕೀಯ ವಲಯದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+